Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ...

ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಆರೋಪಿಗಳ ಬಂಧನ

ಅಪಹರಣಕಾರರಿಂದ ರಕ್ಷಿಸಲ್ಪಟ್ಟ ಇಬ್ಬರು ಅತ್ಯಾಚಾರ ಪ್ರಕರಣದಲ್ಲಿ ಸೆರೆ!

ವಾರ್ತಾಭಾರತಿವಾರ್ತಾಭಾರತಿ29 Oct 2026 5:25 PM IST
share
ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಆರೋಪಿಗಳ ಬಂಧನ

ಬೆಂಗಳೂರು, ಅ.29: ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಸಂತ್ರಸ್ತೆಯೇ ಅಪಹರಿಸಿ ಹಣದ ಬೇಡಿಕೆಯಿಟ್ಟ ಪ್ರಕರಣವೊಂದನ್ನು ಮಾರತಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ಒಟ್ಟು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಈ ಮಧ್ಯೆ ಅಪಹರಣಕಾರರಿಂದ ರಕ್ಷಿಸಲ್ಪಟ್ಟ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ಅ.28ರಂದು ತನ್ನ ಮಗ ಬುರ್ಸು ಮಹೇಂದ್ರ(23) ಹಾಗೂ ಆತನ ಸ್ನೇಹಿತ ಯೆರ್ರಿಬೋನಿ ತರುಣ್( 23 ) ಎಂಬವರನ್ನು ಯಾರೋ ಅಪಹರಿಸಿದ್ದು, 10 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು ಅಪರಿಚಿತರು ಕರೆ ಮಾಡಿದ್ದಾರೆ ಎಂದು ವ್ಯಕ್ತಿಯೋರ್ವ ಮಾರತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಾರತಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಪಹರಣಕ್ಕೆ ಸಂಬಂಧಿಸಿ ಯುವತಿಯೊಬ್ಬಳ ಸಹಿತ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಧ್ಯೆ ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಪಹರಣಕ್ಕೀಡಾಗಿದ್ದ ಮಹೇಂದ್ರ ಹಾಗೂ ತರುಣ್ ನನ್ನೂ ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರದ ಪ್ರತೀಕಾರವಾಗಿ ಕಿಡ್ನಾಪ್..!

ಅಂಧ್ರ ಮೂಲದ ಮಹೇಂದ್ರ ಹಾಗೂ ತರುಣ್ ಹಾಗೂ ಮಂಜುನಾಥ್ ಎಂಬವರು ನಗರದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಸಾಫ್ಟ್ ವೇರ್ ಉದ್ಯೋಗ ಮಾಡುತ್ತಿದ್ದರು. ಕೆಲದಿನಗಳ ಹಿಂದೆ ಈ ಪೈಕಿ ಮಂಜುನಾಥ್ ಊರಿಗೆ ತೆರಳಿದ್ದ ವೇಳೆ ಅವರ ಸ್ನೇಹಿತನಾಗಿರುವ ರಾಜಕುಮಾರ್ ಎಂಬವರು ಕರೆ ಮಾಡಿ ತಾನು ಪ್ರೇಯಸಿ ಜೊತೆ ನಿನ್ನ ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಅದಕ್ಕೆ ಮಂಜುನಾಥ್ ತಾನೂ ಮನೆಯಲ್ಲಿ ಇಲ್ಲ, ಆದರೆ ತನ್ನ ಸ್ನೇಹಿತರಾದ ಮಹೇಂದ್ರ ಹಾಗೂ ತರುಣ್ ಇರುತ್ತಾರೆ ಹೋಗು ಎಂದಿದ್ದ. ಆದರಂತೆ ರಾಜಕುಮಾರ್ ತನ್ನ ಪ್ರೆಯಸಿಯೊಡನೆ ತೆರಳಿ ಅಲ್ಲಿ ವಾಸ್ತವ್ಯ ಹೂಡಿದ್ದರು. ಮಧ್ಯರಾತ್ರಿ ವೇಳೆ ಮದ್ಯದ ನಶೆಯಲ್ಲಿದ್ದ ಆರೋಪಿ ಮಹೇಂದ್ರನು ರಾಜಕುಮಾರ್ ರನ್ನು ಒಂದು ಕಡೆ ಕೂಡಿಹಾಕಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಅತ್ಯಾಚಾರಕ್ಕೆ ಪ್ರತೀಕಾರವಾಗಿ ಸಂತ್ರಸ್ತ ಯುವತಿಯು ಪ್ರಿಯಕರ ರಾಜಕುಮಾರ್, ಸ್ನೇಹಿತ ಮಂಜುನಾಥ್ ಸೇರಿ ಒಂದು ತಂಡ ಕಟ್ಟಿಕೊಂಡು ತರುಣ್ ಹಾಗೂ ಮಹೇಂದ್ರನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೆ ಸಂಚು ರೂಪಿಸಿದ್ದ ಆರೋಪಿಗಳು:

ತಾವು ಬೇಡಿಕೆಯಿಟ್ಟಿದ್ದ ಹಣ ಬಂದ ಬಳಿಕ ಮಹೇಂದ್ರ ಮತ್ತು ತರುಣ್ ನನ್ನು ಕೊಲೆ ಮಾಡಲು ಅಪಹರಣಕಾರರು ಸಂಚು ರೂಪಿಸಿದ್ದರು . ಆದರೆ ಪ್ರಕರಣ ದಾಖಲಾದ ಆರೇ ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದರಿಂದ ಪ್ರಕರಣ ಸುಖಾಂತ್ಯ ಕಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಡ್ನಾಪ್ ನೊಂದಿಗೆ ಅತ್ಯಾಚಾರ ಪ್ರಕರಣವನ್ನೂ ಭೇದಿಸಿರುವ ಪೊಲೀಸರು ಎರಡೂ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Tags

Rape VictimKidnapArrestedBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X