ಸಿದ್ದರಾಮಯ್ಯ ವಿರುದ್ಧ 'ಸ್ಟಿಂಗ್' ವೀಡಿಯೊ ಪ್ರಕರಣ; ರಾಕೇಶ್ ಶೆಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ರಾಕೇಶ್ ಶೆಟ್ಟಿ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ತೇಜೋವಧೆ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪವರ್ ಟಿವಿ ಎಂ.ಡಿ ರಾಕೇಶ್ ಶೆಟ್ಟಿಗೆ 66 ನೇ ಸಿಸಿಎಚ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರೀಕ್ಷಣಾ ಜಾಮೀನು ಅರ್ಜಿ ಇತ್ಯರ್ಥ ಆಗುವ ಅವಧಿಯವರೆಗೂ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಒಂದು ಲಕ್ಷ ವೈಯಕ್ತಿಕ ಬಾಂಡ್, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಗಳ ನಾಶ ಮಾಡಬಾರದು, ನಿರೀಕ್ಷಣಾ ಜಾಮೀನು ಪಡೆಯಲು ವಿಫಲವಾದರೆ ಶರಣಾಗಬೇಕು ಎಂಬ ಷರತ್ತುಗಳ ಅನ್ವಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
Next Story




