ಹನಿಟ್ರ್ಯಾಪ್ ಯತ್ನದ ಬಗ್ಗೆ ಆದಷ್ಟು ಬೇಗ ತನಿಖೆ ನಡೆಯಲಿ : ರಾಜೇಂದ್ರ ರಾಜಣ್ಣ

ರಾಜೇಂದ್ರ ರಾಜಣ್ಣ
ಬೆಂಗಳೂರು : ನನ್ನ ಮತ್ತು ನನ್ನ ತಂದೆ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದ್ದು, ಈ ಬಗ್ಗೆ ಆದಷ್ಟು ಬೇಗ ತನಿಖೆ ನಡೆಯಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ರಾಜಣ್ಣ ಆಗ್ರಹಿಸಿದ್ದಾರೆ.
ಗುರುವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಂದೆ, ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ. ನನಗೆ ಈಗಲೂ ಕರೆಗಳು ಬರುತ್ತಿವೆ. ನನ್ನ ತಂದೆ ಮೇಲೆ ಎರಡು ಸಲ ಹನಿಟ್ರ್ಯಾಪ್ ಯತ್ನವಾಗಿದೆ. ಸರಕಾರಿ ನಿವಾಸಕ್ಕೆ ಹೋಗಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್ಗೂ ದೂರು ಕೊಡುತ್ತೇನೆ, ಆದಷ್ಟು ಬೇಗ ತನಿಖೆ ನಡೆಯಬೇಕು. ಈ ಕೃತ್ಯದಲ್ಲಿ ಯಾವ ಪಕ್ಷದವರಿದ್ದಾರೆ ಎನ್ನುವುದು ತನಿಖೆಯಿಂದ ಗೊತ್ತಾಗುತ್ತದೆ ಎಂದರು.
ಸಿಎಂಗೆ ದೂರು: ತಮ್ಮ ವಿರುದ್ಧ ಹನಿಟ್ರ್ಯಾಪ್ ರಹಸ್ಯ ಬಹಿರಂಗಪಡಿಸಿದ ಬೆನ್ನಲ್ಲೇ ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರ ರಾಜಣ್ಣ, ಗುರುವಾರ ಸಂಜೆ ವಿಧಾನಸಭೆ ಮೊಗಸಾಲೆಯಲ್ಲಿರುವ ಸಿಎಂ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ಯತ್ನ ನಡೆದಿರುವ ಬಗ್ಗೆ ದೂರು ನೀಡಿದ್ದಾರೆ.





