ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾಗೌಡ ಜಾಮೀನು ಅರ್ಜಿ ಆದೇಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ಸಂಬಂಧ ಇಂದು 59ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಮಾಡಲಿದೆ.
ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿದ್ದು, ಮಗಳ ವಿದ್ಯಾಭ್ಯಾಸದ ಕಾರಣಗಳನ್ನು ನೀಡಿ ಪವಿತ್ರಾಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು.
ಪವಿತ್ರಾಗೌಡ ಪರ ಹಿರಿಯ ವಕೀಲ ಬಾಲನ್ ಹಾಗೂ ವಕೀಲ ನಾರಾಯಣಸ್ವಾಮಿ ವಾದ ಮಾಡಿದ್ದರು. ಅಲ್ಲದೆ, ಕಳೆದ ವಿಚಾರಣೆ ವೇಳೆ ವಕೀಲ ನಾರಾಯಣಸ್ವಾಮಿ ತಮ್ಮ ಬಳಿ ಪವಿತ್ರಾಗೌಡ ‘ಒಂಚೂರು ವಿಷ ಕೊಡಿಸಿಬಿಡಿ’ ಎಂದಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.
ಈ ವೇಳೆ ವಿಡಿಯೋ ಕಾನ್ಫರೆನ್ಸ್‌ನಲ್ಲಿದ್ದ ಪವಿತ್ರಾಗೌಡ ಕಣ್ಣೀರಿಟ್ಟು, ‘ದಯವಿಟ್ಟು ಬ್ಯಾರಕ್ ಬದಲಾಯಿಸಿ’ ಎಂದು ಮನವಿ ಮಾಡಿದ್ದರು.
ಈ ಹಿಂದೆ ವಿಚಾರಣಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಪವಿತ್ರಾಗೌಡ ಅವರ ಜಾಮೀನು ಅರ್ಜಿಗಳನ್ನು ವಜಾ ಮಾಡಿತ್ತು. ಇದೀಗ ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿರುವ ಕಾರಣವನ್ನಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ.
Next Story




