Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ...

ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Dec 2025 4:05 PM IST
share
ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದವರಿಗೆ ಆರು ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕರ್ನಾಟಕ ಒಲಿಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಿಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದಿಸಿದ ಮುಖ್ಯಮಂತ್ರಿ, 1958 ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ. ನನ್ನ ಅವಧಿಯಲ್ಲೇ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನೂ ನಾನೇ ನೆರವೇರಿಸಿದ್ದೇನೆ. ಇಡೀ ದೇಶದಲ್ಲೇ ಆಂಧ್ರ ಮತ್ತು ಕೇರಳ ರಾಜ್ಯದಂತೆ ಕರ್ನಾಟಕದಲ್ಲಿಯೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯು ಎಲ್ಲಾ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು.

ಕ್ರೀಡಾ ಕ್ಷೇತ್ರಕ್ಕೆ ಸರಕಾರದ ಆದ್ಯತೆ

ನಮ್ಮ ಸರಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಆರು ಕೋಟಿ ರೂ.ಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಅಂತೆಯೇ ಬೆಳ್ಳಿ ಪದಕ ಪಡೆದರೆ ನಾಲ್ಕು ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ ಮೂರು ಕೋಟಿ ರೂ. ನಗದು ಬಹುಮಾನವನ್ನು ಸರಕಾರ ಘೋಷಿಸಿದೆ. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರಕಾರ ಈ ಕ್ರಮ ಕೈಗೊಂಡಿದೆ ಎಂದರು.

ಕ್ರೀಡಾ ಮೀಸಲಾತಿಯಡಿ ಸರಕಾರಿ ಉದ್ಯೋಗ: ಜನವರಿ 2026ರಲ್ಲಿ ಆದೇಶ

ಕ್ರೀಡಾಪಟುಗಳಿಗೆ ಸರಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ.2ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾ ಮೀಸಲಾತಿಯಡಿಯಲ್ಲಿ ಸರಕಾರಿ ಉದ್ಯೋಗದ ನೇಮಕಾತಿಗೆ ಸರಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X