Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ...

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಈಶ್ವರ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ12 March 2026 12:30 PM IST
share
ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದರು. ಸಫಾರಿ ದೇಶಾದ್ಯಂತ ಹಲವು ವರ್ಷಗಳಿಂದ ನಡೆಯುತ್ತಿದೆ. ಒಂದು ಸಮೀಕ್ಷೆಯನ್ನೂ ನಡೆಸದೆ ಸಫಾರಿಯನ್ನು ಏಕಾಏಕಿ ನಿಲ್ಲಿಸಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಸಫಾರಿಯನ್ನು ಏಕಾಏಕಿ ನಿಲ್ಲಿಸಲಿಲ್ಲ. ಕಳೆದ ನವೆಂಬರ್ ತಿಂಗಳಲ್ಲಿ 15 ದಿನಗಳ ಅಂತರದಲ್ಲಿ ಮೂರು ಅಮೂಲ್ಯ ಜೀವಹಾನಿ ಆಗಿತ್ತು, ಒಬ್ಬರು ಶಾಶ್ವತವಾಗಿ ಅಂಗವಿಕಲರಾದರು, ಹುಲಿಗಳು ಕಾಡಿನಿಂದ ಹೊರಗೆ ಬಂದು ದಾಳಿ ಮಾಡುತ್ತಿದ್ದವು. ಜನರ ಅಮೂಲ್ಯ ಜೀವ ರಕ್ಷಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದರು.

ನವೆಂಬರ್ ನಲ್ಲಿ ತಾವು ಚಾಮರಾಜನಗರದಲ್ಲಿ ಈ ಸಂಬಂಧ ಸಭೆ ನಡೆಸಿದಾಗ ಹಲವು ರೈತ ಸಂಘಟನೆಗಳು ಸಫಾರಿ ರಾತ್ರಿಯವರೆಗೂ ನಡೆಯುತ್ತಿದೆ. ಹೆಚ್ಚಿನ ವಾಹನಗಳ ಸಂಚಾರ ಇದೆ. ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ ಇದರಿಂದ ವಿಚಲಿತವಾಗಿ ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು ಸಫಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಮನವಿ ನೀಡಿದ್ದರು. ಈ ಮಧ್ಯೆ ತಾವು ಬೀದರ್ ನಲ್ಲಿದ್ದಾಗ ಒಂದು ವಾರದ ಅಂತರದಲ್ಲಿ ಮತ್ತೊಂದು ಹುಲಿದಾಳಿ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಿಬ್ಬಂದಿ ಮತ್ತು ವಾಹನವನ್ನು ಕಾಡಿನಂಚಿನ ಗ್ರಾಮದಲ್ಲಿ ನಿಗಾ ಇಡಲು ಬಳಸಲಾಯಿತು ಎಂದು ತಿಳಿಸಿದರು.

ಬಂಡೀಪುರದಲ್ಲಿ 314 ಕಿ.ಮೀ. ಗಡಿ ಇದೆ. ಅದರಲ್ಲಿ 100 ಕಿಮೀ ಗಡಿ ಹೆಚ್ಚಿನ ಸಂಘರ್ಷ ಪ್ರದೇಶವಾಗಿದೆ. ಆ ಪ್ರದೇಶದಲ್ಲಿ 25 ಕಳ್ಳಬೇಟೆ ನಿಗ್ರಹ ಶಿಬಿರ ಸ್ಥಾಪಿಸಿ, ಸಿಬ್ಬಂದಿ ನೇಮಿಸಿ ಅವರಿಂದ 14 ಗಂಟೆ ಗಸ್ತು ಹಾಕಲು ಸೂಚಿಸಲಾಯಿತು. ಸಮಗ್ರ ಕಮಾಂಡ್ ಸೆಂಟರ್ ಕಾರ್ಯಾರಂಭ ಮಾಡಿಸಲಾಯಿತು. ಮುಂದೆ ಅನಾಹುತ ನಡೆಯದಂತೆ ಎಲ್ಲ ಪೂರ್ವಸಿದ್ಧತೆ ಮಾಡಿಕೊಂಡ ಬಳಿಕ ಸಫಾರಿ ಪುನಾರಂಭಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮಿಗಿಲಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಕೇಂದ್ರ ವನ್ಯಜೀವಿ ಸಂಸ್ಥೆಯ ಪ್ರತಿನಿಧಿಯನ್ನೂ ಒಳಗೊಂಡ ತಜ್ಞರ ಸಮಿತಿ ರಚಿಸಿ, ಆ ತಜ್ಞರ ಸಮಿತಿಯ ಪ್ರಾಥಮಿಕ ವರದಿಯ ಆಧಾರದಲ್ಲಿ ಸಫಾರಿ ಪುನಾರಂಭ ಮಾಡಲಾಗಿದೆ ಎಂದು ವಿವರಿಸಿದರು.

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಹುಲಿಗಳಿದ್ದವು. 3 ವರ್ಷಗಳ ಹಿಂದೆ ಗಣತಿ ನಡೆದಾಗ ಅಲ್ಲಿ 150 ಹುಲಿ ಇದ್ದವು. ಈಗ ಹುಲಿಗಳ ಸಂಖ್ಯೆ 175ಕ್ಕೇ ಏರಿದೆ. ಕಾಡಿನ ಧಾರಣಾ ಸಾಮರ್ಥ್ಯ ತಿಳಿಯಲು ತಜ್ಞರ ಸಮಿತಿಯಿಂದ ವರದಿ ತರಿಸಿಕೊಳ್ಳುತ್ತಿದ್ದೇವೆ. ಕಾಡು ಹೆಚ್ಚುತ್ತಿಲ್ಲ. ಬದಲಾಗಿ ಕ್ಷೀಣಿಸುತ್ತಿದೆ. ಸಫಾರಿ ಪುನಾರಂಭ ಮಾಡಿದ ಬಳಿಕ ಪ್ರತಿಷ್ಠಾನಕ್ಕೆ ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದಲ್ಲಿ ಜನಸಂಪರ್ಕ ಸಭೆ ಮಾಡಲು, ಶಿಕ್ಷಣ, ಮೂಲಸೌಕರ್ಯ ಹೆಚ್ಚಳಕ್ಕೆ, ಉದ್ಯೋಗ ಸೃಷ್ಟಿಗೆ ಬಳಸಲು ಸೂಚಿಸಲಾಗಿದೆ ಎಂದು ಸದನಕ್ಕೆ ಈಶ್ವರ ಖಂಡ್ರೆ ತಿಳಿಸಿದರು.

Tags

safariEshwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X