Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 80 ಲಕ್ಷ ಮತದಾರರ ಹೆಸರು ಕೈಬಿಡುವ ಆತಂಕ;...

80 ಲಕ್ಷ ಮತದಾರರ ಹೆಸರು ಕೈಬಿಡುವ ಆತಂಕ; ಎಸ್‍ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ: ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ29 July 2026 8:20 PM IST
share
80 ಲಕ್ಷ ಮತದಾರರ ಹೆಸರು ಕೈಬಿಡುವ ಆತಂಕ; ಎಸ್‍ಐಆರ್ ಪ್ರಕ್ರಿಯೆ ಪಾರದರ್ಶಕವಾಗಿರಲಿ: ರಮೇಶ್ ಬಾಬು

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ರಾಜ್ಯದ ಸುಮಾರು 80 ಲಕ್ಷಕ್ಕೂ ಅಧಿಕ ಮತದಾರರನ್ನು ವಿವಿಧ ವರ್ಗಗಳ ಅಡಿಯಲ್ಲಿ ಗುರುತಿಸಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯಾವುದೆ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮನವಿ ಪತ್ರದಲ್ಲಿ ಏನಿದೆ?: ಒಟ್ಟು ಮತದಾರರ ಪೈಕಿ ಸುಮಾರು ಶೇ.15ರಷ್ಟು ಮತದಾರರನ್ನು ಎಎಸ್‍ಡಿಡಿಒ ವರ್ಗಗಳಲ್ಲಿ ಗುರುತಿಸಲಾಗಿದೆ.. ಈ ವರ್ಗೀಕರಣವನ್ನು ಸಮಗ್ರ ಪರಿಶೀಲನೆ ಇಲ್ಲದೆ ಅನುಷ್ಠಾನಗೊಳಿಸಿದರೆ ಲಕ್ಷಾಂತರ ನೈಜ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ರಮೇಶ್ ಬಾಬು ಆತಂಕ ವ್ಯಕ್ತಪಡಿಸಿದ್ದಾರೆ.

ಅನರ್ಹ ಹೆಸರುಗಳನ್ನು ತೆಗೆದುಹಾಕುವುದರ ಜತೆಗೆ ಯಾವುದೇ ಅರ್ಹ ನಾಗರಿಕರ ಹೆಸರು ಆಡಳಿತಾತ್ಮಕ ಲೋಪ, ಅಪೂರ್ಣ ಕ್ಷೇತ್ರ ಪರಿಶೀಲನೆ ಅಥವಾ ತಾಂತ್ರಿಕ ಕಾರಣಗಳಿಂದ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮರುಪರಿಶೀಲನೆಗೆ ಆಗ್ರಹ: ಎಎಸ್‍ಡಿಡಿಒ ವರ್ಗಕ್ಕೆ ಸೇರಿಸಿರುವ ಪ್ರತಿಯೊಂದು ಪ್ರಕರಣದಲ್ಲೂ ಮತ್ತೊಮ್ಮೆ ಭೌತಿಕ ಪರಿಶೀಲನೆ ನಡೆಸಬೇಕು. ಒಂದೇ ಬಾರಿ ಮನೆಗೆ ಭೇಟಿ ನೀಡಿದ ಆಧಾರದ ಮೇಲೆ ಮತದಾರರ ಹೆಸರನ್ನು ಅಳಿಸಬಾರದು. ಹೆಸರು ಕೈಬಿಡುವ ಮುನ್ನ ಸಂಬಂಧಿತ ಮತದಾರರಿಗೆ ಸೂಕ್ತ ನೋಟಿಸ್ ನೀಡಿ ತಮ್ಮ ಅಭಿಪ್ರಾಯ ಸಲ್ಲಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಗ್ರಾಮ, ವಾರ್ಡ್ ಹಾಗೂ ಮತಗಟ್ಟೆ ಮಟ್ಟದಲ್ಲಿ ನೆರವು ಕೇಂದ್ರಗಳನ್ನು ತೆರೆಯಬೇಕು. ಕ್ಷೇತ್ರವಾರು ಹಾಗೂ ವರ್ಗವಾರು ಪ್ರಸ್ತಾವಿತ ಹೆಸರು ಅಳಿಸುವಿಕೆಯ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಪರಿಶೀಲನಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಹಿರಿಯ ನಾಗರಿಕರು, ಅಂಗವಿಕಲರು, ಮಹಿಳೆಯರು, ವಲಸೆ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಂತಹ ದುರ್ಬಲ ವರ್ಗದ ಮತದಾರರು ಆಡಳಿತಾತ್ಮಕ ಅಥವಾ ಪ್ರಕ್ರಿಯಾತ್ಮಕ ಕಾರಣಗಳಿಂದ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಎಸ್‍ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ತಪ್ಪು ಹಾಗೂ ದಾರಿತಪ್ಪಿಸುವ ಮಾಹಿತಿಯನ್ನು ಹರಡುತ್ತಿರುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುತ್ತಿದೆ. ಇಂತಹವರ ವಿರುದ್ಧ ಜನಪ್ರತಿನಿಧಿತ್ವ ಕಾಯ್ದೆ-1950, ಮತದಾರರ ನೋಂದಣಿ ನಿಯಮಗಳು-1960 ಹಾಗೂ ಅನ್ವಯಿಸುವ ಇತರ ಕಾನೂನುಗಳಡಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

Tags

Ramesh Babu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X