Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ ಬಯೋಡೀಸಲ್ ರೀಟೆಲ್ ಔಟ್...

ರಾಜ್ಯದಲ್ಲಿ ಬಯೋಡೀಸಲ್ ರೀಟೆಲ್ ಔಟ್ ಲೆಟ್‌ಗಳ ಸ್ಥಾಪನೆಗೆ ಅದ್ಯತೆ : ಎಸ್.ಈ.ಸುಧೀಂದ್ರ

ವಾರ್ತಾಭಾರತಿವಾರ್ತಾಭಾರತಿ4 March 2025 5:49 PM IST
share
ರಾಜ್ಯದಲ್ಲಿ ಬಯೋಡೀಸಲ್ ರೀಟೆಲ್ ಔಟ್ ಲೆಟ್‌ಗಳ ಸ್ಥಾಪನೆಗೆ ಅದ್ಯತೆ : ಎಸ್.ಈ.ಸುಧೀಂದ್ರ

ಬೆಂಗಳೂರು: ರಾಜ್ಯದಲ್ಲಿ ಉದ್ದೇಶಿತ ಬಯೋಡೀಸಲ್ (ಬಿ-100) ಬಳಕೆಯನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಬಯೋಡೀಸಲ್ ರೀಟೆಲ್ ಔಟ್ ಲೆಟ್‌ಗಳ ಸ್ಥಾಪನೆಗೆ ಅದ್ಯತೆ ನೀಡಲಾಗುವುದು ಎಂದು ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರೊಂದಿಗೆ ರಾಜ್ಯದಲ್ಲಿ ಬಯೋಡೀಸಲ್ ಮಾರಾಟಕ್ಕಾಗಿ ರೀಟಲ್ ಔಟ್ ಲೆಟ್ ಗಳನ್ನು ಆರಂಭಿಸಲು ಪರವಾನಗಿಗಳನ್ನು ನೀಡುವ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸರಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಂತ್ರಾಲಯ 2019ರಲ್ಲಿಯೇ ರಾಷ್ಟ್ರದಲ್ಲಿ ಬಯೋಡೀಸಲ್‌ ಅನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಮತಿಸಿರುವುದನ್ನು ಎಸ್.ಈ.ಸುಧೀಂದ್ರ ಅವರು ಸಚಿವರ ಗಮನಕ್ಕೆ ತಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿ ಕುರಿತು ವಿಶೇಷ ಆಸಕ್ತಿ ವಹಿಸಿರುವುದರ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ ಎಸ್.ಈ.ಸುಧೀಂದ್ರ ಅವರು, ಚಾಲ್ತಿಯಲ್ಲಿರುವ ಜೈವಿಕ ಇಂಧನ ಯೋಜನೆಗಳ ಜೊತೆಗೆ ರಾಜ್ಯಕ್ಕೆ ನೂತನ ಜೈವಿಕ ಇಂಧನ ನೀತಿಯನ್ನು ರೂಪಿಸುವ ದಿಸೆಯಲ್ಲಿ ಕಾರ್ಯತತ್ಪರವಾಗಿರುವುದನ್ನು ಸಚಿವರ ಗಮನಕ್ಕೆ ತಂದರು.

ಇದೇ ವೇಳೆ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಅವರು, ರಾಜ್ಯದಲ್ಲಿ ಬಿ-100 ಬಳಕೆಯನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಬಯೋಡೀಸಲ್ ರೀಟೆಲ್ ಔಟ್ ಲೆಟ್ ಗಳ ಸ್ಥಾಪನೆಗೆ ಅದ್ಯತೆಯನ್ನು ನೀಡಲು ಸಚಿವರನ್ನು ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೆಎಚ್‌ ಮುನಿಯಪ್ಪ ಅವರು, ಕೂಡಲೇ ಸಭೆಯಲ್ಲಿದ್ದ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿ ಇನ್ನೊಂದು ವಾರದಲ್ಲಿ ಸೂಕ್ತ ಆದೇಶ ಹೊರಡಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಈ ಸಭೆಯಲ್ಲಿ ಆಹಾರ, ನಾಗರೀಕ ಸರಬರಾಜು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಜೈನ್ , ಆಯುಕ್ತರಾದ ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್.ಲೋಹಿತ್, ಯೋಜನಾ ಸಲಹೆಗಾರರಾದ ಡಾ.ದಯಾನಂದ ಜಿ.ಎನ್ ಸೇರಿ ಇಲಾಖೆ ಹಾಗೂ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X