Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಯಾನಂದ್ 2 ವರ್ಷ ಪೊಲೀಸ್ ಆಯುಕ್ತರಾಗಲು...

ದಯಾನಂದ್ 2 ವರ್ಷ ಪೊಲೀಸ್ ಆಯುಕ್ತರಾಗಲು ಅವಕಾಶ ನೀಡಿದ್ದು ಸಿದ್ದರಾಮಯ್ಯ: ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ9 Jun 2025 7:41 PM IST
share
ದಯಾನಂದ್ 2 ವರ್ಷ ಪೊಲೀಸ್ ಆಯುಕ್ತರಾಗಲು ಅವಕಾಶ ನೀಡಿದ್ದು ಸಿದ್ದರಾಮಯ್ಯ: ರಮೇಶ್ ಬಾಬು

ಬೆಂಗಳೂರು : ದಯಾನಂದ್ ಅವರನ್ನು ನಗರ ಪೊಲೀಸ್ ಆಯುಕ್ತರಾಗಿ ಎರಡು ವರ್ಷ ಮುಂದುವರೆಯಲು ಅವಕಾಶ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ದಯಾನಂದ್ ಅವರನ್ನು ಆಯುಕ್ತರ ಹುದ್ದೆಗೆ ನೇಮಕ ಮಾಡಿದಾಗ ಅವರ ಪರವಾಗಿ ಅವರ ಸಮುದಾಯದ ಯಾರೊಬ್ಬರೂ ಮನವಿ ಮಾಡಿರಲಿಲ್ಲ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದರು.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ದಯಾನಂದ್ ಅವರ ಸಮುದಾಯವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಎಲ್ಲ ಸಮುದಾಯಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಾರೆ. ದಯಾನಂದ್ ಅವರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಮುದಾಯದ ವಿಚಾರ ಬರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ, ಸರಕಾರದ ವಿರುದ್ಧ ಬರುತ್ತಿರುವ ಅಭಿಪ್ರಾಯಗಳೆಲ್ಲವೂ ಬಿಜೆಪಿ ಪ್ರೇರಿತವಾದವು ಎಂದು ರಮೇಶ್ ಬಾಬು ತಿಳಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚಿತವಾಗಿ ಬಿಜೆಪಿ ಅಧಿಕಾರದಲ್ಲಿತ್ತು. ಆಗಲೂ ದಯಾನಂದ್ ಎಲ್ಲ ಅರ್ಹತೆ ಹೋಂದಿದ್ದರು ಅವರನ್ನು ಏಕೆ ಆಯುಕ್ತರನ್ನಾಗಿ ಮಾಡಲಿಲ್ಲ. ಯಾವುದೇ ಸನ್ನಿವೇಶ ಬಂದರೂ ರಾಜಕೀಯ ಮಾಡುವುದು ಬಿಜೆಪಿಯ ಗುಣ. ಶ್ರೀರಾಮುಲು ಅವರನ್ನು ಡಿಸಿಎಂ ಮಾಡುತ್ತೇನೆ ಎಂದು ಚುನಾವಣೆ ವೇಳೆ ಹೇಳಿ ಅವರಿಗೆ ಹಾಗೂ ಅವರ ಸಮುದಾಯಕ್ಕೆ ಮೋಸ ಮಾಡಲಾಯಿತು. ಅದೇ ಸಮಯದಾಯದ ನಾಗೇಂದ್ರರನ್ನು ತುಳಿಯಲಾಯಿತು ಎಂದು ಅವರು ಟೀಕಿಸಿದರು.

11 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡ ವೇಳೆ ಈ ಮಾಹಿತಿಯನ್ನು ಮುಖ್ಯಮಂತ್ರಿಗೆ ಮುಟ್ಟಿಸುವಲ್ಲಿ ದಯಾನಂದ್ ವಿಫಲರಾದರು. ಅವರ ಮೇಲೆ ಯಾವುದೇ ಪೂರ್ವಾಗ್ರಹ ಪೀಡಿತರಾಗಿ ಕ್ರಮ ತೆಗೆದುಕೊಂಡಿಲ್ಲ. ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗೆ ಪೂರ್ವ ಮಾಹಿತಿ ನೀಡಲಾಗಿತ್ತು ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ರಮೇಶ್ ಬಾಬು ತಿಳಿಸಿದರು.

ಬೆಂಗಳೂರು ಹಾಗೂ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿರುವುದು ಇದೇ ಮೊದಲು. ದಯಾನಂದ್‍ರನ್ನು ಮಾತ್ರ ಅಮಾನತು ಮಾಡಿಲ್ಲ. ಐದು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದರ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ಭವಿಷ್ಯದಲ್ಲಿ ನಡೆಯದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನ ಮಾಡಿದ್ದಾರೆ ಎಂದು ಅವರು ಹೇಳಿದರು.

ಈ ಘಟನೆಗೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ವೈಫಲ್ಯವೂ ಇದೆ. ತಪ್ಪಾಗಿರವುದನ್ನು ಸರಕಾರ ಒಪ್ಪಿಕೊಂಡಿದೆ. ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಲು ಸರಕಾರ ಮುಂದಾಗಿದೆ. ಈ ಘಟನೆ ಸಂಬಂಧ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಕ್ರೀಡಾಂಗಣದಲ್ಲಿ ಎಲ್ಲ ಗೇಟ್ ಗಳನ್ನು ತೆರೆದಿದ್ದರೆ ಘಟನೆ ನಡೆಯುತ್ತಿರಲಿಲ್ಲ ಎನ್ನುವ ಅಭಿಪ್ರಾಯವಿದೆ ಎಂದು ರಮೇಶ್ ಬಾಬು ತಿಳಿಸಿದರು.

ಆರ್‌ಸಿಬಿ ಅವರಿಗೆ ಸನ್ಮಾನ ಮಾಡಬೇಕು ಎಂದು 2 ಗಂಟೆಯ ತನಕ ವೈಭವೀಕರಣ ಮಾಡಿ ಟ್ವೀಟ್ ಮಾಡಿದವರು ಬಿಜೆಪಿಯವರು. ಘಟನೆ ನಡೆದ ನಂತರ ಸಂತ್ರಸ್ತರನ್ನು ಇಬ್ಬರೂ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅನೇಕ ಆಟಗಾರರು ವಿದೇಶಕ್ಕೆ ತೆರಳುತ್ತಾರೆ ಎನ್ನುವ ಕಾರಣಕ್ಕೆ ಮುಂಚಿತವಾಗಿ ಈ ಕಾರ್ಯಕ್ರಮ ಇಟ್ಟುಕೊಳ್ಳಲಾಯಿತು ಎಂದು ಅವರು ಹೇಳಿದರು.

ಎರಡು ಗಂಟೆಯ ತನಕ ಮೆರವಣಿಗೆ ಬೇಕು ಎಂದು ಹೆಳುತ್ತಿದ್ದ ಬಿಜೆಪಿಗರು ಬೇಡ ಎಂದು ಹೇಳಬಹುದಿತ್ತಲ್ಲವೇ? ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೀಗೆ ಯಾರಾದರೊಬ್ಬರು ಹೇಳಬಹುದಿತ್ತಲ್ಲವೇ? ಇವರ ಮನಸ್ಥಿತಿಗಳು ಹೇಗೆ ಎಂದರೆ ಗೆದ್ರೆ ಆಡೋಕೆ ಬಂದಿದ್ದೆ, ಸೋತ್ರೇ ನೋಡೋಕೆ ಬಂದಿದ್ದೆ ಎನ್ನುವಂತಾಗಿದೆ ಎಂದು ರಮೇಶ್ ಬಾಬು ಟೀಕಿಸಿದರು.

ಸಿಎಂ ಹಾಗೂ ಡಿಸಿಎಂ ಅವರಿಗೆ ಈ ಘಟನೆಯಿಂದ ಮಾನಸಿಕವಾಗಿ ಆಘಾತವಾಗಿದೆ. ಇನ್ನೂ ಈ ದುರ್ಘಟನೆಯಿಂದ ಅವರು ಹೊರ ಬಂದಿಲ್ಲ. ತಪ್ಪು ಸಂದೇಶ, ಮಾಹಿತಿಗಳನ್ನು ನೀಡುವುದೇ ಬಿಜೆಪಿ ಕೆಲಸ. ಮೋದಿ ಅಧಿಕಾರ ವಹಿಸಿಕೊಂಡು ಇಲ್ಲಿಯ ತನಕ ದೇಶದಾದ್ಯಂತ 2 ಸಾವಿರಕ್ಕು ಹೆಚ್ಚು ಜನ ಕಾಲ್ತುಳಿತದಿಂದ ಸತ್ತಿದ್ದಾರೆ ಎಂದು ಅವರು ಹೇಳಿದರು.

ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ್ ಮಾತನಾಡಿ, ಯಾವುದೇ ಘಟನೆ ನಡೆದರೂ ಬಿಜೆಪಿ ಅದನ್ನು ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳುವುದು ಅವರ ಚಾಳಿ. ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಸೀಳುನಾಯಿ ಎಂದು ಕರೆದಿದ್ದಾರೆ. ಈ ಬಗ್ಗೆ ಈಗಾಗಲೇ ದೂರು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇದೇ ಚಾಳಿ ಮುಂದುವರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.

ಮಾಜಿ ಮೇಯರ್ ರಾಮಚಂದ್ರಪ್ಪ ಮಾತನಾಡಿ, ಮುಂಬೈ ಅಲ್ಲಿ ರೈಲ್ವೇ ದುರಂತ ನಡೆದಿದೆ. ಇದಕ್ಕೆ ಪ್ರಧಾನಿ ಮೋದಿ ರಾಜಿನಾಮೆ ನೀಡಿ ಎಂದು ಕೇಳಲು ಆಗುತ್ತದೆಯೇ? ಪಹಲ್ಗಾಮ್ ದುರಂತ ನಡೆದಾಗ ಮೋದಿ, ಅಮಿತ್ ಶಾ ಎಲ್ಲಿ ಹೋಗಿದ್ದರು. ಈ ಘಟನೆಯ ಸಂತ್ರಸ್ತ ಮಹಿಳೆಯರಿಗೆ ಇಲ್ಲಸಲ್ಲದ ಕಿರುಕುಳವನ್ನು ಸಾಮಾಜಿಕ ಜಾಲತಾಣಗಳ ಮೂಲಕ ನೀಡಲಾಯಿತು. ನಾವು ಘಟನೆಯನ್ನು ಅಲ್ಲಗಳೆದಿಲ್ಲ. ಇದು ನಡೆಯಬಾರದಿತ್ತು ನಡೆದು ಹೋಗಿದೆ. ಇದರ ಬಗ್ಗೆ ನಮಗೂ ವಿಷಾಧವಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X