Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಖರ್ಗೆ ಹೇಳಿಕೆ ಖಂಡಿಸಿ ವಿಧಾನಸೌಧ...

ಖರ್ಗೆ ಹೇಳಿಕೆ ಖಂಡಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ಆರ್.ಅಶೋಕ್ ಸಹಿತ ಮುಖಂಡರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ26 Oct 2026 8:42 PM IST
share
ಖರ್ಗೆ ಹೇಳಿಕೆ ಖಂಡಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ಆರ್.ಅಶೋಕ್ ಸಹಿತ ಮುಖಂಡರು ಪೊಲೀಸ್ ವಶಕ್ಕೆ

ಬೆಂಗಳೂರು : ಪ್ರಧಾನಿ ಮೋದಿಯವರ ತಂದೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ ಎನ್ನಲಾದ ಹೇಳಿಕೆ ಖಂಡಿಸಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಮುಖಂಡರು-ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ಆ ಬಳಿಕ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ದಿಲ್ಲಿಯಲ್ಲಿ ದೊಡ್ಡ ಖರ್ಗೆ, ರಾಜ್ಯದಲ್ಲಿ ಮರಿ ಖರ್ಗೆ ಇಬ್ಬರೂ ಸೇರಿ ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡುತ್ತಿದ್ದಾರೆ. ಒಬ್ಬರು ಮಲ್ಲಿಕಾರ್ಜುನ ಖರ್ಗೆ, ಇನ್ನೊಬ್ಬರು ಪ್ರಿಯಾಂಕ್ ಖರ್ಗೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಅರಳು-ಮರುಳು ಶುರುವಾಗಿದೆ. ಈ ವಯಸ್ಸಲ್ಲಿ ಅವರು ದೇವರ ಜಪ ಮಾಡಿಕೊಂಡು ಇರಬೇಕಿತ್ತು ಎಂದು ಲೇವಡಿ ಮಾಡಿದರು.

ಹಿರಿಯ ರಾಜಕೀಯ ನಾಯಕರಾದ ಖರ್ಗೆ ಅವರು ಪ್ರಧಾನಿ ಮೋದಿಯವರ ಬಗ್ಗೆ ಇಷ್ಟು ಕೀಳು ಮಟ್ಟದಲ್ಲಿ ಮಾತನಾಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲ, ಎಲ್ಲ ಕಡೆ ಖಾಲಿ ಆಗಿದೆ. ನಮಗೆ ಬೈಯುವುದಕ್ಕೂ ಕಾಂಗ್ರೆಸ್ ಇಲ್ಲದ ಸ್ಥಿತಿ ನಿರ್ಮಾಣ ಆಗಿದೆ. ಖರ್ಗೆಯವರೇ ನಿಮ್ಮ ಬಾಯಿ ಯಾವಾಗ ಸ್ವಚ್ಛ ಮಾಡಿಕೊಳ್ತೀರಿ?. ಯಾವುದರಲ್ಲಿ ನಾಲಿಗೆ ತೊಳೆಯುತ್ತೀರಿ?. ನಿಮಗೆ ಗಂಜಲ, ಗೋಮೂತ್ರ ಆಗಲ್ಲ. ಹೀಗಾಗಿ ಫಿನಾಯಿಲ್‍ನಲ್ಲೇ ತೊಳೆಯಬೇಕು ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಕ್ಷಮೆ ಯಾಚಿಸಬೇಕು: ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾತನಾಡಿ, ಖರ್ಗೆಯವರು ಪ್ರಧಾನಿಯವರ ತಂದೆ ಕುರಿತು ಕೆಟ್ಟ ಭಾಷೆ ಬಳಸಿದ್ದು ಖಂಡನೀಯ. ಹತಾಶರಾದ ಖರ್ಗೆಯವರು ಕೀಳುಮಟ್ಟದ ಭಾಷೆ ಬಳಸಿದ್ದು ಆಕ್ಷೇಪಾರ್ಹ. ಖರ್ಗೆ ಅವರು ತಾಳ್ಮೆ, ಬುದ್ಧಿ, ತಮ್ಮ ಮಾತಿನ ಮೇಲೆ ನಿಯಂತ್ರಣ ಕಳೆದುಕೊಂಡು ಹತಾಶರಾಗಿ ಮಾತನಾಡಿದ್ದಾರೆ ಎಂದು ಟೀಕಿಸಿದರು.

ಜನರು ಕಾಂಗ್ರೆಸ್ ಪಕ್ಷವನ್ನು ದೇಶಾದ್ಯಂತ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ಸಿಗರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿಚಾರದಲ್ಲಿ ಗೌರವ ಇಲ್ಲ. ಅವರಿಗೆ ಅಧಿಕಾರ ಬೇಕಿದೆ. ಖರ್ಗೆಯವರು ನಕಲಿ ಗಾಂಧಿ ಕುಟುಂಬಕ್ಕೆ ನಿಷ್ಠೆ ತೋರಿಸುವವರು. ಖರ್ಗೆಯವರು ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು ಮತ್ತು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಪೊಲೀಸ್ ವಶಕ್ಕೆ: ಫ್ರೀಡಂ ಪಾರ್ಕ್‍ನಿಂದ ಪ್ರತಿಭಟನೆ ನಡೆಸಿದ ಬಳಿಕ ಬಿಜೆಪಿ ನಾಯಕರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ರಸ್ತೆಯಲ್ಲೇ ಬ್ಯಾರಿಕೇಡ್‍ಗಳನ್ನು ಅಡ್ಡ ಹಾಕಿ ತಡೆದ ಪೊಲಿಸರು, ಈ ವೇಳೆ ಆರ್.ಅಶೋಕ್, ಡಾ.ಅಶ್ವಥ್ ನಾರಾಯಣ, ಛಲವಾದಿ ನಾರಾಯಣ ಸ್ವಾಮಿ, ನಂದೀಶ್ ರೆಡ್ಡಿ ಬ್ಯಾರಿಕೇಡ್‍ಗಳ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬಿಜೆಪಿ ನಾಯಕರು, ಮುಖಂಡರು ರಸ್ತೆ ಮೇಲೆ ಕೂತು ಪ್ರತಿಭಟನೆಗೆ ಯತ್ನಿಸಿದರು. ಖರ್ಗೆಯವರನ್ನು ಕಾಂಗ್ರೆಸ್ ವಜಾ ಮಾಡಲಿ. ಇಲ್ಲವೇ ಖರ್ಗೆ ಸಾರ್ವಜನಿಕ ಕ್ಷಮೆ ಕೇಳಲಿ ಎಂದು ಆಗ್ರಹಿಸಿದರು. ಬಳಿಕ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು ಎಂದು ಗೊತ್ತಾಗಿದೆ.

Tags

R. Ashoka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X