Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಧಾನಿ ಮೋದಿಯವರ ಚಿತ್ರವನ್ನು...

ಪ್ರಧಾನಿ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ : ಆರ್.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ29 April 2025 8:20 PM IST
share
ಪ್ರಧಾನಿ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ : ಆರ್.ಅಶೋಕ್‌

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ವ್ಯಕ್ತಿತ್ವಕ್ಕೆ ಅಪಮಾನ ಮಾಡುವಂತೆ ಕಾಂಗ್ರೆಸ್ ಪೋಸ್ಟ್ ಮಾಡಿದೆ. ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ? ಅವರ ಪಕ್ಷದವರೇ ಮರ್ಯಾದೆ ಕೊಡದ ಸ್ಥಿತಿಯಲ್ಲಿರುವ ಇವರು ಪ್ರಧಾನಿಯ ಚಿತ್ರವನ್ನು ಕೆಟ್ಟದಾಗಿ ರೂಪಿಸಿರುವುದು ಅಪರಾಧ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಸಾದುದ್ದೀನ್ ಉವೈಸಿ ಪಾಕಿಸ್ತಾನಕ್ಕೆ ಸವಾಲು ಹಾಕಿದ್ದಾರೆ. ಸಿಎಂ ರೇವಂತ್ ರೆಡ್ಡಿ ದೇಶಭಕ್ತಿ ಪ್ರದರ್ಶಿಸಿದ್ದಾರೆ. ಇವರೆಲ್ಲರೂ ಅಂತಹವರ ಬಳಿ ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕು. ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿನ ಕಾಂಗ್ರೆಸ್ ನಾಯಕರು ಎಲ್ಲಕ್ಕೂ ಮೋದಿಯನ್ನು ಪ್ರಶ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‍ಗೆ ಹೋಗಿ ಚುನಾವಣೆಗೆ ನಿಂತರೆ 1 ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ.

ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ. ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ ಎಂದು ದೂರಿದರು.

ಕರ್ನಾಟಕ ರೌಡಿಗಳ ರಾಜ್ಯವಾಗಿದೆ. ಇಂತಹ ಸ್ಥಿತಿಯಲ್ಲಿ ಪೊಲೀಸರಿಗೆ ಹೊಡೆಯಲು ಹೋದರೆ ಮುಂದೆ ಜನರು ಕೂಡ ಹೊಡೆಯುತ್ತಾರೆ. ಕಾಂಗ್ರೆಸ್‍ಗೆ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ. ಇವರು ಪಾಕಿಸ್ತಾನದ ಪರವಾಗಿ ಮಾತಾಡಿದ್ದಕ್ಕೆ ಹೋರಾಟ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲ ಸಾಮಾನ್ಯ. ಅದನ್ನು ಸಹಿಸಲು ಇವರಿಗೆ ಆಗಿಲ್ಲ ಎಂದು ಅಶೋಕ್ ಟೀಕಿಸಿದರು.

ಕೇಸ್ ದಾಖಲಿಸಿ: ‘ಭಯೋತ್ಪಾದಕರು ಧರ್ಮ ನೋಡಿ ಸಾಯಿಸಿಲ್ಲ ಎಂದಾದರೆ ಕಾಂಗ್ರೆಸ್‍ನವರು ಮಾಧ್ಯಮಗಳು ಹಾಗೂ ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಲಿ. ಇಲ್ಲವಾದರೆ ಮಂಡಿಯೂರಿ ಕ್ಷಮೆ ಯಾಚಿಸಲಿ. ಪಾಕಿಸ್ತಾನದ ಪರವಾದ ಹೇಳಿಕೆ ನೀಡುವವರು ದೇಶದ್ರೋಹಿಗಳು’

-ಆರ್.ಅಶೋಕ್, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X