Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮಾತೃಭಾಷೆ ಸಿನೆಮಾ ಪ್ರಚಾರಗೊಳಿಸುವುದು...

ಮಾತೃಭಾಷೆ ಸಿನೆಮಾ ಪ್ರಚಾರಗೊಳಿಸುವುದು ಸರಕಾರದ ಹೊಣೆ : ಶಾಲಿನಿ ರಜನೀಶ್

ವಾರ್ತಾಭಾರತಿವಾರ್ತಾಭಾರತಿ24 Nov 2024 10:16 PM IST
share
ಮಾತೃಭಾಷೆ ಸಿನೆಮಾ ಪ್ರಚಾರಗೊಳಿಸುವುದು ಸರಕಾರದ ಹೊಣೆ : ಶಾಲಿನಿ ರಜನೀಶ್

ಬೆಂಗಳೂರು: ಮಾತೃಭಾಷೆಯ ಸಿನೆಮಾಗಳನ್ನು ಹೆಚ್ಚು ಪ್ರಚಾರಗೊಳಿಸುವುದು, ನಮ್ಮ ಸರಕಾರದ ಹೊಣೆಗಾರಿಕೆಯಾಗಿದೆ. ಪಿ.ಶೇಷಾದ್ರಿ ನಿರ್ದೇಶನದಂತಹ ಸಿನೆಮಾಗಳನ್ನು ದಿನನಿತ್ಯ ಮಕ್ಕಳಿಗೆ ಮತ್ತು ಸಾಮಾನ್ಯ ಜನರಿಗೆ ಪ್ರಚಾರ ಮಾಡಿದರೆ ಸಾಕಷ್ಟು ಬದಲಾವಣೆಗಳು ಆಗುತ್ತವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ನಡೆದ ಪಿ.ಶೇಷಾದ್ರಿ ಸಿನಿಮಾವಲೋಕನ ಕಾರ್ಯಕ್ರಮದಲ್ಲಿ ಚಿತ್ರ-ಮಂಥನ, ಕಣ್ಣು ಕಂಡ ಕ್ಷಣಗಳು, ದಕ್ಕಿದ್ದು-ಮಿಕ್ಕಿದ್ದು ಮತ್ತು ಫ್ರೇಮ್ಸ್ ಆಫ್ ಕಾನ್ಸಿಯೆನ್ಸ್ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇಂದು ಪ್ರದರ್ಶಿಸಿದ ಪಿ.ಶೇಷಾದ್ರಿ ಅವರ ಪ್ರತಿಯೊಂದು ಚಲನಚಿತ್ರಗಳು ಗಂಭೀರ ಸಮಸ್ಯೆಯನ್ನು ಸಹಜವಾಗಿ ನಮಗೆ ಮುಟ್ಟಿಸುತ್ತವೆ. ಅದಕ್ಕೆ ಹಲವು ಕಾನೂನು, ಅಧಿನಿಯಮಗಳು, ಯೋಜನೆಗಳನ್ನು ಮಾಡಿದರೂ ಕೂಡ ಸಾಧ್ಯವಿಲ್ಲ. ಪ್ರತಿಯೊಂದು ಶಾಲೆ ಮತ್ತು ಗ್ರಾಮ ಪಂಚಾಯತ್‍ಗಳಲ್ಲಿ ಪ್ರೊಜೆಕ್ಟರ್ ಸಿಸ್ಟಂ ಹಾಕಿದ್ದೇವೆ. ಇವು ಬೇರೆ ಬೇರೆ ಯೋಜನೆಗಳ ಮಾಹಿತಿಗಳ ಹಂಚಿಕೆಗಾಗಿ ಬಳಸಲಾಗುತ್ತಿದೆ. ಇಂಥ ಸಿನೆಮಾಗಳನ್ನು ದಿನನಿತ್ಯ ಮಕ್ಕಳಿಗೆ ಮತ್ತು ಸಾಮಾನ್ಯ ಜನರಿಗೆ ತೋರಿಸಿದರೆ ಸಾಕಷ್ಟು ಬದಲಾವಣೆಗಳು ಆಗುತ್ತವೆ ಎಂದು ತಿಳಿಸಿದರು.

ಪ್ರತಿಯೊಂದು ಮನಸ್ಸಿನಲ್ಲಿ ಬದಲಾವಣೆಗಳನ್ನು ತರೋಣ, ನಮ್ಮ ನಾಡು ಯಾವಾಗಲೂ ಮುಂಚೂಣಿಯಲ್ಲಿ ಇರುತ್ತದೆ. ಇನ್ನಷ್ಟು ಮುಂದುವರಿಯಬೇಕು. ಮುಂದಿನ ದಿನಗಳಲ್ಲಿ ಕನ್ನಡ ಸಿನೆಮಾಗಳನ್ನು ಜನಪ್ರಿಯಗೊಳಿಸಲು ಅವುಗಳ, ಪ್ರಚಾರಗೊಳಿಸುವ ನಿಟ್ಟಿನಲ್ಲಿ ವೇದಿಕೆಯನ್ನು ನೀಡುವ ಕುರಿತು ಕೆಲವು ವಿಷಯಗಳ ಪ್ರಸ್ತಾಪವಾಗಿದೆ ಎಂದು ತಿಳಿಸಿದರು.

ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮಾತನಾಡಿ, ಚಿತ್ರ ಮಂಥನ ಕೃತಿ ಯಾಕೆ ಮುಖ್ಯವಾಗುತ್ತದೆ ಎಂದರೆ, ವ್ಯಕ್ತಿಯನ್ನು ವಿಜೃಂಭಿಸಬಾರದು, ಸಿನೆಮಾವನ್ನು ವಿಜೃಂಭಿಸಬೇಕು ಎಂದು ಶೇಷಾದ್ರಿ ಅವರು ಹೇಳಿದ್ದರು. ಕನ್ನಡದಲ್ಲಿ ಸಿನೆಮಾ ಬಗ್ಗೆ ಅನೇಕ ಪುಸ್ತಕಗಳು ಬಂದಿವೆ. ಅವುಗಳಲ್ಲಿ ಹೆಚ್ಚು ವ್ಯಕ್ತಿಯನ್ನು ವಿಜೃಂಭಿಸುವ ಪುಸ್ತಕಗಳಾಗಿವೆ. ಚಿತ್ರ ಸಂಸ್ಕೃತಿ ಬೆಳೆಯಬೇಕಾದರೆ, ಸಿನೆಮಾದ ಬಗ್ಗೆ ಪಠ್ಯ ಕನ್ನಡದಲ್ಲಿ ಹೆಚ್ಚು ಇಲ್ಲ. ಅದಕ್ಕೆ ಪೂರಕವಾಗುವ ಪುಸ್ತಕಗಳನ್ನು ತರಬೇಕು ಎಂಬ ಶೇಷಾದ್ರಿ ಅವರ ಕಾಳಜಿಯನ್ನು ಹಿಂದಿನಿಂದಲು ನೋಡಿದ್ದೇವೆ ಎಂದು ತಿಳಿಸಿದರು.

ಚಿತ್ರ ಮಂಥನ ಪುಸ್ತಕ ಪಿ.ಶೇಷಾದ್ರಿ ಅವರ 12 ಸಿನೆಮಾಗಳನ್ನು ಕುರಿತು 26 ಲೇಖಕರು ಲೇಖನಗಳ ಸಂಕಲನ. ಈ ಲೇಖನಗಳಲ್ಲಿ ಸಿನೆಮಾವನ್ನು ತಾತ್ವಿಕ ನೆಲೆಯನ್ನು ಗ್ರಹಿಸುವ ಕ್ರಮ, ಶೇಷಾದ್ರಿ ಅವರ ಒಟ್ಟು ಸಿನೆಮಾ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿರ್ದೇಶಕ ಟಿ.ಎಸ್.ನಾಗಾಭರಣ, ನಟ ಸುಚೇಂದ್ರ ಪ್ರಸಾದ್, ಗೋಪಾಲಕೃಷ್ಣ ಪೈ ಮತ್ತಿತತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X