Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ...

ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ: ಡಿಸಿಎಂ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ17 Aug 2025 11:26 AM IST
share
ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ರಾಜೀವ್ ಗಾಂಧಿ: ಡಿಸಿಎಂ ಡಿಕೆಶಿ
ಬೆಂಗಳೂರು: 'ರನ್ ಫಾರ್ ರಾಜೀವ್' ಮ್ಯಾರಥಾನ್ ಗೆ ಚಾಲನೆ

ಬೆಂಗಳೂರು, ಆ.17: "ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ರವಿವಾರ ಏರ್ಪಡಿಸಿದ್ದ 'ರನ್ ಫಾರ್ ರಾಜೀವ್' ಮ್ಯಾರಥಾನ್ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

"ನಾನು ಕೂಡ ಚಿಕ್ಕ ವಯಸ್ಸಿನಲ್ಲಿ 10-15 ಕಿ.ಮೀ. ಓಡುತ್ತಿದ್ದೆ. ಇದೇ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ರಾಜೀವ್ ಗಾಂಧಿಯವರ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು. ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಅದಕ್ಕೆ ರಾಜೀವ್ ಗಾಂಧಿ ನಾವು 16ನೇ ವಯಸ್ಸಿಗೆ ಎಸೆಸೆಲ್ಸಿ ಪಾಸಾದ ಯುವಕರನ್ನು ದೇಶದ ಗಡಿ ಕಾಯಲು ಸೇನೆಗೆ ನೇಮಿಸುತ್ತೇವೆ. ಅದೇ ರೀತಿ ಪ್ರಜಾಪ್ರಭುತ್ವ ಕಾಯಲು ಅವರಿಗೆ ಮತದಾನದ ಹಕ್ಕು ನೀಡಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯತ್ ನಿಂದ ಪಾರ್ಲಿಮೆಂಟ್ ವರೆಗೂ ಜನಪ್ರತಿನಿಧಿಗಳು ಆಯ್ಕೆ ಆಗಬೇಕು'' ಎಂದು ಹೇಳಿದರು.

"ನಾನು ವಿದ್ಯಾರ್ಥಿಯಾಗಿದ್ದಾಗ ಎನ್ ಎಸ್ ಯುಐ ನಾಯಕನಾಗಿದ್ದೆ. ಆಗ ನಮ್ಮ ಬಳಿ ಫೋನ್ ಇರಲಿಲ್ಲ. ಲ್ಯಾಂಡ್ ಲೈನ್ ಸಂಪರ್ಕ ಪಡೆಯಲು 3-4 ವರ್ಷ ಕಾಯಬೇಕಿತ್ತು. ತಂತ್ರಜ್ಞಾನ ಕ್ರಾಂತಿ ಮೂಲಕ ಇಂದು ನಿಮ್ಮೆಲ್ಲರ ಕೈಗೆ ಮೊಬೈಲ್ ಬರುವಂತೆ ಮಾಡಿರುವುದೇ ರಾಜೀವ್ ಗಾಂಧಿ. ದೇಶದ ಐಕ್ಯ, ಸಮಗ್ರತೆ, ಶಾಂತಿಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಧೀಮಂತ ನಾಯಕರ ನೆನಪಲ್ಲಿ ನೀವು ಹೆಜ್ಜೆ ಹಾಕಲು ಬಂದಿದ್ದೀರಿ. ನಿಮಗೆ ಅಭಿನಂದನೆಗಳು" ಎಂದು ಹೇಳಿದರು.

"ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದ, ಜ್ಞಾನ ಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ ಎಂಬ ಶ್ಲೋಕದ ಆಶಯದಂತೆ ನಿಮ್ಮೆಲ್ಲರಿಗೂ ಮಂಗಳವಾಗಲಿ, ಆರೋಗ್ಯ, ಐಶ್ವರ್ಯ ನಿಮ್ಮದಾಗಲಿ ಎಂದು ಶುಭ ಹಾರೈಸುತ್ತೇನೆ" ಎಂದರು.

"ಬೆಂಗಳೂರು ಈಗ ಗ್ರೇಟರ್ ಬೆಂಗಳೂರು ಆಗಿದೆ. ಇತ್ತೀಚಿಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಬೆಂಗಳೂರಿನ ಮೂಲಕ ನೋಡಲಾಗುತ್ತಿದೆ ಎಂದರು. ಇದು ಸಾಧ್ಯವಾಗಿದ್ದು ನಿಮ್ಮೆಲ್ಲರಿಂದ" ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, "ರಾಜೀವ್ ಗಾಂಧಿಯವರ ನೆನಪಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಯುವಕರು ಭಾಗವಹಿಸಿದ್ದು, ನಮ್ಮ ಯುವ ನಾಯಕರು ಈ ಕಾರ್ಯಕ್ರಮ ಆಯೋಜಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X