ಶಿವಮೊಗ್ಗ | ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್ಎಲ್ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್. ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ ಹೊಡಿದೆದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಎಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಿರಿದಾದ ರಸ್ತೆಯಲ್ಲಿ ಬಸ್ ಚಾಲಕನ ಅತಿವೇಗದ, ಅಜಾಗರೂಕತೆಯ ಚಾಲನೇಯೇ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
Next Story







