Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿರಿಯ ಪತ್ರಕರ್ತ, ಲೇಖಕ, ಚಲನಚಿತ್ರ...

ಹಿರಿಯ ಪತ್ರಕರ್ತ, ಲೇಖಕ, ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿಧನ

ವಾರ್ತಾಭಾರತಿವಾರ್ತಾಭಾರತಿ28 Jun 2026 10:19 AM IST
share
ಹಿರಿಯ ಪತ್ರಕರ್ತ, ಲೇಖಕ, ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ, ಕನ್ನಡ ಚಲನಚಿತ್ರ ನಿರ್ದೇಶಕರೂ ಆಗಿದ್ದ ಎನ್.ಎಸ್. ಶಂಕರ್ ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿಂದು ಕೊನೆಯುಸಿರೆಳೆದಿದ್ದಾರೆ.

ಕ್ರೀಯಾಶೀಲ ಪತ್ರಕರ್ತರಾಗಿದ್ದ ಅವರು ಮುಂಗಾರು, ಲಂಕೇಶ್ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ಸೃಜನಶೀಲ ಲೇಖಕರೂ ಆಗಿದ್ದ ಅವರು ಚಲನಚಿತ್ರ ನಿರ್ದೇಶಕರಾಗಿಯೂ ಹೆಸರುವಾಸಿಯಾಗಿದ್ದರು.

ಅವರು 1997ರಲ್ಲಿ ನಿರ್ದೇಶಿಸಿದ ತಮ್ಮ ಚೊಚ್ಚಲ ಸಿನೆಮಾ ‘ಉಲ್ಟಾ ಪಲ್ಟಾ’ ಭಾರೀ ಯಶಸ್ಸು ತಂದುಕೊಟ್ಟಿತು. ವಿಲಿಯಂ ಶೇಕ್ಸ್ ಪಿಯರ್ ಅವರ ಪ್ರಸಿದ್ಧ ಕೃತಿ ‘ದಿ ಕಾಮಿಡಿ ಆಫ್ ಎರರ್ಸ್’ ಆಧಾರಿತ ಈ ಹಾಸ್ಯ ಪ್ರಧಾನ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇಂದಿಗೂ ಗುರುತಿಸಲ್ಪಟ್ಟಿದೆ.

ಅವರು ಸಾಂಸ್ಕೃತಿಕ ಚಳವಳಿಗಳು ಮತ್ತು ಬಂಡಾಯ ಸಾಹಿತ್ಯದ ತತ್ವಗಳಿಗೆ ಸದಾ ಧ್ವನಿಯಾಗಿದ್ದರು. 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಎನ್.ಎಸ್. ಶಂಕರ್, ಇತ್ತೀಚೆಗೆ ‘ಈಗ…’ ಎಂಬ ಮೂರು ಸಣ್ಣ ಕಥೆಗಳ ಆಂಥಾಲಜಿ ಸಿನಿಮಾ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಶಂಕರ್ ಅವರ ಅಪಾರ ಸಾಧನೆಗಾಗಿ 2024ರಲ್ಲಿ ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಪತ್ರಕರ್ತರ ಸಂಘ ಸಂತಾಪ

ಮುಂಗಾರು, ಲಂಕೇಶ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ಪತ್ರಕರ್ತ ಮತ್ತು ಉಲ್ಟಾ -ಪಲ್ಟಾ ಚಿತ್ರ ನಿರ್ದೇಶನ ಖ್ಯಾತಿಯ ಎನ್.ಎಸ್.ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಶಂಕರ್ ಅವರ ಹಿರಿತನದ ವೃತ್ತಿ ಸೇವೆ ಸ್ಮರಿಸಿ ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಗೌರವಿಸಿದ್ದು ಮರೆಯಲಾಗದ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೆನಪಿಸಿಕೊಂಡಿದ್ದಾರೆ.

ಎನ್.ಎಸ್.ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ತಗಡೂರು ಪ್ರಾರ್ಥಿಸಿದ್ದಾರೆ.

Tags

N.S. Shankar Passes Away
share
ವಾರ್ತಾಭಾರತಿ
ವಾರ್ತಾಭಾರತಿ
Next Story
X