Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2026ರ ಅಂತರ್‌ರಾಷ್ಟ್ರೀಯ ಉದ್ಯೋಗ...

2026ರ ಅಂತರ್‌ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸಂಸ್ಥೆಗಳು ಆಸಕ್ತಿ : ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ27 Nov 2025 10:35 PM IST
share
2026ರ ಅಂತರ್‌ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸಂಸ್ಥೆಗಳು ಆಸಕ್ತಿ : ಶರಣಪ್ರಕಾಶ್ ಪಾಟೀಲ್

ದುಬೈ : ಕರ್ನಾಟಕದಲ್ಲಿ ನಡೆಯಲಿರುವ ಬೆಂಗಳೂರು ಅಂತರ್‌ ರಾಷ್ಟ್ರೀಯ ಉದ್ಯೋಗ ಮೇಳದಲ್ಲಿ ಭಾಗವಹಿಸಲು ದುಬೈ ಸೇರಿದಂತೆ ಯುಎಇಯ ಹಲವಾರು ಕಂಪನಿಗಳು ಆಸಕ್ತಿ ತೋರಿವೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

2026ನೆ ಸಾಲಿನ ಜನವರಿ-ಫೆಬ್ರವರಿಯಲ್ಲಿ ಬೆಂಗಳೂರು ಅಂತರ್‌ ರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಗುರುವಾರ ದುಬೈನಲ್ಲಿ ರೋಡ್ ಶೋ ನಡೆಯಿತು.

ಸಾರಿಗೆ, ಮಾನವ ಸಂಪನ್ಮೂಲ ತಂತ್ರಜ್ಞಾನ, ಸಾಫ್ಟ್ ಸೇವೆಗಳು, ಮಾಧ್ಯಮ ತಂತ್ರಜ್ಞಾನ, ಗೇಮಿಂಗ್, ರಿಯಲ್ ಎಸ್ಟೇಟ್, ಇಂಧನ ಮತ್ತು ಸಂಬಂಧಿತ ಆರೋಗ್ಯ ವಿಜ್ಞಾನಗಳಂತಹ ಕ್ಷೇತ್ರಗಳ ಕಂಪನಿಗಳು ಆಸಕ್ತಿಯನ್ನು ತೋರಿಸಿದವು ಎಂದು ಮಾಹಿತಿ ನೀಡಿದ ಸಚಿವರು, ಶಿಕ್ಷಣ ಮತ್ತು ಕೌಶಲ್ಯತೆ ವಿಷಯದಲ್ಲಿ ಕರ್ನಾಟಕ ವಿಶೇಷ ಸಾಮರ್ಥ್ಯ ಹೊಂದಿದೆ. ರಾಜ್ಯದ ಯುವಕರನ್ನು ನೇಮಿಸಿಕೊಳ್ಳಲು ಕಂಪನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು.

ನಮ್ಮ ರಾಜ್ಯದ ಕೌಶಲ್ಯ ಭರಿತ ಪದವೀಧರರು ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅರ್ಹರಾಗಿದ್ದಾರೆ. ನಮ್ಮ ರಾಜ್ಯ ಸರಕಾರ ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಪೂರ್ಣ ತರಬೇತಿ ಪಡೆದು ಸಜ್ಜಾಗಿದ್ದಾರೆ. ದುಬೈ ಮೂಲದ ಉದ್ಯೋಗದಾತರು ಕರ್ನಾಟಕದ ಈ ಪ್ರತಿಭಾವಂತರಿಗೆ ಉದ್ಯೋಗಾವಕಾಶ ಒದಗಿಸಬೇಕು ಎಂದು ಶರಣ ಪ್ರಕಾಶ್ ಪಾಟೀಲ್ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಎಂ.ಸಿ.ಸುಧಾಕರ್, ತಾಂತ್ರಿಕ ಶಿಕ್ಷಣ ಮತ್ತು ಆಧುನಿಕ ಕೌಶಲ್ಯ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಪ್ರಗತಿಯತ್ತ ಸಾಗಿದೆ. ತಾಂತ್ರಿಕ ತರಬೇತಿಗೆ ಕರ್ನಾಟಕದ ವಿಧಾನವು ಭಾರತದಲ್ಲಿ ಅತ್ಯುತ್ತಮವಾಗಿದೆ. ನಮ್ಮ ರಾಜ್ಯದ ಪ್ರತಿಭಾವಂತರು ಜಾಗತಿಕ ಮಾನದಂಡ ಪೂರೈಸುವ ಐಟಿ ಮತ್ತು ಕೃತಕ ಬುದ್ಧಿಮತ್ತೆ ಕೌಶಲ್ಯ ಕ್ಷೇತ್ರದಲ್ಲಿ ತರಬೇತಿ ಪಡೆದು ಸಜ್ಜಾಗಿದ್ದಾರೆ ಎಂದು ಹೇಳಿದರು.

ದುಬೈನಲ್ಲಿ ನಡೆದ ಕಾರ್ಯಕ್ರಮದ ವೇಳೆ ಹವಾಮಾನ, ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರತೆ ಹಾಗೂ ಡಿಜಿಟಲೀಕರಣ ಮತ್ತು ಜಾಗತಿಕ ಕೌಶಲ್ಯ ವಿನಿಮಯದ ಕುರಿತು ಉಭಯ ಸಚಿವರು ವಿವಿಧ ಚರ್ಚೆಗಳಲ್ಲಿ ಪಾಲ್ಗೊಂಡರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‍ಡಿಸಿ) ಅಧ್ಯಕ್ಷೆ ಶಿವಕಾಂತಮ್ಮ ನಾಯಕ್ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕೆಎಸ್‍ಡಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ.ನಾಗರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X