Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರ್ಥಿಕವಾಗಿ ದುರ್ಬಲರಾದವರನ್ನು...

ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ

ಕಿದ್ವಾಯಿ ಅಧಿಕಾರಿಗಳ ಜೊತೆ ಸಭೆ

ವಾರ್ತಾಭಾರತಿವಾರ್ತಾಭಾರತಿ28 March 2025 10:06 PM IST
share
ಆರ್ಥಿಕವಾಗಿ ದುರ್ಬಲರಾದವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು : ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ಬಡರೋಗಿಗಳ ಆರ್ಥಿಕ ಹೊರೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಅಂತಿಮ ಆರೋಗ್ಯ ತನಿಖಾ ವರದಿಗಳು ನೀಡುವವರೆಗೆ ಅಂತಹ ರೋಗಿಗಳನ್ನು ಆಸ್ಪತ್ರೆಯ ವಾರ್ಡ್ ಗಳಲ್ಲಿ ಒಳರೋಗಿಗಳಾಗಿ ಸೇರಿಸಿಕೊಳ್ಳುವಂತೆ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ (ಕೆಎಂಐಒ) ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ದೇಶನವನ್ನು ಮೊದಲು ನೀಡಲಾಗಿತ್ತಾದರೂ, ಶುಕ್ರವಾರ ಅವರು ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕೃತವಾಗಿ ಆದೇಶ ಹೊರಡಿಸಿ ಜಾರಿಗೆ ತರಲಾಯಿತು. ಪರಿಶೀಲನೆಯ ಸಮಯದಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಆಸ್ಪತ್ರೆಯ ಹಾಸಿಗೆಗಳು ಶೇ.70ಕ್ಕಿಂತ ಕಡಿಮೆ ಭರ್ತಿಯಾಗಿರುವುದು ಏಕೆ ಎಂದು ಪ್ರಶ್ನಿಸಿದರು.

ಅಂತಿಮ ರೋಗನಿರ್ಣಯದ ನಂತರವೇ ಒಳರೋಗಿಗಳಾಗಿ ಸೇರಿಸಿಕೊಳ್ಳಲಾಗುವುದು. ಆರಂಭಿಕ ರೋಗ ನಿರ್ಣಯ ಮತ್ತು ಅವರ ಅಂತಿಮ ಆರೋಗ್ಯ ವರದಿಗಳ ವಿತರಣೆ ಆಗುವವರೆಗೂ ರೋಗಿಗಳು ಹೊರಗುಳಿಯುತ್ತಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶರಣ ಪ್ರಕಾಶ್ ಪಾಟೀಲ್, ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯು ತನ್ನ ನೀತಿಯನ್ನು ಬದಲಾಯಿಸಲು ಮತ್ತು ಈ ಮಧ್ಯಂತರ ಅವಧಿಯಲ್ಲಿ ರೋಗಿಗಳನ್ನು ವಾರ್ಡ್‍ಗಳಿಗೆ ಸೇರಿಸಲು ಸೂಚನೆ ನೀಡಿದರು.

ಅನೇಕ ರೋಗಿಗಳು ಆರ್ಥಿಕವಾಗಿ ದುರ್ಬಲರಾಗಿರುತ್ತಾರೆ. ಅಂತಿಮ ವರದಿ ಬರುವವರೆಗೂ ಬೆಂಗಳೂರಿನಲ್ಲಿ ಖಾಸಗಿ ವಸತಿ ಸೌಕರ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಇದು ಅಗತ್ಯವಿಲ್ಲದಿರಬಹುದು, ದೂರದ ಪ್ರದೇಶಗಳಿಂದ, ವಿಶೇಷವಾಗಿ ಉತ್ತರ ಕರ್ನಾಟಕದಿಂದ ಬರುವ ರೋಗಿಗಳಿಗೆ, ಇದು ಅತ್ಯಗತ್ಯ ಎಂದು ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಅಂತಿಮ ವರದಿಗಳನ್ನು ನೀಡಲು ಒಂದೆರಡು ದಿನಗಳು ತೆಗೆದುಕೊಳ್ಳಬಹುದು, ಈ ಅವಧಿಯಲ್ಲಿ ಒಳರೋಗಿಗಳಾಗಿ ದಾಖಲಾಗಲು ಬಯಸುವವರಿಗೆ ಒಪ್ಪಿಗೆ ಪತ್ರವನ್ನು ಒದಗಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವರದಿಗಳಿಗಾಗಿ ಕಾಯುತ್ತಿರುವ ರೋಗಿಗಳಿಗೆ ಉಚಿತ ವಸತಿ ಮತ್ತು ಊಟವನ್ನು ಸಹ ನೀಡಲಾಗುತ್ತದೆ. ಆದಾಗ್ಯೂ, ಹಾಸಿಗೆಗಳು ಲಭ್ಯವಿದ್ದಾಗಲೆಲ್ಲಾ, ರೋಗಿಗಳನ್ನು ಧರ್ಮಶಾಲೆಗೆ ಕಳುಹಿಸುವ ಬದಲು ಆಸ್ಪತ್ರೆ ವಾರ್ಡ್‍ಗಳಿಗೆ ದಾಖಲಿಸಬೇಕು. ಒಂದು ವೇಳೆ ಹಾಸಿಗೆಗಳು ತುಂಬಿದ್ದರೆ, ಅವರಿಗೆ ಧರ್ಮಶಾಲೆಯಲ್ಲಿ ಸ್ಥಳಾವಕಾಶ ಕಲ್ಪಿಸಬಹುದು ಎಂದು ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಬಿಪಿಎಲ್ ವರ್ಗದವರಿಗೆ ಸೌಲಭ್ಯ: ಕಿದ್ವಾಯಿ ಆಸ್ಪತ್ರೆಗೆ ಬರುವ ಶೇ.90ಕ್ಕಿಂತ ಹೆಚ್ಚು ರೋಗಿಗಳು ಬಿಪಿಎಲ್ ವರ್ಗವಾಗಿರುವುದರಿಂದ, ವಿಶೇಷ ವಾರ್ಡ್, ಶಾಂತಿಧಾಮ ಮತ್ತು ಅನಿಕೇತನ, ಅರೆ-ವಿಶೇಷ ವಾರ್ಡ್ ಅನ್ನು ಸಾಮಾನ್ಯ ವಾರ್ಡ್ ಗಳಾಗಿ ಪರಿವರ್ತಿಸಲು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಪರಿಹಾರ ಒದಗಿಸುವುದು, ಗಂಭೀರ ಆರೋಗ್ಯ ತನಿಖೆಗಳನ್ನು ನಡೆಸುವಾಗ ಅವರಿಗೆ ಅಗತ್ಯವಾದ ಆರೈಕೆ ಮತ್ತು ಸೌಕರ್ಯವನ್ನು ಒದಗಿಸುವುದು ಈ ಕ್ರಮದ ಉದ್ದೇಶವಾಗಿದೆ. ಈ ನಿರ್ದೇಶನವನ್ನು ಜಾರಿಗೆ ತರಲು, ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯು ಇಂದು ಸುತ್ತೋಲೆ ಮತ್ತು ಒಪ್ಪಿಗೆ ಪತ್ರವನ್ನು ನೀಡಿದೆ.

ಇಂದು ನಡೆದ ಸಭೆಯಲ್ಲಿ ಕಿದ್ವಾಯಿ ಆಡಳಿತಾಧಿಕಾರಿ ವೈ.ನವೀನ್ ಭಟ್ ಮತ್ತು ನಿರ್ದೇಶಕ ಡಾ.ನವೀನ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X