Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಶೇಷಚೇತನರಿಗೆ ಶಿಕ್ಷಣ, ಉದ್ಯೋಗದಲ್ಲಿ...

ವಿಶೇಷಚೇತನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ : ಸಂತೋಷ್‌ ಲಾಡ್

ವಾರ್ತಾಭಾರತಿವಾರ್ತಾಭಾರತಿ10 Jan 2026 8:38 PM IST
share
ವಿಶೇಷಚೇತನರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ : ಸಂತೋಷ್‌ ಲಾಡ್

ಬೆಂಗಳೂರು : ವಿಶೇಷಚೇತನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಸಚಿವ ಸಂಪುಟದ ಮುಂದೆ ಈ ಮಸೂದೆ ಬರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಹೇಳಿದರು.

ಶನಿವಾರ ಸ್ನೇಹದೀಪ ಅಂಗವಿಕಲರ ಸಂಸ್ಥೆಯು ಮಲ್ಲೇಶ್ವರದಲ್ಲಿರುವ ಜಲಮಂಡಳಿ ರಜತ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ (ರಾಜ್ಯ ಮಟ್ಟದ ಸಾಂಸ್ಕೃ ತಿಕ ಕಾರ್ಯಕ್ರಮ) ದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ 35 ಲಕ್ಷ ವಿಶೇಷಚೇತನರು ಇದ್ದಾರೆ ಎಂಬ ಅಂದಾಜು ಇದೆ. ಇವರಿಗೆ ಸರಕಾರದ ನೆರವು ಸಿಗಬೇಕು. ಆದುದರಿಂದ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಚಿಂತನೆ ನಡೆದಿದೆ. ಖಾಸಗಿ ಉದ್ದಿಮೆಗಳಲ್ಲಿ ಶೇ.5ರಷ್ಟು ಮೀಸಲು ಸಿಗಬೇಕು. ಇಡೀ ದೇಶದಲ್ಲೆ ಮೊದಲ ಬಾರಿಗೆ ಇಂತಹ ಕ್ರಮಕ್ಕೆ ಸರಕಾರ ಮುಂದಾಗಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಸಂತೋಷ್ ಲಾಡ್ ಹೇಳಿದರು.

ಅಧಿಕಾರದಲ್ಲಿ ಇರುವವರು ಸಮಾಜಕ್ಕೆ ಏನಾದರೂ ಉಪಯೋಗವಾಗುವಂತ ಕೆಲಸ ಮಾಡಬೇಕು. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೋ ಗೊತ್ತಿಲ್ಲ. ಸ್ನೇಹದೀಪ ಅಂಗವಿಕಲರ ಸಂಸ್ಥೆ ವಿಶೇಷಚೇತರಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದೆ. ಇಂತಹವರಿಗೆ ಬೆಂಬಲ ನೀಡಬೇಕು. ವಿಶೇಷಚೇತನ ಮಕ್ಕಳ ಭವಿಷ್ಯ ಉಜ್ವಲವಾಗಲು ಸರಕಾರವೂ ಮುಂದೆ ಬರಬೇಕು ಎಂದು ಅವರು ನುಡಿದರು.

ನಾವು ವಿಶೇಷಚೇತನರ ಬಗ್ಗೆ ಮಾತನಾಡುತ್ತೇವೆ. ಕನಸು ಕಾಣಲು ಕಣ್ಣು ಬೇಕಾಗಿಲ್ಲ. ನಮಗೆ ದೃಷ್ಟಿ ಇದೆ. ಆದರೆ ವಿಷನ್ ಇಲ್ಲ. ವಿಶೇಷಚೇತನರ ಹೃದಯ ಮತ್ತು ಮನಸ್ಸು ಸುಂದರವಾಗಿದೆ. ನಮಗೆ ದೇವರು ಎಲ್ಲ ಅವಕಾಶ ನೀಡಿದ್ದಾನೆ. ವಿಶೇಷಚೇತನರನ್ನು ನೋಡಿ ನಾವೆಲ್ಲ ಕಲಿಯಬೇಕು. ಉಸಿರು ಇರುವವರೆಗೆ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಸಂತೋಷ್ ಲಾಡ್ ಹೇಳಿದರು.

ಈ ಕಾರ್ಯಕ್ರಮದಲ್ಲಿ ಸ್ನೇಹದೀಪ ಟ್ರಸ್ಟ್‌ ನ ವ್ಯವಸ್ಥಾಪಕ ಟ್ರಸ್ಟಿ ಡಾ.ಪೌಲ್ ಮುದ್ದಾ, ಹಿರಿಯ ಗಾಯಕಿ ಡಾ.ಪ್ರಿಯದರ್ಶಿನಿ, ಹಿರಿಯ ವ್ಯವಸ್ಥಾಪಕಿ ಭಾರತಿ ರಾಮ್‍ಬಜ್, ಲಯನ್ಸ್ ಇಂಟರ್ ನ್ಯಾಷನಲ್‍ನ ಸಶ ಕೊಲತುಂಗಾ ಮತ್ತಿತರರು ಉಪಸ್ಥಿತರಿದ್ದರು.

Tags

Santosh Lad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X