Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಿವಾರ ವಿವಾದ | ಕೇಂದ್ರದ ಪರೀಕ್ಷಾ...

ಜನಿವಾರ ವಿವಾದ | ಕೇಂದ್ರದ ಪರೀಕ್ಷಾ ಪ್ರಾಧಿಕಾರಗಳ ನೀತಿ ಘಟನೆ ನಡೆಯಲು ಕಾರಣ: ರಾಮಲಿಂಗಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ21 April 2025 11:53 PM IST
share
ಜನಿವಾರ ವಿವಾದ | ಕೇಂದ್ರದ ಪರೀಕ್ಷಾ ಪ್ರಾಧಿಕಾರಗಳ ನೀತಿ ಘಟನೆ ನಡೆಯಲು ಕಾರಣ: ರಾಮಲಿಂಗಾ ರೆಡ್ಡಿ

ಬೆಂಗಳೂರು : ‘ಜನಿವಾರ’ ಪ್ರಕರಣದಂತಹ ಘಟನೆ ನಡೆಯಲು ಕೇಂದ್ರ ಸರಕಾರದ ಪರೀಕ್ಷಾ ಪ್ರಾಧಿಕಾರಗಳ ನೀತಿಗಳು ಕಾರಣ. ಹೀಗಾಗಿ, ಇಂತಹ ನೀತಿಗಳ ಸಡಿಲಿಕೆಗೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.

ಸೋಮವಾರ ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಅವರು, ‘ಸಿಇಟಿ ಪರೀಕ್ಷೆ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣ ತೀವ್ರ ಆಘಾತ ಉಂಟುಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ನಾನು ಖಂಡಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ ರಾಜಕಾರಣಮಾಡುತ್ತಾ ಸಿದ್ದರಾಮಯ್ಯ ಸರಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು, (ಕಳೆದ ಬಾರಿಯ ಕೆಎಎಸ್ ಪರೀಕ್ಷೆಯಲ್ಲಿ ನಡೆದ ಘಟನೆ) ಹಿಜಾಬ್ ತೆಗೆಸುವುದು ಒಬ್ಬ ವ್ಯಕ್ತಿಯ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಕೆಲಸ, ಖಂಡಿತ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಪರೀಕ್ಷಾ ಪ್ರಾಧಿಕಾರಗಳೇ ಮಾಡಿರುವ ಕಾನೂನು ಹಾಗೂ ವಸ್ತ್ರ ಸಂಹಿತೆ ನಿಯಮಗಳು ಭಾರತದಾದ್ಯಂತ ಅನ್ವಯವಾಗುತ್ತವೆ. ಈ ನಿಯಮಕ್ಕೂ ಸಿದ್ದರಾಮಯ್ಯ ಸರಕಾರಕ್ಕೂ ಅಥವಾ ನಿಯಮ ಪಾಲನೆ ಮಾಡಿದ ಪರೀಕ್ಷಾ ಕೇಂದ್ರದ ತಪಾಸಕರಿಗೂ ಯಾವ ರೀತಿಯ ಸಂಬಂಧ ಎಂದು ಅವರು ಪ್ರಶ್ನಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಸ್ತ್ರ ಸಂಹಿತೆ ನೀಟ್, ಸಿಇಟಿ ಪರೀಕ್ಷೆಗಳಲ್ಲಿ ನಿಷ್ಪಕ್ಷಪಾತತೆ ಮತ್ತು ಶುದ್ಧತೆಯನ್ನು ಕಾಪಾಡುವ ಉದ್ದೇಶ ಒಳಿತೆ. ಆದರೆ ಕೇಂದ್ರ ಸರಕಾರದ ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು, ರಕ್ಷಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೇಂದ್ರದ ನೀಟ್ ಪರೀಕ್ಷೆ National Testing Agency (NTA) ಮೂಲಕ ನಡೆಯುವ ಪರೀಕ್ಷೆ. ಸಿಇಟಿ ಪರೀಕ್ಷೆಯು ರಾಜ್ಯ ಮಟ್ಟದಿದ್ದರೂ, ತಂತ್ರಜ್ಞಾನ ಮೂಲಕದ ನಕಲು ತಡೆಗೆ ಕೇಂದ್ರದ ಮಾರ್ಗಸೂಚಿಗಳನ್ನು ರಾಜ್ಯದ ಎಲ್ಲ ಶಿಕ್ಷಣ ಇಲಾಖೆಯೂ ಅನುಸರಿಸುತ್ತದೆ. ಪರೀಕ್ಷೆಗೆ ಉದ್ದ ಅಂಗಿ, ಜಾಕೆಟ್, ಕೋಟ್, ಕೈದಾರ, ಜನಿವಾರ, ಬೂಟ್, ಕೈಗೆ ಯಾವುದೇ ದಾರ, ವಾಚು, ದಪ್ಪ/ ಅತಿಯಾದ ಮೇಕಪ್, ಗಟ್ಟಿ ಅಲಂಕಾರ, ದುಪ್ಪಟ, ಚೈನ್, ಕಿವಿಗೆಜ್ಜೆ, ಸರ, ಉಂಗುರ ಎಲ್ಲ್ಲ ಆಭರಣಗಳ ಧಾರಣೆ, ಮುಚ್ಚಿದ ಪಾದರಕ್ಷೆ ನಿಷಿದ್ಧ ಎಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ ಅನ್ವಯ, ಧಾರ್ಮಿಕ ಆಚರಣೆಗೆ ಹಕ್ಕಿದೆ ಆದರೆ ಪರೀಕ್ಷಾ ಕೇಂದ್ರದ ಭದ್ರತೆ ತಪಾಸಣೆಯ ನಂತರ ಮಾತ್ರ ಧರಿಸಲು ಅನುಮತಿ ಇದೆ. ‘ಪರೀಕ್ಷೆಯಲ್ಲಿ ಶುದ್ಧತೆಯನ್ನು ಕಾಪಾಡುವುದು ಪ್ರಧಾನ, ಆದರೆ ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಲಕ್ಷಿಸಬಾರದು’ ಎಂಬ ಸಮತೋಲನದ ತೀರ್ಪನ್ನು ನ್ಯಾಯಾಲಯಗಳು ನೀಡಿವೆ. ಆದ್ದರಿಂದ ತಮ್ಮ ಇಲಾಖೆ ವತಿಯಿಂದ ಕೇಂದ್ರ ಸರಕಾರಕ್ಕೆ ಪತ್ರ ಬರೆದು, ಪರೀಕ್ಷಾ ಮಾರ್ಗಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ ಮಾಡುವಂತೆ ಕೋರುವ ಸಂಬಂಧ ಮುಂದಿನ ಕ್ರಮವಹಿಸಬೇಕು ಎಂದು ರಾಮಲಿಂಗಾರೆಡ್ಡಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X