Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಬಸವಮಂಟಪ’ ಕೃತಿ ಮುಟ್ಟುಗೋಲು ಹಾಕಿ,...

‘ಬಸವಮಂಟಪ’ ಕೃತಿ ಮುಟ್ಟುಗೋಲು ಹಾಕಿ, ವಿಡಿಯೋ ತೆಗೆದುಹಾಕಿ: ಸಚಿವ ಈಶ್ವರ್‌ ಖಂಡ್ರೆ ಆಗ್ರಹ

ಬಸವಣ್ಣ, ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಲೇಖಕ ರವಿ ಹಂಜ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಒತ್ತಾಯ

ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ19 Nov 2026 2:00 PM IST
share
‘ಬಸವಮಂಟಪ’ ಕೃತಿ ಮುಟ್ಟುಗೋಲು ಹಾಕಿ, ವಿಡಿಯೋ ತೆಗೆದುಹಾಕಿ: ಸಚಿವ ಈಶ್ವರ್‌ ಖಂಡ್ರೆ ಆಗ್ರಹ

ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎನ್ನಲಾದ ಲೇಖಕ ರವಿ ಹಂಜ್ ಅವರ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಸಾಮಾಜಿಕ ಜಾಲತಾಣಗಳಿಂದ ಈ ಸಂಬಂಧದ ಎಲ್ಲ ವಿಡಿಯೋಗಳನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ್ ಬಿ.ಖಂಡ್ರೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಸಚಿವನಾಗಿ ತಾವು ಒಂದು ಕೃತಿಯನ್ನು ಮುಟ್ಟುಗೋಲು ಹಾಕುವಂತೆ ಬಹಿರಂಗವಾಗಿ ಒತ್ತಾಯಿಸಬಾರದು. ಆದರೆ ಇಡೀ ಲಿಂಗಾಯತ ಸಮುದಾಯ ಹಾಗೂ ವಿಶ್ವಗುರು ಬಸವಣ್ಣನವರ ಅನುಯಾಯಿಗಳಿಗೆ ಘಾಸಿ ಉಂಟುಮಾಡುವ ರೀತಿಯಲ್ಲಿ ಆಧಾರರಹಿತ ಆರೋಪಗಳನ್ನು ಮಾಡಿರುವ ರವಿ ಹಂಜ್ ಅವರ ಕೃತಿ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಿದೆ. ಆದ್ದರಿಂದ ಈ ಕೃತಿಯನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಸಂವಿಧಾನದತ್ತವಾದ ವಾಕ್‌ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಾವು ಗೌರವ ನೀಡುತ್ತೇನೆ. ಆದರೆ ಬಸವಣ್ಣನವರನ್ನು ಕೊಲೆಗಡುಕ, ದರೋಡೆಕೋರ ಎಂದು ಬಣ್ಣಿಸುವುದು ಹಾಗೂ ಬಿಜ್ಜಳನ ಖಜಾನೆಯನ್ನು ದುರುಪಯೋಗಪಡಿಸಿಕೊಂಡು ಶರಣ ದಾಸೋಹ ಮಾಡಿದರು ಎಂಬಂತಹ ಅವಹೇಳನಕಾರಿ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಈ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ಸಂಬಂಧ ರವಿ ಹಂಜ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ವಿಡಿಯೋಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ.

ಲಿಂಗಾಯತರನ್ನು ‘ಲಿಂಗಾಹತರು’ ಎಂದು ಕರೆದಿರುವುದು ಪ್ರಚೋದನಕಾರಿ ಹೇಳಿಕೆಯಾಗಿದೆ. ಇದು ವಿಶ್ವದಾದ್ಯಂತ ಇರುವ ಬಸವಭಕ್ತರ ಮನಸ್ಸಿಗೆ ತೀವ್ರ ನೋವುಂಟುಮಾಡಿದ್ದು, ಲಿಂಗಾಯತ ಸಮುದಾಯಕ್ಕೂ ವೇದನೆ ಉಂಟುಮಾಡಿದೆ. ಭಾವನಾತ್ಮಕ ವಿಚಾರಗಳ ಕುರಿತು ಯಾವುದೇ ಸಂಶೋಧನೆ ನಡೆಸದೆ ಸ್ವಯಂಘೋಷಿತ ಸಂಶೋಧಕರೆಂದು ಮಾತನಾಡುತ್ತಿರುವ ವ್ಯಕ್ತಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Tags

BasavamantapaBookVideosEshwar Khandre
share
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
ಪ್ರಕಾಶ್ ಸಿ. ರಾಮಜೋಗಿಹಳ್ಳಿ/ವಾರ್ತಾಭಾರತಿ
Next Story
X