Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬರ’ ಬೆಳೆಹಾನಿಗೆ ಎಕರೆಗೆ 50 ಸಾವಿರ...

‘ಬರ’ ಬೆಳೆಹಾನಿಗೆ ಎಕರೆಗೆ 50 ಸಾವಿರ ರೂ.ಪರಿಹಾರ ನೀಡಬೇಕು : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ21 Sept 2026 7:28 PM IST
share
‘ಬರ’ ಬೆಳೆಹಾನಿಗೆ ಎಕರೆಗೆ 50 ಸಾವಿರ ರೂ.ಪರಿಹಾರ ನೀಡಬೇಕು : ಆರ್.ಅಶೋಕ್

ಬೆಂಗಳೂರು : ‘ಗದಗ ಸೇರಿದಂತೆ ಬರ ಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಡಲಾಗಿರುವ ಉಳಿದ ಎಲ್ಲ ಬರ ಪೀಡಿತ ತಾಲೂಕುಗಳನ್ನು ತಕ್ಷಣವೇ ಬರ ಪೀಡಿತ ಎಂದು ಘೋಷಿಸಬೇಕು. ಜತೆಗೆ ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೂ ಎಕರೆಗೆ 50 ಸಾವಿರ ರೂ.ಪರಿಹಾರ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನಿಮ್ಮದೇ ಪಕ್ಷದ ಹಿರಿಯ ಶಾಸಕರು ರಾಜೀನಾಮೆ ಬೆದರಿಕೆ ಹಾಕುವ ಸ್ಥಿತಿ ತಂದಿಟ್ಟಿರುವ ನೀವು, ಕೇವಲ ಶೋಕಿ ರಾಜಕಾರಣ ಮಾಡುವುದನ್ನು ಬಿಟ್ಟು ರೈತರ ಕಣ್ಣೀರು ಒರೆಸುವ ಕೆಲಸ ಮಾಡಿ. ರೈತರ ಹೊಟ್ಟೆಗೆ ಪದೇ ಪದೇ ಹೊಡೆಯುತ್ತಿರುವ ಈ ನಿರ್ದಯಿ ಕಾಂಗ್ರೆಸ್ ಸರಕಾರಕ್ಕೆ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ’ ಎಂದು ಎಚ್ಚರಿಸಿದ್ದಾರೆ.

‘ಸ್ವಪಕ್ಷದ ಶಾಸಕರೇ ಸರಕಾರದ ರೈತ ವಿರೋಧಿ ಧೋರಣೆಗೆ ಛೀ... ಥೂ... ಅಂತ ಉಗಿಯುತ್ತಿದ್ದಾರೆ. ಅನ್ನದಾತರನ್ನು ಭಿಕ್ಷುಕರಂತೆ ಕಾಣುತ್ತಿರುವ ಈ ಲಜ್ಜೆಗೆಟ್ಟ ಸರಕಾರದ ರೈತ ವಿರೋಧಿ ಧೋರಣೆಗೆ ಸ್ವಪಕ್ಷದ ಹಿರಿಯ ಶಾಸಕರೇ ಕನ್ನಡಿ ಹಿಡಿದಿದ್ದಾರೆ. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ, ಬೆಳೆ ಹಾನಿಯಾಗಿ ರೈತರು ಕಣ್ಣೀರು ಹಾಕುತ್ತಿದ್ದರೂ, ಈ ತಾಲೂಕನ್ನು ಬರಪೀಡಿತ ಎಂದು ಘೋಷಿಸದೆ ಕಣ್ಣಿಗೆ ಮಣ್ಣೆರಚುತ್ತಿದೆ. ಸ್ವತಃ ಹಿರಿಯ ಶಾಸಕ ಎಚ್.ಕೆ.ಪಾಟೀಲ್, ‘ಅ.10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದಿದ್ದಾರೆ ಎಂದರೆ ಈ ಲಜ್ಜೆಗೇಡಿ ಸರಕಾರ ಎಷ್ಟು ದಪ್ಪ ಚರ್ಮದ್ದು ಅಂತ ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದ್ದಾರೆ.

‘ಹೆಲಿಕಾಪ್ಟರ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಗದಗಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದ ಮೇಲೆಯೂ ಬರ ಘೋಷಣೆ ಮಾಡಲು ನಿಮಗೇನು ಅಡ್ಡಿ? ರೈತರಿಗೆ ಪರಿಹಾರ ಕೊಡಲು ನಿಮ್ಮ ಖಜಾನೆಯಲ್ಲಿ ಹಣವಿಲ್ಲವೇ ಅಥವಾ ಉತ್ತರ ಕರ್ನಾಟಕದ ರೈತರ ಎಂದರೆ ನಿಮಗಷ್ಟು ನಿರ್ಲಕ್ಷ್ಯವೇ?’ ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಸ್ವಪಕ್ಷದ ಶಾಸಕರೇ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಛೀ... ಥೂ... ಅಂತ ಉಗಿಯುತ್ತಿದ್ದಾರೆ!

ಅನ್ನದಾತರನ್ನು ಭಿಕ್ಷುಕರಂತೆ ಕಾಣುತ್ತಿರುವ ಈ ಲಜ್ಜೆಗೆಟ್ಟ @INCKarnataka ಸರ್ಕಾರದ ರೈತ ವಿರೋಧಿ ಧೋರಣೆಗೆ ಸ್ವಪಕ್ಷದ ಹಿರಿಯ ಶಾಸಕರೇ ಕನ್ನಡಿ ಹಿಡಿದಿದ್ದಾರೆ.

ಗದಗ ತಾಲೂಕಿನಲ್ಲಿ ಶೇಕಡಾ 49%ರಷ್ಟು ತೀವ್ರ ಮಳೆ ಕೊರತೆಯಾಗಿದ್ದರೂ,… pic.twitter.com/hAl7VMIQw1

— R. Ashoka (@RAshokaBJP) September 21, 2026

Tags

R. Ashoka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X