Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಔಷಧ ಮಳಿಗೆಗಳಲ್ಲೇ ‘ಡ್ರಗ್ಸ್ ಮಾದರಿ’...

ಔಷಧ ಮಳಿಗೆಗಳಲ್ಲೇ ‘ಡ್ರಗ್ಸ್ ಮಾದರಿ’ ಮಾತ್ರೆಗಳ ಮಾರಾಟ ದಂಧೆ : ಬಿ.ವೈ.ವಿಜಯೇಂದ್ರ ಕಿಡಿ

ವಾರ್ತಾಭಾರತಿವಾರ್ತಾಭಾರತಿ27 May 2024 8:54 PM IST
share
ಔಷಧ ಮಳಿಗೆಗಳಲ್ಲೇ ‘ಡ್ರಗ್ಸ್ ಮಾದರಿ’ ಮಾತ್ರೆಗಳ ಮಾರಾಟ ದಂಧೆ : ಬಿ.ವೈ.ವಿಜಯೇಂದ್ರ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಅವಧಿ ಮೀರಿರುವ ಕ್ರಿಮಿನಲ್ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಸೋಮವಾರ ಎಕ್ಸ್ ಜಾಲತಾಣದಲ್ಲಿ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಅವರು, ‘ಡ್ರಗ್ಸ್, ಗಾಂಜಾ ಪದಾರ್ಥಗಳ ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದೆ, ಇದರ ಪರಿಣಾಮ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದು ಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರದ ನಿಷ್ಕ್ರೀಯ ಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ. ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದ್ರೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಈ ಸರಕಾರ ಪ್ರಜೆಗಳಿಗೆ ಯಾವ ಭಾಗ್ಯ ಕರುಣಿಸುತ್ತದೋ ಇಲ್ಲವೋ ಗೊತ್ತಿಲ್ಲ ಆದರೆ ‘ರಕ್ಷಣೆಯ ಭಾಗ್ಯವನ್ನಾದರೂ ಕಲ್ಪಿಸಿ ನಾಗರಿಕ ಸಮಾಜದಲ್ಲಿ ಸುರಕ್ಷತಾ ಭಾವ ಮೂಡಿಸಲಿ'. ಆ ಮೂಲಕ ಜನರ ಶಾಪದಿಂದ ಮುಕ್ತಿಕಾಣಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

ರೇವ್ ಪಾರ್ಟಿಗಳು ಹಾಗೂ ಹಾದಿ-ಬೀದಿಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿರುವುದರ ಹಾಗೂ ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬಿಜೆಪಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾದೀತು ಎಂದು ಅವರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X