Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Karnataka Budget |...

Karnataka Budget | ವಿಶ್ವವಿದ್ಯಾನಿಲಯಗಳಲ್ಲಿ ಶೈಕ್ಷಣಿಕ - ಸಾಮಾಜಿಕ ದೌರ್ಜನ್ಯ ತಡೆಗಟ್ಟಲು ʻರೋಹಿತ್ ವೇಮುಲ ಕಾಯ್ದೆʼ ಜಾರಿ

ವಾರ್ತಾಭಾರತಿವಾರ್ತಾಭಾರತಿ6 March 2026 12:37 PM IST
share
Karnataka Budget | ವಿಶ್ವವಿದ್ಯಾನಿಲಯಗಳಲ್ಲಿ ಶೈಕ್ಷಣಿಕ - ಸಾಮಾಜಿಕ ದೌರ್ಜನ್ಯ ತಡೆಗಟ್ಟಲು ʻರೋಹಿತ್ ವೇಮುಲ ಕಾಯ್ದೆʼ ಜಾರಿ
► ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯ ► ಉನ್ನತ ಶಿಕ್ಷಣ : ಸಮಗ್ರ ಮಾಹಿತಿ ಇಲ್ಲಿದೆ....

ಬೆಂಗಳೂರು: ರಾಜ್ಯದ ಎಲ್ಲಾ ಸರಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

2026ನೇ ಬಜೆಟ್ ನಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರ್ಗಿ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.

AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.

ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.

ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲಾಗುವುದು

Tags

Karnataka Budget 2026-27Rohith Vemula Act
share
ವಾರ್ತಾಭಾರತಿ
ವಾರ್ತಾಭಾರತಿ
Next Story
X