Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ...

ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ18 May 2025 6:43 PM IST
share
ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ: ರಾಮಲಿಂಗಾರೆಡ್ಡಿ

ರಾಮನಗರ : ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸುಗಳನ್ನು ದಾಖಲಿಸಬೇಕು. ತಪ್ಪಿತಸ್ತರಿಗೆ ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದಾಗ, ಮುಂದೆ ಈ ರೀತಿಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲೆಯಲ್ಲಿ ಈ ರೀತಿಯ ಒಟ್ಟು 11 ಪ್ರಕರಣಗಳು ದಾಖಲಾಗಿವೆ, 9 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಎರಡು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ ಎಂದರು.

ಬಿಡದಿ ಬಳಿ ಇತ್ತೀಚಿಗೆ ಜರುಗಿದ ದುರ್ಘಟನೆಯಂತಹ ಪ್ರಕರಣಗಳು ವರದಿಯಾದಾಗ ಪೊಲೀಸರು ಅಗತ್ಯ ಕ್ರಮ ಕೈಗೊಂಡು ಆ ಘಟನೆಯ ನೈಜ ವಿಚಾರ ಏನೆಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು, ಈ ರೀತಿಯ ಪ್ರಕರಣಗಳು ಸೇರಿದಂತೆ ಯಾವುದೇ ರೀತಿಯ ದುರ್ಘಟನೆಗಳು ಜಿಲ್ಲೆಯಲ್ಲಿ ನಡೆಯದಂತೆ ಎಚ್ಚರವಹಿಸಬೇಕು ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಮುಂಬರುವ ಮಳೆಗಾಲದಲ್ಲಿ ಯಾವುದೇ ರೀತಿಯ ದುರ್ಘಟನೆಗಳು ಆಗದಂತೆ ಬೆಸ್ಕಾಂನಿಂದ ಈಗಲೇ ಎಚ್ಚರ ವಹಿಸಬೇಕು, ಗಾಳಿ ಮಳೆಗೆ ವಿದ್ಯುತ್ ತಂತಿಗಳು ಕುಸಿಯುವುದು, ಶಾರ್ಟ್ ಸರ್ಕ್ಯೂಟ್ ಸೇರಿದಂತೆ ಯಾವುದೇ ರೀತಿ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು, ಟ್ರಾನ್ಸ್‌ ಫಾರ್ಮರ್‍ಗಳು ಕೆಟ್ಟುಹೋದಲ್ಲಿ ಕೂಡಲೇ ಅವುಗಳನ್ನು ಬದಲಾಯಿಸುವ ಕೆಲಸ ಆಗಬೇಕು, ಗಂಗಾ ಕಲ್ಯಾಣ ಯೋಜನೆಯಡಿ ನೀಡಲಾಗುವ ಬೋರ್‍ವೆಲ್‍ಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಿಕೊಡಬೇಕೆಂದು ಬೆಸ್ಕಾಂನ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕೆಎಸ್ಸಾರ್ಟಿಸಿ ವತಿಯಿಂದ ಜಿಲ್ಲೆಯ ಕನಕಪುರ, ಚನ್ನಪಟ್ಟಣ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಬಸ್ ಸೌಲಭ್ಯವಿಲ್ಲದ ಹಳ್ಳಿಗಳಿಗೆ ಕೂಡಲೇ ಬಸ್ ಸೌಕರ್ಯ ಕಲ್ಪಿಸಿ ಕೊಡುವಂತೆ ಹಾಗೂ ಶಾಲಾ ಅವಧಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಬಸ್‍ಗಳನ್ನು ಹಾಕಿಕೊಡುವ ವ್ಯವಸ್ಥೆ ಮಾಡುವಂತೆ ಕೆಎಸ್ಸಾರ್ಟಿಸಿಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ರಾಮಲಿಂಗಾರೆಡ್ಡಿ ನಿರ್ದೇಶನ ನೀಡಿದರು.

ಅಭಿವೃದ್ಧಿ ನಿಗಮಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರಿಗೆ ಜನರ ಕೃಷಿ ಚಟುವಟಿಕೆಗಳಿಗೆ ಕೊಳವೆಬಾವಿ ಕೊರೆಯಿಸಿಕೊಡಲು ಇದೀಗ ರಾಜ್ಯ ವ್ಯಾಪ್ತಿ ಒಂದೇ ಸಂಸ್ಥೆ ಕೆಲಸ ಮಾಡಲು ಟೆಂಡರ್ ಪಡೆದಿದೆ, ಅದನ್ನು ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಮಾಡಲು ಅನುಕೂಲವಾಗುವಂತೆ, ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಸಭೆಗೆ ತಿಳಿಸಿದರು.

ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಓಗಳೊಂದಿಗೆ ಸಭೆ ನಡೆಸಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ಲೋಪವುಂಟಾಗದಂತೆ ಕ್ರಮಕೈಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಕುಡಿಯುವ ನೀರು ಪೂರೈಸುತ್ತಿದ್ದ ಬೋರ್‌ ವೆಲ್‍ಗಳು ಬರಿದಾಗಿದ್ದಲ್ಲಿ ಸಂಬಂಧಿಸಿದ ತಾಲೂಕಿನ ಕಾರ್ಯನಿರ್ವಹಣಾಧಿಕಾರಿಗಳು ಆ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಕೊಳ್ಳಬೇಕು, ಬೋರ್‌ವೆಲ್‍ನಲ್ಲಿ ನೀರು ಲಭ್ಯವಿಲ್ಲದಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಅವರು ಸೂಚಿಸಿದರು.

ಬಾನಂದೂರು ಗ್ರಾಮದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮಿ ಹಾಗೂ ವೀರಾಪುರ ಗ್ರಾಮದಲ್ಲಿ ಶ್ರೀ ಶಿವಕುಮಾರ ಸ್ವಾಮಿಯವರ ಪುತ್ಥಳಿ ನಿರ್ಮಾಣಕ್ಕೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅಧಿಕಾರಿಗಳು ತ್ವರಿತವಾಗಿ ಈ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಶ್ರೀಘ್ರದಲ್ಲಿ ಸ್ಥಳೀಯ ಶಾಸಕರೊಂದಿಗೆ ಈ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಹಾರೋಹಳ್ಳಿ ತಾಲೂಕಿನಲ್ಲಿ ಘೋಷಿಸಲಾಗಿರುವ ಕಂದಾಯ ಗ್ರಾಮದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಹಕ್ಕುಪತ್ರಗಳನ್ನು ವಿತರಿಸಲು ಅಗತ್ಯ ಕ್ರಮವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಮನಗರ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್, ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ರಾಜು, ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಆರ್. ವೇದಿಕೆಯಲ್ಲಿದ್ದರು. ಕೆಡಿಪಿ ನಾಮ ನಿರ್ದೇಶಕ ಸದಸ್ಯರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಸಭೆಗೂ ಮುನ್ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಗಿ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥಕ್ಕೆ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X