ಆರೆಸ್ಸೆಸ್ ಮಾನಹಾನಿ ಪ್ರಕರಣ | ಕೆಳಹಂತದ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಿ: ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಕ್ರಿಮಿನಲ್ ಪ್ರಕರಣ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದ ಪ್ರಿಯಾಂಕ್ ಖರ್ಗೆ, ಮುಹಮ್ಮದ್ ನಲಪಾಡ್ ಹಾಗೂ ದಿನೇಶ್ ಗುಂಡೂರಾವ್

Photo credit: PTI
ಬೆಂಗಳೂರು: ಆರೆಸ್ಸೆಸ್ ಮಾನಹಾನಿ ಆರೋಪಕ್ಕೆ ಸಂಬಂಧಿಸಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದತಿ ಕೋರಿ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ಹಾಗೂ ದಿನೇಶ್ ಗುಂಡೂರಾವ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಿತು
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಇದ್ದ ಅವರ ಪೀಠ ಅರ್ಜಿಗಳ ವಿಚಾರಣೆ ನಡೆಸಿ ಇದಕ್ಕೆ ಸಂಬಂಧಿಸಿದಂತೆ ಕೆಳಹಂತದ ನ್ಯಾಯಾಲಯದಲ್ಲಿ ಪರಿಹಾರ ಕಂಡುಕೊಳ್ಳಿ ಎಂದು ಮೂವರು ಅರ್ಜಿದಾರರಿಗೂ ಸೂಚಿಸಿ ಅರ್ಜಿಗಳ ಇತ್ಯರ್ಥಪಡಿಸಿತು.
ಬೆಂಗಳೂರಿನ ಸಿದ್ಧಾಪುರದ ಆರೆಸ್ಸೆಸ್ ಕಾರ್ಯಕರ್ತ ಎ.ತೇಜಸ್ ಎಂಬವರು 2025ರ ಅಕ್ಟೋಬರ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ 'X' (ಟ್ವಿಟರ್) ಖಾತೆಯಲ್ಲಿ ಆರೆಸ್ಸೆಸ್ ಸದಸ್ಯರನ್ನು "ವಿಷಕಾರಿ" ಎಂದು ನಿಂದಿಸಿ, ಆ ಕಂಡುಕೊಳ್ಳಿ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಸಿಎಂಗೆ ಪತ್ರ ಬರೆದಿದ್ದರು. ಅವರಿಗೆ ಬೆಂಬಲವಾಗಿ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದರು ಹಾಗೂ ಮುಹಮ್ಮದ್ ನಲಪಾಡ್ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಸಂಘಟನೆಯ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಇದರಿಂದ ಸಂಘಟನೆಯ ಪ್ರತಿಷ್ಠೆಗೆ ಧಕ್ಕೆ ಬಂದಿದೆ ಎಂದು ದೂರುದಾರರು ಕೋರ್ಟ್ ಮೆಟ್ಟಿಲೇರಿದ್ದರು.
ಇದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಗೆ ಸಮನ್ಸ್ ಜಾರಿ ಮಾಡಿತ್ತು. ನಂತರ ಇಬ್ಬರು ಜಾಮೀನು ಪಡೆದುಕೊಂಡಿದ್ದರೆ ದಿನೇಶ್ ಗುಂಡೂರಾವ್ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ಕೈಬಿಟ್ಟಿತ್ತು.






