Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ;...

ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ; ಬಿಜೆಪಿ, ಸಂಘಪರಿವಾರದ ಅಸ್ಪಶ್ಯತೆಗೆ ಸಾಕ್ಷಿ : ರಮೇಶ್‌ಬಾಬು

ವಾರ್ತಾಭಾರತಿವಾರ್ತಾಭಾರತಿ14 Aug 2026 12:37 AM IST
share
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ; ಬಿಜೆಪಿ, ಸಂಘಪರಿವಾರದ ಅಸ್ಪಶ್ಯತೆಗೆ ಸಾಕ್ಷಿ : ರಮೇಶ್‌ಬಾಬು

ಬೆಂಗಳೂರು : ‘ಹಲದ್ವಾನಿ (ಉತ್ತರಾಖಂಡ) ಯಲ್ಲಿ ನಡೆದ ಘಟನೆ ಬಿಜೆಪಿ, ಆರೆಸ್ಸೆಸ್ ಸಿದ್ಧಾಂತದ ಹಿಂದುಳಿದ ಹಾಗೂ ದಲಿತರ ವಿಭಜಕ ಮನೋಭಾವವನ್ನು ಬಹಿರಂಗಪಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ಹಲದ್ವಾನಿ ರಾಮಲೀಲಾ ಮೈದಾನದಲ್ಲಿ ನಡೆಸಲಾದ ‘ಶುದ್ಧೀಕರಣ’ ಕಾರ್ಯವು ಕಳವಳಕಾರಿ ಹಾಗೂ ಖಂಡನೀಯ. ಈ ಘಟನೆ ಖರ್ಗೆಯವರ ವಿರುದ್ಧ ಬಿಜೆಪಿ ಮತ್ತು ಸಂಘಪರಿವಾರ ಅನುಸರಿಸುತ್ತಿರುವ ಪ್ರತೀಕಾರ ಮತ್ತು ದ್ವೇಷದ ರಾಜಕೀಯಕ್ಕೆ ಸಾಕ್ಷಿ’ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.

ಗುರುವಾರ ಪ್ರಕಟಣೆ ನೀಡಿರುವ ಅವರು, ‘ಆ.8ರಂದು ಹಲದ್ವಾನಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆ ನಡೆಸಲಾಗಿತ್ತು. ನಂತರ ಅದೇ ಸ್ಥಳದಲ್ಲಿ ಬಿಜೆಪಿ, ಸಂಘಪರಿವಾರದ ಒಂದು ಸಂಘಟನೆಯಿಂದ ‘ಶುದ್ಧೀಕರಣ’ ಹವನ ನಡೆಸಲಾಗಿದೆ. ಈ ವಿಷಯವನ್ನು ಖರ್ಗೆಯವರೇ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿ, ಇಂತಹ ಕೃತ್ಯದ ಅತ್ಯಂತ ಆಕ್ಷೇಪಾರ್ಹ ಹಾಗೂ ಅವಮಾನಕಾರಿ ಎಂದು ಎತ್ತಿ ತೋರಿಸಿದ್ದಾರೆ. ಇದೀಗ ಬಿಜೆಪಿ ನಾಯಕರೂ ವಿಷಯದ ಬಗ್ಗೆ ತನಿಖೆ ನಡೆಸಬೇಕು’ ಎಂದು ಹೇಳಿದ್ದಾರೆ.

ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಹಾಗೂ ದೇಶದ ಅತ್ಯಂತ ಹಿರಿಯ ನಾಯಕರು ಮತ್ತು ಸಂಸದೀಯ ಪಟು. ಮುಖ್ಯವಾಗಿ ಅವರು ಐತಿಹಾಸಿಕವಾಗಿ ಶೋಷಿತ ಸಮುದಾಯಕ್ಕೆ ಸೇರಿದವರಾಗಿದ್ದು, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಂವಿಧಾನಾತ್ಮಕ ಹಕ್ಕುಗಳಿಗಾಗಿ ಹಲವು ದಶಕಗಳಿಂದ ಹೋರಾಡುತ್ತಿದ್ದಾರೆ. ಖರ್ಗೆ ಅವರು ನಿರ್ದಿಷ್ಟ ಸ್ಥಳದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರಣಕ್ಕಾಗಿ ಆ ಸ್ಥಳದಲ್ಲಿ ‘ಶುದ್ಧೀಕರಣ’ ನಡೆಸಲಾಗಿದೆ. ಅದು ಸಾಮಾಜಿಕ ಬಹಿಷ್ಕಾರ ಮತ್ತು ಜಾತಿ ಪೂರ್ವಾಗ್ರಹದ ಆತಂಕಕಾರಿ ಸಂದೇಶವನ್ನು ನೀಡುತ್ತದೆ. ಆಧುನಿಕ ಸಂವಿಧಾನಾತ್ಮಕ ಪ್ರಜಾಪ್ರಭುತ್ವದಲ್ಲಿ ಯಾರನ್ನೂ ಅವರ ಜಾತಿ, ಜನ್ಮ ಅಥವಾ ಸಾಮಾಜಿಕ ಹಿನ್ನೆಲೆಯ ಕಾರಣಕ್ಕೆ ‘ಅಶುದ್ಧ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಹಿಂದೂ ಧರ್ಮ ಮತ್ತು ಭಾರತದ ಆಧ್ಯಾತ್ಮಿಕ ಪರಂಪರೆಯನ್ನು ಜಾತಿ ತಾರತಮ್ಯ ಅಥವಾ ಅಸ್ಪಶ್ಯತೆಯೊಂದಿಗೆ ಸಮೀಕರಿಸಲು ಸಾಧ್ಯವಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ದೃಢ ನಿಲುವಾಗಿದೆ. ಜಾತಿ ಆಧಾರಿತ ತಾರತಮ್ಯ, ಅಸ್ಪೃಶ್ಯತೆ ಮತ್ತು ದಲಿತರ ಶೋಷಣೆಗೆ ಸಂವಿಧಾನ ರೂಪಿತವಾದ ಭಾರತದಲ್ಲಿ ಯಾವುದೇ ಸ್ಥಾನವಿಲ್ಲ. ಹಲದ್ವಾನಿ ಘಟನೆ ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯದ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ ಎಂಬುದನ್ನು ಸೂಚಿಸುತ್ತದೆೆ.

-ರಮೇಶ್‌ಬಾಬು, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ

Tags

Ramesh Babu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X