Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೌಜನ್ಯಾ ಪ್ರಕರಣ ಸಹಿತ 7 ಕೊಲೆಗಳ ಸಮಗ್ರ...

ಸೌಜನ್ಯಾ ಪ್ರಕರಣ ಸಹಿತ 7 ಕೊಲೆಗಳ ಸಮಗ್ರ ತನಿಖೆಯಾಗಲಿ : ಎಸ್.ಬಾಲನ್

ವಾರ್ತಾಭಾರತಿವಾರ್ತಾಭಾರತಿ24 Oct 2026 11:30 PM IST
share
ಸೌಜನ್ಯಾ ಪ್ರಕರಣ ಸಹಿತ 7 ಕೊಲೆಗಳ ಸಮಗ್ರ ತನಿಖೆಯಾಗಲಿ : ಎಸ್.ಬಾಲನ್

ಬೆಂಗಳೂರು : ಧರ್ಮಸ್ಥಳದ ಸೌಜನ್ಯಾ ಪ್ರಕರಣ ಸಹಿತ ಏಳು ಜನರ ಕೊಲೆ ನಡೆದಿವೆ. ಏಳು ಜನರನ್ನು ಕೊಲೆ ಮಾಡಿದ ಹಂತಕರು ಯಾರು ಎಂಬುದರ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಎಂದು ಹಿರಿಯ ವಕೀಲ ಎಸ್.ಬಾಲನ್ ಆಗ್ರಹಿಸಿದ್ದಾರೆ.

ಶನಿವಾರ ನಗರದ ಸೌಹಾರ್ದ ಸಭಾಂಗಣದಲ್ಲಿ ‘ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ’ಯ ವತಿಯಿಂದ ಆಯೋಜಿಸಿದ್ದ ‘ಸೌಜನ್ಯಾ ಹೋರಾಟ-ಮುಂದೇನು? ಸಮಾಲೋಚನಾ ಸಭೆ’ಯಲ್ಲಿ ಮತ್ತು ‘ಸೌಜನ್ಯಾ ತೀರ್ಪು’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸೌಜನ್ಯಾ ಪ್ರಕರಣವನ್ನು ತನಿಖೆ ಮಾಡಿರುವ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಭಾಸ್ಕರ್ ರೈ, ಸಿಐಡಿ ಅಧಿಕಾರಿಯಾಗಿದ್ದ ರುದ್ರಮುನಿ ಅವರನ್ನು ಬಂಧಿಸಬೇಕು. ನಿವೃತ್ತರಾಗಿದ್ದರೆ ಪಿಂಚಣಿ, ಗ್ರಾಚ್ಯುಟಿ ಸೇರಿ ಅವರು ಪಡೆದ ಎಲ್ಲಾ ಸೌಲಭ್ಯಗಳನ್ನೂ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಸೌಜನ್ಯಾ ಧರಿಸಿದ್ದ ಒಳ ಉಡುಪು ಮೃತದೇಹ ಬಿದ್ದಿದ್ದ ಸ್ಥಳದಲ್ಲಿ ಇರಲಿಲ್ಲ. ಅದನ್ನು ಕಂಡುಹಿಡಿದು ವಶಪಡಿಸಿಕೊಳ್ಳಬೇಕಾಗಿತ್ತು. ಒಳಉಡುಪು ಸಿಕ್ಕಿದ್ದರೆ ಡಿಎನ್‌ಎ ಪ್ರೊಫೈಲ್ ಪತ್ತೆಯಾಗುತ್ತಿತ್ತು. ಆದರೆ ಆ ಒಳಉಡುಪನ್ನೇ ವಶಪಡಿಸಿಕೊಂಡಿಲ್ಲ. ಹಾಗಾದರೆ ಇದಕ್ಕೆ ಅಪರಾಧಿ ಯಾರು? ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಭಾಸ್ಕರ್ ರೈ ಅವರೇ ಇದಕ್ಕೆ ಮುಖ್ಯ ಅಪರಾಧಿ. ಅವರು ಜೈಲಿಗೆ ಹೋಗಬೇಕು. ಅವರಿಗೆ ಗಲ್ಲು ಶಿಕ್ಷೆಯಾಗಬೇಕು. ಸಾಮೂಹಿಕ ಅತ್ಯಾಚಾರಿಗಳನ್ನು, ಕ್ರೂರ ಹಂತಕರನ್ನು ರಕ್ಷಿಸಿದ ಸಂಪೂರ್ಣ ನೇರ ಹೊಣೆ ಬೆಳ್ತಂಗಡಿ ಪೊಲೀಸ್ ಇನ್‌ಸ್ಪೆಕ್ಟರ್ ಭಾಸ್ಕರ್ ರೈ ಅವರದ್ದೇ ಎಂದು ಹೇಳಿದರು.

ಸೌಜನ್ಯಾಳ ಪಾದರಕ್ಷೆ, ಕೊಡೆ, ಪುಸ್ತಕಗಳನ್ನೂ ವಶಪಡಿಸಿಕೊಂಡಿಲ್ಲ. ಇವೆಲ್ಲವೂ ಅತ್ಯಂತ ಪ್ರಮುಖ ಪುರಾವೆಗಳು. ಮಲ್ಲಿಕ್ ಜೈನ್ ಸಂತೋಷ್ ರಾವ್‌ನನ್ನು ಹಿಡಿದು ಇನ್‌ಸ್ಪೆಕ್ಟರ್ ಭಾಸ್ಕರ್ ರೈ ಅವರಿಗೆ ಒಪ್ಪಿಸುತ್ತಾನೆ. ಭಾಸ್ಕರ್ ರೈ ಆತನನ್ನು ಬಂಧಿಸಿ, ಆತನಿಂದ ಸ್ವಯಂ ಹೇಳಿಕೆ ದಾಖಲಿಸಿಕೊಂಡು ಘಟನಾ ಸ್ಥಳಕ್ಕೆ ಕರೆದೊಯ್ಯುತ್ತಾರೆ. ಆದರೆ ವೈದ್ಯಕೀಯ ವರದಿಯ ಪ್ರಕಾರ ಇದು ಸಾಮೂಹಿಕ ಅತ್ಯಾಚಾರ ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು. ಸೌಜನ್ಯಾಳ ಪ್ರಕರಣವು ಕೇವಲ ಒಬ್ಬ ವ್ಯಕ್ತಿ ಎಸಗಿದ ಅತ್ಯಾಚಾರ ಮತ್ತು ಕೊಲೆಯಲ್ಲ; ಅದೊಂದು ಪೂರ್ವಯೋಜಿತ ಸಾಮೂಹಿಕ ಅತ್ಯಾಚಾರ. ಅಂದರೆ ಸೌಜನ್ಯಾಳನ್ನು ಆ ಸ್ಥಳದಿಂದ ಅಪಹರಿಸಿದ ಗ್ಯಾಂಗ್ ಬೇರೆಯೇ ಇದೆ ಎಂದು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಹೋರಾಟಗಾರ್ತಿ ಕೆ.ಎಸ್.ವಿಮಲಾ, ಜನವಾದಿ ಮಹಿಳಾ ಸಂಘಟನೆಯ ಚಂದ್ರಕುಮಾರಿ, ದೇವಿ ಮತ್ತಿತರರು ಉಪಸ್ಥಿತರಿದ್ದರು.

ಸೌಜನ್ಯಾ ಪರ ಹೋರಾಟ ಹೊಸ ಎಸ್‌ಐಟಿ ರಚನೆಯಾದ ತಕ್ಷಣ ನಿಲ್ಲುವುದಿಲ್ಲ. ಡಿಐಜಿ ಶಶಿಕುಮಾರ್ ನೇತೃತ್ವದ ಎಸ್‌ಐಟಿಯಿಂದ ನ್ಯಾಯ ಸಿಗುತ್ತೆ ಎನ್ನುವ ನಂಬಿಕೆ ಇಲ್ಲ. ಶಶಿಕುಮಾರ್, ಧರ್ಮಸ್ಥಳದವರ ಜೊತೆಗೆ ಇರುವಂತಹ ಫೋಟೊಗಳು, ವೀಡಿಯೊಗಳು ಇವೆ. ಅದರ ಜೊತೆಗೆ ಅವರು ಈ ಹಿಂದೆ ಬೇರೆ ಬೇರೆ ತನಿಖೆಗಳಲ್ಲಿ ನಡೆದುಕೊಂಡಂತಹ ರೀತಿ ಕೂಡ ನಮಗೆ ಗೊತ್ತಿದೆ. ಎಸ್‌ಐಟಿಯಲ್ಲಿರುವ ವೆಂಕಟೇಶ್ ಪ್ರಸನ್ನ, ಅವರ ಮೇಲಿರುವ ಭ್ರಷ್ಟಾಚಾರದ ಆರೋಪಗಳ ದಾಖಲೆಗಳು ನಮ್ಮ ಬಳಿಯಿವೆ.

ನವೀನ್ ಸೂರಿಂಜೆ, ಪತ್ರಕರ್ತ

Tags

S. Balan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X