Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದ ಹಿಂದೂ-ಮುಸ್ಲಿಮರ ಮಧ್ಯೆ ಶಾಶ್ವತ...

ದೇಶದ ಹಿಂದೂ-ಮುಸ್ಲಿಮರ ಮಧ್ಯೆ ಶಾಶ್ವತ ದ್ವೇಷ ಕಟ್ಟಲು ಸಂಘಪರಿವಾರದಿಂದ ಯತ್ನ: ಚಿಂತಕ ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ12 Dec 2025 1:35 AM IST
share
ದೇಶದ ಹಿಂದೂ-ಮುಸ್ಲಿಮರ ಮಧ್ಯೆ ಶಾಶ್ವತ ದ್ವೇಷ ಕಟ್ಟಲು ಸಂಘಪರಿವಾರದಿಂದ ಯತ್ನ: ಚಿಂತಕ ಶಿವಸುಂದರ್
ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ 'ವಕ್ಫ್: ಅಪಪ್ರಚಾರ ಮತ್ತು ವಾಸ್ತವ' ಪುಸ್ತಕ ಬಿಡುಗಡೆ

ಬೆಂಗಳೂರು, ಡಿ.11: ಸಂಘಪರಿವಾರವು ಮುಸ್ಲಿಮರು ಹಾಗೂ ಹಿಂದೂಗಳ ಮಧ್ಯೆ ಶಾಶ್ವತ ದ್ವೇಷ ಕಟ್ಟಿ, ಅದರ ಫಲವನ್ನು ಉಣ್ಣಲು ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಮಾಜ ಚಿಂತಕರಾದ ಶಿವಸುಂದರ್‌ ಅಭಿಪ್ರಾಯಪಟ್ಟರು.

ಬೆಂಗಳೂರಿನ ಕ್ವೀನ್‌ ರಸ್ತೆಯಲ್ಲಿರುವ ಬಿಫ್ಟ್‌ ಸಭಾಂಗಣದಲ್ಲಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಕರ್ನಾಟಕವು ವಿವಿಧ ಲೇಖಕರು, ಚಿಂತಕರು ಹಾಗೂ ಪತ್ರಕರ್ತರ ಸಮಗ್ರ ಕೃತಿಯಾದ “ವಕ್ಫ್‌: ಅಪಪ್ರಚಾರ ಮತ್ತು ವಾಸ್ತವ” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಕ್ಫ್‌ ವಿಚಾರಗಳಲ್ಲಿ ಸುಪ್ರೀಂ ಕೋರ್ಟ್‌ ಕೂಡ ತನ್ನ ಮೂಲಭೂತ ಕರ್ತವ್ಯಗಳಿಂದ ಸಂಪೂರ್ಣವಾಗಿ ಹಿಂದೆ ಹೋಗುತ್ತಿದೆ. ವಕ್ಫ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ತೀಚಿನ ತೀರ್ಪುಗಳು ಕೂಡ ಬೇಸರ ಮೂಡಿಸಿವೆ. ಸಂಘಪರಿವಾರ ಹಿನ್ನೆಲೆಯುಳ್ಳ ಕೇಂದ್ರದ ಬಿಜೆಪಿ ಸರಕಾರ ಸಾವರ್ಕರ್‌ ಚಿಂತನೆಯ ಬ್ರಾಹ್ಮಣಶಾಹಿ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದೆ. ಕಳೆದ 10-11 ವರ್ಷಗಳಿಂದ ಅದರ ವೇಗ ಹೆಚ್ಚಾಗಿದೆ. 2024ರ ಜೂನ್‌ ತನಕ ಈ ವಕ್ಫ್‌ ಎಂಬ ಪ್ರಸ್ತಾಪವೇ ದೇಶದಲ್ಲಿ ಇರಲಿಲ್ಲ. ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲೂ ಕೂಡ ವಕ್ಫ್‌ ತಿದ್ದುಪಡಿ ತರುತ್ತೇವೆ ಎಂದೂ ಕೂಡ ಹೇಳಿರಲಿಲ್ಲ. ಮುಸ್ಲಿಂ ಸಮುದಾಯವನ್ನು ಹತ್ತಿಕ್ಕುವ ಸಲುವಾಗಿ ಈ ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಶಿವಸುಂದರ್‌ ಹೇಳಿದರು.

ಬಾಬರಿ ಮಸೀದಿ ಆಯಿತು, ಕಾಶ್ಮೀರ ಆಯಿತು ಈಗ ವಕ್ಫ್‌ ವಿಚಾರವನ್ನು ತಂದು ಮುಸ್ಲಿಂ ಸಮುದಾಯವನ್ನು ಶಾಶ್ವತವಾಗಿ ಹಿಂದೂಗಳ ವಿರುದ್ಧ ಎತ್ತಿಕಟ್ಟಲಾಗುತ್ತಿದೆ. ಮೋದಿ ಸರಕಾರ ವಕ್ಫ್‌ ಟ್ರಸ್ಟ್‌ ಸಾರ್ವಜನಿಕರಿಗೆ ಸೇರಿದ್ದು ಎಂಬುದನ್ನು ನಿರಾಕರಿಸಿ ಸಂವಿಧಾನಕ್ಕೆ ವಿರುದ್ಧವಾದ ಕೆಲಸಗಳನ್ನು ಮಾಡಲು ಹೊರಟಿದೆ. ಈಗ ಎಸ್‌ಐಆರ್‌ನಲ್ಲಿಯೂ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಲಾಗುತ್ತಿದೆ. ಇದಲ್ಲದೆ ಬೌದ್ಧ ಧರ್ಮದ ಟ್ರಸ್ಟ್‌ಗಳಲ್ಲೂ ಬ್ರಾಹ್ಮಣರನ್ನೂ ತಂದು ಕೂರಿಸುತ್ತಿರುವುದು ಕೂಡ ಆತಂಕಕಾರಿ ಬೆಳವಣಿಗೆ. ಈ ಹುನ್ನಾರದ ವಿರುದ್ಧ ಸಮಗ್ರ ಭಾರತದ ಪ್ರಜೆಗಳು ಎಚ್ಚೆತ್ತುಕೊಂಡು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಹೈಕೋರ್ಟ್ ವಕೀಲರಾದ ಅಕ್ಮಲ್‌ ರಿಝ್ವಿ ಮಾತನಾಡಿ, ಯುವಕರಿಂದ ಸಮಾಜದಲ್ಲಿ ಕೋಮುವಾದ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಆದರೆ 40-50 ವಯಸ್ಸಿನ ಕೌಟುಂಬಿಕ ಜವಾಬ್ದಾರಿ ಹೊತ್ತಿರುವುವವರಿಂದಲೇ ಕೋಮುವಾದ ತೀವ್ರವಾಗುತ್ತಿದೆ. ಜಗತ್ತಿನಲ್ಲಿ ಎಐ ವೇಗವಾಗಿ ಬೆಳೆಯುತ್ತಿದ್ದು, ಬಹುತೇಕರ ಉದ್ಯೋಗಗಳಿಗೆ ಕುತ್ತು ತರುತ್ತಿದೆ. ಆದರೆ ಆಡಳಿತ ನಡೆಸುತ್ತಿರುವವರು ಇದನ್ನು ಹೇಗೆ ಸರಿಪಡಿಸಬೇಕು ಎಂಬುದನ್ನು ಬಿಟ್ಟು ಧಾರ್ಮಿಕ ವಿಷಯಗಳನ್ನು ಸಮಾಜದ ಮೇಲೆ ಬಿತ್ತುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್‌ ಕರ್ನಾಟಕದ ಘಟಕಾಧ್ಯಕ್ಷರಾದ ಡಾ.ಮುಹಮ್ಮದ್ ಸಾದ್ ಬೆಳಗಾಮಿ, ಬೆಂಗಳೂರು ನಗರಾಧ್ಯಕ್ಷರಾದ ಹಾರೂನ್‌ ಸಫ್ದರ್‌, ಸೋಲಿಡಾರಿಟಿ ಯೂತ್‌ ಮೂಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ.ನಸೀಮ್‌ ಅಹ್ಮದ್‌, ಕಾರ್ಯದರ್ಶಿ ಇಸ್ಮಾಯಿಲ್‌ ತೀರ್ಥಹಳ್ಳಿ, ಈದಿನ ಡಾಟ್ ಕಾಮ್ ಡಿಜಿಟಲ್ ಮಾಧ್ಯಮದ ಹಿರಿಯ ಉಪಸಂಪಾದಕರಾದ ಚೇತನ್ ಕುಮಾರ್, ಪತ್ರಕರ್ತ ಇರ್ಷಾದ್‌ ವೇಣೂರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X