Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ಮಹಿಳೆಯರಿಗೆ ಉದ್ಯೋಗಾವಕಾಶ...

ರಾಜ್ಯದ ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸಿದ ಶಕ್ತಿ ಯೋಜನೆ : ವರದಿ

ವಾರ್ತಾಭಾರತಿವಾರ್ತಾಭಾರತಿ26 July 2025 1:02 AM IST
share
ರಾಜ್ಯದ ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸಿದ ಶಕ್ತಿ ಯೋಜನೆ : ವರದಿ

ಬೆಂಗಳೂರು : ಶಕ್ತಿ ಯೋಜನೆಯಿಂದಾಗಿ ರಾಜ್ಯಾದ್ಯಂತ ಮಹಿಳೆಯರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದೆ ಎಂದು ಸಸ್ಟೈನೇಬಲ್ ಮೊಬಿಲಿಟಿ ನೆಟ್‌ವರ್ಕ್ ಮತ್ತು ನಿಕೋರ್ ಅಸೋಸಿಯೇಟ್ಸ್ ಸಂಸ್ಥೆಗಳು ಸಿದ್ಧಪಡಿಸಿದ ಜಂಟಿ ಅಧ್ಯಯನ ವರದಿಯು ತಿಳಿಸಿದೆ.

ಉಚಿತ ಪ್ರಯಾಣ ಯೋಜನೆಗಳನ್ನು ಹೊಂದಿರುವ ದಿಲ್ಲಿ ಮತ್ತು ಕರ್ನಾಟಕ, ಹೊಂದದಿರುವ ಪಶ್ಚಿಮ ಬಂಗಾಳ ಮತ್ತು ಕೇರಳ ಮತ್ತು ಪ್ರಯಾಣ ದರದಲ್ಲಿ ಶೇ.50 ರಿಯಾಯಿತಿ ಕಲ್ಪಿಸಿರುವ ಮಹಾರಾಷ್ಟ್ರ ರಾಜ್ಯಗಳಲ್ಲಿನ ಒಟ್ಟು ಹತ್ತು ನಗರಗಳಲ್ಲಿ ಈ ಸಮೀಕ್ಷೆ ಕೈಗೊಳ್ಳಲಾಗಿತ್ತು. ಇದು ಉಚಿತ ಸಾರ್ವಜನಿಕ ಸಾರಿಗೆ ಯೋಜನೆಯನ್ನು ಕುರಿತಂತೆ ಹಲವು ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿ ಸಿದ್ಧಪಡಿಸಿದ ಮೊದಲ ವಿಶ್ಲೇಷಣಾ ವರದಿಯಾಗಿದ್ದು, ಸಂಸ್ಥೆಗಳು ಶುಕ್ರವಾರದಂದು ವರದಿಯನ್ನು ಬಿಡುಗಡೆ ಮಾಡಿವೆ.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ.21ರಷ್ಟು ಏರಿಕೆಯಾಗಿದೆ. ರಾಜ್ಯದ ಶಕ್ತಿ ಯೋಜನೆಯ ಮಾದರಿಯಲ್ಲಿಯೇ ಇತರ ರಾಜ್ಯಗಳು ಸರಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ, ಪ್ರಯಾಣ ದರದಲ್ಲಿ ಶೇ.50 ರಿಯಾಯಿತಿ ಮಾದರಿಯ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ, ಕರ್ನಾಟಕದ ಸಾಧನೆ ಇತರ ರಾಜ್ಯಗಳನ್ನು ಮೀರಿಸಿದೆ ಎಂದು ವರದಿ ಬಹಿರಂಗ ಪಡಿಸಿದೆ.

ಉಚಿತ ಬಸ್ ಸೇವೆಯಿಂದ ಮಹಿಳೆಯರಿಗೆ ಪ್ರತಿ ತಿಂಗಳು ಶೇ.30ರಿಂದ ಶೇ.50ರವರೆಗೆ ಮಾಸಿಕ ಉಳಿತಾಯ ಸಾಧ್ಯವಾಗುತ್ತಿದೆ. ಈ ಯೋಜನೆಯು ಮಹಿಳೆಯರಿಗೆ ಉತ್ತಮ ಉದ್ಯೋಗಾವಕಾಶಗಳು, ಉತ್ತಮ ವೇತನ ಮತ್ತು ಉದ್ಯಮಿಗಳಾಗಿ ರೂಪುಗೊಳ್ಳಲು ಉತ್ತಮ ಮಾರುಕಟ್ಟೆಯ ಸೌಲಭ್ಯಗಳನ್ನು ಕಂಡುಕೊಳ್ಳುವ ಮೂಲಕ ಅವರನ್ನು ಸಶಕ್ತರನ್ನಾಗಿಸಿದೆ ಎಂದು ವರದಿಯು ಹೇಳಿದೆ.

ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಲಿಂಗ-ಸಂವೇದನಾಶೀಲ ಸಿಬ್ಬಂದಿ ನಿಯೋಜನೆ ಮಾಡಬೇಕು. ಎಲ್ಲರಿಗೂ ಸುಗಮ, ಕೈಗೆಟುಕುವ ಸಾರಿಗೆಯನ್ನು ಖಾತ್ರಿಪಡಿಸಲು ಮೊದಲ ಮತ್ತು ಕೊನೆಯ ನಿಲ್ದಾಣಗಳ ನಡುವಿನ ಪ್ರಯಾಣವನ್ನು ಉತ್ತಮಗೊಳಿಸಬೇಕು ಎಂದು ವರದಿಯು ಶಿಫಾರಸು ಮಾಡಿದೆ.

ಉಚಿತ ಸಾರಿಗೆ ಸೌಲಭ್ಯದಿಂದ ಮಹಿಳೆಯರು ಸಾಕಷ್ಟು ಅನುಕೂಲತೆಗಳನ್ನು ಪಡೆಯುತ್ತಿದ್ದರೂ, ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆ ಇನ್ನೂ ಅಪೂರ್ಣವಾಗಿಯೇ ಉಳಿದಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸಿದ ಅರ್ಧಕ್ಕಿಂತ ಕಡಿಮೆ ಮಹಿಳೆಯರು ಮಾತ್ರ ಪ್ರಯಾಣದ ಸಮಯದಲ್ಲಿ ತಮಗೆ ಸುರಕ್ಷತೆ ಇದೆ ಎಂಬುದಾಗಿ ಹೇಳಿದ್ದಾರೆ. ಕಿರುಕುಳ, ಜನದಟ್ಟಣೆ, ಮತ್ತು ಬಸ್ ಸ್ಟಾಪ್‌ಗಳಲ್ಲಿ ಕಳಪೆ ಬೆಳಕು ಮತ್ತು ಸಿಬ್ಬಂದಿಯ ಕೊರತೆಯು ಯೋಜನೆಗೆ ಹಿನ್ನಡೆಯಾಗುತ್ತಿದೆ ಎಂದು ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X