Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ...

ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ : ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ11 Sept 2024 8:12 PM IST
share
ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ : ರಮೇಶ್ ಬಾಬು

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2024 ರಿಂದ 2029ನೇ ಸಾಲಿನವರೆಗಿನ ಆಡಳಿತ ಮಂಡಳಿ ಚುನಾವಣೆಯು ಬಾಕಿ ಇದ್ದು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಹೊಸ ಚುನಾಯಿತ ಆಡಳಿತ ಮಂಡಳಿ ಅಧಿಕಾರಕ್ಕೆ ಬರುವವರೆಗೆ ಆಡಳಿತಾಧಿಕಾರಿಗಳನ್ನು ನೇಮಿಸಿ, ಪಾರದರ್ಶಕ ಚುನಾವಣೆ ನಡೆಸಲು ಕ್ರಮವಹಿಸಬೇಕು ಎಂದು ಕೆಪಿಸಿಸಿ ಮಾದ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ಪ್ರಸ್ತುತ ಸಂಘ-ಸಂಸ್ಥೆಗಳ ಕಾಯ್ದೆ ಮತ್ತು ನಿಯಮಾವಳಿಗಳ ಅನ್ವಯ ರಾಜ್ಯ ಸರಕಾರಿ ನೌಕರರ ಸಂಘದ ಆಡಳಿತ ಮಂಡಳಿಯ ಚುನಾವಣೆಯು ನಿಗದಿತ ಸಮಯದಲ್ಲಿ ನಡೆದಿರುವುದಿಲ್ಲ. ಸಂಘದ ಬೈಲಾ ಅನ್ವಯ ಈಗಿನ ಆಡಳಿತ ಮಂಡಳಿಯು ನಿಗದಿತ ಸಮಯದ ಒಳಗೆ ಚುನಾವಣೆಯನ್ನು ನಡೆಸಲು ವಿಫಲವಾಗಿರುತ್ತದೆ ಎಂದು ತಿಳಿಸಿದ್ದಾರೆ.

ಸಾಂಕೇತಿಕವಾಗಿ ದಿನಪತ್ರಿಕೆಯಲ್ಲಿ ಒಂದು ಜಾಹಿರಾತು ನೀಡಿದ್ದು, ಇಲ್ಲಿಯವರೆಗೆ ಕರಡು ಮತದಾರರ ಪಟ್ಟಿ ಚುನಾವಣಾ ವೇಳಾಪಟ್ಟಿ ಚುನಾವಣಾ ಅಧಿಕಾರಿಯ ನೇಮಕ ಆಗಿರುವುದಿಲ್ಲ. ತಾಲೂಕು ಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯಸಮಿತಿಯ ಸದಸ್ಯರು ಮತ್ತು ಇವರ ಮೂಲಕ ರಾಜ್ಯಮಟ್ಟದ ಪದಾಧಿಕಾರಿಗಳು ಚುನಾಯಿತರಾಗಬೇಕಾಗಿರುತ್ತದೆ ಎಂದು ಹೇಳಿದ್ದಾರೆ.

ಸಹಕಾರ ಸಂಘಗಳ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ 4ನೇ ವಲಯದ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಆ.21ರಂದು ಉಪನಿಬಂಧಕರ ಕಾರ್ಯಾಲಯದ ಸಹಕಾರ ಅಭಿವೃದ್ಧಿ ಅಧಿಕಾರಿಗೆ ಲಿಖಿತ ಪತ್ರವನ್ನು ನೀಡಿ ಕರ್ನಾಟಕ ಸರಕಾರಿ ನೌಕರರ ಸಂಘದ ವಿರುದ್ಧ ಚುನಾವಣೆ ಸಂಬಂಧ ಬಂದಿರುವ ಅರ್ಜಿಯ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಆಡಳಿತ ಮಂಡಳಿಗೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಮತ್ತು ಚುನಾವಣೆಯವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸುವ ಸಂಬಂಧ ವರದಿ ನೀಡುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದ್ದಾರೆ.

ಇಲ್ಲಿಯವರೆಗೆ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಅವಧಿ ಮುಗಿದಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲು ನಿರ್ದಿಷ್ಟವಾದ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಯಾವುದೇ ಸಂಘ ಸಂಸ್ಥೆಗಳು ತಮ್ಮ ಆಡಳಿತ ಅವಧಿಯನ್ನು ದುರುಪಯೋಗ ಪಡಿಸಿಕೊಂಡು ಚುನಾಯಿತ ಅವಧಿ ಮುಗಿದ ನಂತರವೂ ಪದಾಧಿಕಾರಿಗಳಾಗಿ ಮುಂದುವರೆಯುವುದು ಕಾನೂನುಬಾಹಿರವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಸುಮಾರು ನಾಲ್ಕುವರೆ ಲಕ್ಷ ಸರಕಾರಿ ನೌಕರರು ತಮ್ಮ ಪ್ರಾತಿನಿಧಿಕ ಸಂಸ್ಥೆಯಾದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಚುನಾಯಿತ ಆಡಳಿತ ಮಂಡಳಿಯನ್ನು ಮತ್ತು ಪಾರದರ್ಶಕವಾದ ಆಡಳಿತವನ್ನು ಬಯಸುತ್ತಿದ್ದಾರೆ. ಈಗಿರುವ ಆಡಳಿತ ಮಂಡಳಿಯು ಉದ್ದೇಶಪೂರಕವಾಗಿ ಕೆಲವು ಸರ್ಕಾರಿ ನೌಕರರನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಅರ್ಹ ಮತದಾರರ ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂಬ ಆರೋಪಗಳಿರುತ್ತವೆ. ಪಾರದರ್ಶಕ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಕ ಅನಿವಾರ್ಯವಾಗಿರುತ್ತದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X