Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾರಿಗೆ ನೌಕರರಿಗೆ ಪ್ರೀಮಿಯಂ ರಹಿತ 1...

ಸಾರಿಗೆ ನೌಕರರಿಗೆ ಪ್ರೀಮಿಯಂ ರಹಿತ 1 ಕೋಟಿ ರೂ.ಅಪಘಾತ ವಿಮೆ | ಕೆನರಾ ಬ್ಯಾಂಕಿನೊಂದಿಗೆ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ3 Dec 2024 10:08 PM IST
share
Photo of Program

ಬೆಂಗಳೂರು : ಕೆಸ್ಸಾರ್ಟಿಸಿ ನೌಕರರು ವೈಯಕ್ತಿಕ ಮತ್ತು ಕರ್ತವ್ಯನಿರತ ಸಮಯದಲ್ಲಿ ಅಪಘಾತದಿಂದಾಗಿ ನಿಧನರಾದಲ್ಲಿ ಒಂದು ಕೋಟಿ ರೂ.ಗಳ ಅಪಘಾತ ವಿಮೆಯ ಪರಿಹಾರ ಮೊತ್ತವನ್ನು ನೀಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಗುರುವಾರ ಇಲ್ಲಿನ ಶಾಂತಿನಗರದ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ವಿಮಾ ಯೋಜನೆಯ ಒಡಂಬಡಿಕೆ ವಿನಿಮಯ ಸಭೆಯಲ್ಲಿ ಮಾತನಾಡಿದ ಅವರು, ಒಡಂಬಡಿಕೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ‘ಪೇ-ರೋಲ್ ಪ್ಯಾಕೇಜ್ ಸ್ಕೀಮ್’ ಅಡಿಯಲ್ಲಿ ತೆರೆದು, ವಿಮಾ ಸೌಲಭ್ಯವನ್ನು ಎಲ್ಲ ನೌಕರರು ಶುಲ್ಕ ರಹಿತವಾಗಿ ಪಡೆಯಬಹುದಾಗಿರುತ್ತದೆ ಎಂದರು.

ಒಂದು ಕೋಟಿ ರೂ.ಗಳ ಅಪಘಾತ ವಿಮೆಯ ಪರಿಹಾರ ಮೊತ್ತವನ್ನು ಹಾಗೂ ಡೆಬೀಟ್ ಕಾರ್ಡ್ ಹೊಂದಿದಲ್ಲಿ 6 ಲಕ್ಷ ರೂ.ಗಳಿಂದ 14 ಲಕ್ಷ ರೂ.ಗಳವರೆಗೆ ಹಾಗೂ ಪ್ರೀಮಿಯಂ ರಹಿತ ಒಂದು ಲಕ್ಷ ರೂ.ಗಳಿಂದ 6 ಲಕ್ಷಗಳವರೆಗೆ ಉಚಿತ ‘ಟೆರ್ಮ್ ಇನ್ಸ್‍ರೇನ್ಸ್’ ಪಾಲಿಸಿಯನ್ನು ನಾಮನಿರ್ದೇಶಿತರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಕ.ಕ.ರ.ಸಾ.ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುರಕ್ಷಿತ, ವಿತವ್ಯಯ ಸಾರಿಗೆ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ, ನೌಕರರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗಿರುತ್ತದೆ. ನಿಗಮದಲ್ಲಿ ಈಗಾಗಲೇ ಎಸ್.ಬಿ.ಐ ಬ್ಯಾಂಕಿನಲ್ಲಿ, ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರು ಅಪಘಾತ ವಿಮೆಗೆ ಒಳಪಟ್ಟಿರುತ್ತಾರೆ ಎಂದು ಅವರು ಹೇಳಿದರು.

ಈ ಬ್ಯಾಂಕುಗಳನ್ನು ಹೊರತುಪಡಿಸಿ ಕೆನರಾ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ಸುಮಾರು 3 ಸಾವಿರ ನೌಕರರಿಗೂ ಅಪಘಾತ ವಿಮೆಯ ಸೌಲಭ್ಯವನ್ನು ವಿಸ್ತರಿಸುವುದು ಅವಶ್ಯಕತೆ ಇದೆ. ಹೀಗಾಗಿ ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನಿಗಮದ ನೌಕರರಿಗೆ ಅಪಘಾತ ವಿಮೆ ಸೌಲಭ್ಯವನ್ನು ಜಾರಿಗೆ ತರಲಾಗಿದೆ ಎಂದು ಅವರು ವಿವರಿಸಿದರು.

ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ್ ಮಾತನಾಡಿ, ಅಪಘಾತ ಹೊರತುಪಡಿಸಿದರೆ, ಇತರೇ ನೈರ್ಸಗಿಕ ಸಾವುಗಳಿಗೆ ಕೆನರಾ ಬ್ಯಾಂಕ್ ಪ್ರೀಮಿಯಂ ರಹಿತ 6 ಲಕ್ಷ ರೂ.ಗಳವರೆಗೆ ಉಚಿತ ‘ಟೆರ್ಮ್ ಇನ್ಸ್‍ರೇನ್ಸ್’ ಪಾಲಿಸಿಯನ್ನು ನೀಡುತ್ತದೆ. ಅಲ್ಲದೆ ನೌಕರರ ಮಕ್ಕಳ ವಿಧ್ಯಾಬ್ಯಾಸ, ಗೃಹ ಸಾಲ ಹಾಗೂ ವೈಯಕ್ತಿಕ ಮತ್ತು ವಾಹನ ಸಾಲಗಳಲ್ಲಿ ವಿಶೇಷ ಬಡ್ಡಿದರವನ್ನು ನೀಡಲಾಗುತ್ತದೆ ಎಂದರು.

ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಕ.ಕ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಮತ್ತು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ್ ಒಡಂಬಡಿಕೆ ವಿನಿಮಯಕ್ಕೆ ಸಹಿ ಹಾಕಿದರು. ಕೆನರಾ ಬ್ಯಾಂಕಿನ ಮತ್ತು ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X