Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಸವಣ್ಣರ ವಿಚಾರ, ತತ್ವ ಆದರ್ಶಗಳನ್ನು...

ಬಸವಣ್ಣರ ವಿಚಾರ, ತತ್ವ ಆದರ್ಶಗಳನ್ನು ಪಾಲಿಸುವ ಪ್ರಯತ್ನ ಮಾಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 Nov 2024 11:11 PM IST
share
ಬಸವಣ್ಣರ ವಿಚಾರ, ತತ್ವ ಆದರ್ಶಗಳನ್ನು ಪಾಲಿಸುವ ಪ್ರಯತ್ನ ಮಾಡುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನು ನೂರಕ್ಕೆ ನೂರು ಪಾಲನೆ ಮಾಡಲಾಗದಿದ್ದರೂ, ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್ ರಮಣಶ್ರೀಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ, 19ನೇ ವರ್ಷದ ‘ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ’ ಹಾಗೂ ಎಸ್. ಷಡಕ್ಷರಿ ರಚಿಸಿರುವ ‘ಕ್ಷಣ ಹೊತ್ತು ಆಣಿಮುತ್ತು' ಭಾಗ-14ರ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನಗಳು ಆಗಲಿ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಅಸಮಾನತೆ ಹೋಗಲು ಸಾಧ್ಯ. ಆ ಶಕ್ತಿಯನ್ನು ಜನರಲ್ಲಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡೋಣ ಎಂದು ಹೇಳಿದರು.

ಶರಣ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿರುವವರನ್ನು ಪ್ರೋ ತ್ಸಾಹಿಸುವುದು ಬಹಳ ಮುಖ್ಯ. ಶರಣರ ವಿಚಾರಗಳು ಇಡೀ ಜಗತ್ತಿಗೆ ತಲುಪಬೇಕು. ನಮಗೆ ಮಾತ್ರ ಸೀಮಿತವಾಗಿ ತಲುಪಿದರೆ ಸಾಲುವುದಿಲ್ಲ. ಶರಣರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವವನ್ನು ಸಲ್ಲಿಸಿದಂತಾಗುತ್ತದೆ. ಸಮಾಜಕ್ಕೆ ಬಸವಣ್ಣ ಮತ್ತು ಅವರ ಅನುಯಾಯಿಗಳ ಕೊಡುಗೆ ಅಪಾರವಾದುದು. ಸಮಾಜದ ಜಾತಿ ವ್ಯವಸ್ಥೆಯಿಂದ ಅಕ್ಷರ ಸಂಸ್ಕøತಿಯಿಂದ ವಂಚಿತರಾಗಿದ್ದಾರೆ. ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು ಎಂದು ಸಿದ್ದರಾಮಯ್ಯ ನುಡಿದರು.

ಡಾ.ಅಂಬೇಡ್ಕರ್ ಸಂವಿಧಾನ ಜಾರಿಗೆ ಬಂದಾಗ ವೈರುಧ್ಯತೆಯಿರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಹೇಳಿದ್ದರು. ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಇದೆ. ರಾಜಕೀಯ ಸಮಾನತೆ ಸಿಕ್ಕಿದ್ದರೂ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಶರಣರು ಇದನ್ನು 850 ವರ್ಷಗಳ ಹಿಂದೆಯೇ ಪ್ರತಿಪಾದಿಸಿದ್ದರು. ಸಮಾನತೆಯ ಸಮಾಜ ನಿರ್ಮಾಣವಾಗಲು ಜಾತಿ ವ್ಯವಸ್ಥೆ ಹೋಗಬೇಕು. ಇಂದಿಗೂ ಜಾತಿ ವ್ಯವಸ್ಥೆ ಇದ್ದು, ಇದನ್ನು ಹೋಗಲಾಡಿಸಲು ಮಾನವೀಯತೆಯಿಂದ ಕೂಡಿದ ಸಮಾಜ ಅಗತ್ಯ ಎಂದು ಅವರು ತಿಳಿಸಿದರು.

ಎಲ್ಲರಿಗೂ ಸಮಾನ ಅವಕಾಶಗಳು, ವೈಚಾರಿಕತೆ ಇರಬೇಕು. ಕರ್ಮ ಸಿದ್ಧಾಂತ ಇರಬಾರದು. ಇದನ್ನು ಈಗಲೂ ಬಹಳ ಜನ ಪರಿಪಾಲಿಸುತ್ತಾರೆ. ವಿದ್ಯಾವಂತರೂ ಕೂಡ ಹಣೆಬರಹದಲ್ಲಿ ನಂಬಿಕೆ ಇಡುತ್ತಾರೆ. ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಸಮಾಜದಿಂದ ಮಾತ್ರ ಇದಕ್ಕೆ ಪರಿಹಾರ. ನನಗಾಗಲಿ, ಬಸವರಾಜ ಬೊಮ್ಮಾಯಿ ಅವರಿಗಾಗಲಿ ಮುಖ್ಯಮಂತ್ರಿಯಾಗಲಿದ್ದೀರಿ ಎಂದು ಬರೆದಿದ್ದರೆ? ಗೊತ್ತಿದ್ದೋ ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.

ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು. ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತವೆ. ಇದನ್ನು ಮೊದಲು ಬಿಡಬೇಕು. ಆರ್ಥಿಕ, ಸಾಮಾಜಿಕ, ಸಮಾನತೆ ಹೋಗಲಾಡಿಸಲು, ಬಸವಾದಿ ಶರಣರ ಕನಸು ನನಸಾಗಿಸಲು, ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X