Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ತಾಂತ್ರಿಕ ತೊಂದರೆಗಳಿಂದ ರಸ್ತೆ ಅಪಘಾತ |...

ತಾಂತ್ರಿಕ ತೊಂದರೆಗಳಿಂದ ರಸ್ತೆ ಅಪಘಾತ | ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ರಾಮಲಿಂಗಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ12 May 2025 9:09 PM IST
share
ತಾಂತ್ರಿಕ ತೊಂದರೆಗಳಿಂದ ರಸ್ತೆ ಅಪಘಾತ | ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ: ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಸರಕಾರಿ ಸಾರಿಗೆ ನಿಗಮಗಳ ಬಸ್ ಅಪಘಾತಗಳು ಅಧಿಕವಾಗುತ್ತಿದ್ದು, ತಾಂತ್ರಿಕ ತೊಂದರೆಗಳಿಂದ ಅಪಘಾತ ಉಂಟಾದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ನಿರ್ವಾಹಕರಿಗೆ ನೇಮಕಾತಿ ಆದೇಶ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಬಗ್ಗೆ ಅವಲೋಕಿಸಿದಾಗ, ಭಾರತ ಮೊದಲ ಸ್ಥಾನದಲ್ಲಿದೆ. ಅದನ್ನು ತಡೆಗಟ್ಟಲು ನಮ್ಮ ಸಾರಿಗೆ ಇಲಾಖೆಯಿಂದ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದರು.

ಕೆಲ ಸಂದರ್ಭಗಳಲ್ಲಿ ಬಸ್ಸುಗಳ ಅಪಘಾತಕ್ಕೆ ಬಸ್ಸುಗಳ ಸ್ಥಿತಿಗತಿಗಳು, ತಾಂತ್ರಿಕ ದೋಷಗಳು ಕಾರಣವಿರಬಹುದು. ಆ ನಿಟ್ಟಿನಲ್ಲಿಯೂ ನಾವು ಗಮನವಹಿಸಬೇಕಾಗಿದ್ದು, ಅಪಘಾತಕ್ಕೆ ತಾಂತ್ರಿಕ ಇಲಾಖೆಯ ಅಧಿಕಾರಿಗಳು, ಮೇಲ್ವಿಚಾರಕ ಸಿಬ್ಬಂದಿಗಳ ಅಜಾಗರೂಕತೆ, ನಿರ್ಲಕ್ಷತೆ ಕಾರಣವಾಗಿರುತ್ತದೆ ಎಂದು ಅವರು ತಿಳಿಸಿದರು.

ತಾಂತ್ರಿಕ ತೊಂದರೆಗಳಿಗೆ ಇನ್ನು ಮುಂದೆ, ಚಾಲನಾ ಸಿಬ್ಬಂದಿಗಳ ಬದಲಾಗಿ ತಾಂತ್ರಿಕ ಇಲಾಖೆಯ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಘಟಕ ವ್ಯವಸ್ಥಾಪಕರುಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

ಇನ್ನು ಮುಂದೆ ಅಪಘಾತಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೆ ಅನ್ಯ ಮಾರ್ಗವಿಲ್ಲದಂತಾಗಿದೆ. ಅಪಘಾತಗಳನ್ನು ತಗ್ಗಿಸಲು ಕಠಿಣ ಕ್ರಮಗಳನ್ನು ಕೆಲವೊಮ್ಮೆ ಜಾರಿಗೊಳಿಸುವುದು ಪ್ರಯಾಣಿಕರ ಹಿತದೃಷ್ಟಿಯಿಂದ ಅಗತ್ಯವಾಗಿರುತ್ತದೆ. ಅಪಘಾತಗಳು ಆಕಸ್ಮಿಕವೇ ಆದರೂ, ಅದನ್ನು ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ತೆಗದುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

2018 ರಿಂದ ಇಲ್ಲಿಯವರೆಗೂ ಬಿಎಂಟಿಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ. ಸರಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವಾಗಿರುತ್ತದೆ. ನಮ್ಮ ಸರಕಾರ ಬಂದ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದರು.

ಕಳೆದ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4,700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಉಳಿದ 4,300 ನೇಮಕಾತಿಗಳು ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಸರಕಾರಿ/ ಖಾಸಗಿವಲಯಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತು ಹುದ್ದೆ ಕಡಿತ ಜಾರಿಯಲ್ಲಿರುವಾಗ 10 ಸಾವಿರ ನೇಮಕಾತಿ ಪಾರದರ್ಶಕವಾಗಿ ನಡೆಸಿ ಉದ್ಯೋಗ ನೀಡಲಾಗಿದೆ. ನಮ್ಮ ಸರಕಾರವು ನುಡಿದಂತೆ ನಡೆಯುವ ಸರಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಅವರು ತಿಳಿಸಿದೆ.

ಇದೇ ವೇಳೆ 2,286 ಮಂದಿ ಬಿಎಂಟಿಸಿ ನಿರ್ವಾಹಕರಿಗೆ ನೇಮಕಾತಿ ಆದೇಶವನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X