ಬೆಂಗಳೂರು: ರ್ಯಾಪರ್ ಅನುಮಾನಸ್ಪದ ಸಾವು

ರ್ಯಾಪರ್ ಅಭಿನವ್ ಸಿಂಗ್
ಬೆಂಗಳೂರು: ಒಡಿಶಾದ ರ್ಯಾಪರ್ ಅಭಿನವ್ ಸಿಂಗ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ಮಾರತ್ ಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಮೃತನ ಸಹೋದರ ಅಮಿತ್ ಸಾವನ್ ನೀಡಿದ ದೂರಿನ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪತ್ನಿ ಕಿರುಕುಳದಿಂದ ಅಭಿನವ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ಪೋಷಕರು ಆರೋಪಿಸಿದ್ದಾರೆ.
32 ವರ್ಷದ ಅಭಿನವ್ ಕಾಡುಬೀಸನಹಳ್ಳಿಯ ಯುಟೇಪಿಯಾ ಅಪಾರ್ಟ್ಮೆಂಟ್ನ ನಾಲ್ಕನೆ ಮಹಡಿಯಲ್ಲಿ ವಾಸಿಸುತ್ತಿದ್ದರು. ಇತ್ತೀಚಿಗೆ ಸಾಫ್ಟ್ ವೇರ್ ಕಂಪೆನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಫೆ.9ರಂದು ಸ್ನೇಹಿತನೊಂದಿಗೆ ಊಟ ಮಾಡಿದ ಬಳಿಕ ಅನುಮಾನಸ್ಪವಾಗಿ ಸಾವನ್ನಪ್ಪಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿದ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
Next Story





