ಬೆಂಗಳೂರು | ಅಕ್ರಮ ಪಟಾಕಿ ದಾಸ್ತಾನು ಮಾಡುವವರ ವಿರುದ್ಧ ಕ್ರಮ : ಸೀಮಂತ್ ಕುಮಾರ್ ಸಿಂಗ್

ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು, ಅ.14: ಬೆಂಗಳೂರು ವ್ಯಾಪ್ತಿಯಲ್ಲಿ ದೀಪಾವಳಿ ಹಿನ್ನೆಲೆ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಸಿದ್ದಾರೆ.
ಮಂಗಳವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಸಂದರ್ಭದಲ್ಲಿ ಪರವಾನಿಗೆ ಪಡೆದಿರುವವರು ಮಾತ್ರ ಪಟಾಕಿಗಳನ್ನು ಸರಿಯಾದ ರೀತಿಯಲ್ಲಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡಬೇಕು. ಜತೆಗೆ, ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದರು.
ಬೆಂಗಳೂರು ನಗರಕ್ಕೆ ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿದೆ ಎಂಬುವುದನ್ನು ಪತ್ತೆ ಹಚ್ಚಲು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಈ ತಂಡ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.
Next Story





