Bengaluru | ಯುವತಿಗೆ ಲೈಂಗಿಕ ಕಿರುಕುಳ ಆರೋಪ : ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಬಂಧನ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನನ್ನು ಇಲ್ಲಿನ ಅನ್ನಪೂರ್ಣೇಶ್ವರಿನಗರ ಠಾಣೆಯ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ವಿವೇಕ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುವ ಯುವತಿಯು ಶನಿವಾರ ಬೆಳಗ್ಗೆ ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿ ಆಕ್ಷೇಪಿಸಿದಾಗ, ಆತ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ನಂತರ ಯುವತಿಯು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಬಗ್ಗೆ ದೂರು ದಾಖಲಿಸಿಕೊಂಡ ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು ಆರೋಪಿ ವಿವೇಕ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವುದಾಗಿ ತಿಳಿಸಿದ್ದಾರೆ.
Next Story





