Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಕಸಿತ ಭಾರತಕ್ಕೆ ಪೂರಕವಾಗಿ ʼವಿಕಸಿತ...

ವಿಕಸಿತ ಭಾರತಕ್ಕೆ ಪೂರಕವಾಗಿ ʼವಿಕಸಿತ ಕೃಷಿ ಸಂಕಲ್ಪ ಅಭಿಯಾನʼ ಆರಂಭ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ವಾರ್ತಾಭಾರತಿವಾರ್ತಾಭಾರತಿ8 Jun 2025 9:27 PM IST
share
ವಿಕಸಿತ ಭಾರತಕ್ಕೆ ಪೂರಕವಾಗಿ ʼವಿಕಸಿತ ಕೃಷಿ ಸಂಕಲ್ಪ ಅಭಿಯಾನʼ ಆರಂಭ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು : 2047ರ ವಿಕಸಿತ ಭಾರತಕ್ಕೆ ಪೂರಕವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆರಂಭಿಸಲಾಗಿದ್ದು, ಭಾರತವನ್ನು ವಿಶ್ವದ ಆಹಾರ ಬುಟ್ಟಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಹೆಸರಘಟ್ಟದಲ್ಲಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಸಿಎಆರ್-ಐಐಎಚ್‍ಆರ್) ಆವರಣದಲ್ಲಿ ಆಯೋಜಿಸಿದ್ದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, 2047ರ ವೇಳೆಗೆ ವಿಕಸಿತ ಭಾರತವನ್ನು ರೂಪಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ಅದಕ್ಕೆ ಅನುಗುಣವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ದೇಶದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶದ 145 ಕೋಟಿ ನಾಗರಿಕರಿಗೆ ಆಹಾರವನ್ನು ನೀಡುವ ಉದ್ದೇಶದೊಂದಿಗೆ ಕೇಂದ್ರ ಸರಕಾರವು ರಾಜ್ಯ ಸರಕಾರಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು(ಕೆವಿಕೆಗಳು), ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಹಯೋಗದೊಂದಿಗೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನದ ಗುರಿಯನ್ನು ಸಾಧಿಸಲು ಸಮಗ್ರ ಮಾರ್ಗಸೂಚಿಯನ್ನು ಈಗಾಗಲೇ ರೂಪಿಸಲಾಗಿದೆ ಎಂದು ಅವರು ಅವರು ಹೇಳಿದರು.

ವಿಕಸಿತ ಕೃಷಿ ಭಾರತ ಕಾರ್ಯಕ್ರಮದ ಭಾಗವಾಗಿ ‘ಪ್ರಯೋಗಾಲಯದಿಂದ ಭೂಮಿಗೆ’ ಎಂಬ ಉಪಕ್ರಮವನ್ನು ಪ್ರಾರಂಭಿಸಲಾಗಿದ್ದು, ಕೃಷಿಯಲ್ಲಿ ವೈಜ್ಞಾನಿಕ ಜ್ಞಾನ ಮತ್ತು ಬೆಂಬಲವನ್ನು ಒದಗಿಸಲು ದೇಶಾದ್ಯಂತ 16,000ಕ್ಕೂ ಹೆಚ್ಚು ವಿಜ್ಞಾನಿಗಳು ರೈತರಿಗೆ ನೆರವು ನೀಡಲಿದ್ದಾರೆ. ಹತ್ತು ದಿನಗಳಲ್ಲಿ 1,896 ವಿಜ್ಞಾನಿಗಳ ತಂಡಗಳು 8,188 ಹಳ್ಳಿಗಳಲ್ಲಿ ಸಂಚರಿಸಿ ಸುಮಾರು 9 ಲಕ್ಷ ರೈತರೊಂದಿಗೆ ಸಂವಾದ ನಡೆಸಿವೆ ಎಂದು ಅವರು ಮಾಹಿತಿ ನೀಡಿದರು.

ಕರ್ನಾಟಕದಲ್ಲಿಯೇ, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ 70ಕ್ಕೂ ಹೆಚ್ಚು ತಂಡಗಳು ಪ್ರತಿದಿನ ತೋಟಗಳಿಗೆ ಭೇಟಿ ನೀಡುತ್ತಿವೆ. ಅವಶ್ಯಕತೆ ಆಧಾರಿತ, ಸಮಸ್ಯೆ ಆಧಾರಿತ ಕೃಷಿ ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಲು ಈ ತಂಡಗಳು ರೈತರಿಂದ ನೇರವಾಗಿ ಮಾಹಿತಿಯನ್ನು ಪಡೆದುಕೊಂಡು ದಾಖಲಿಸುತ್ತಿವೆ ಎಂದು ಅವರು ಹೇಳಿದರು.

‘ಒಂದು ರಾಷ್ಟ್ರ, ಒಂದು ಕೃಷಿ, ಒಂದು ತಂಡ’ ಎಂಬ ಪರಿಕಲ್ಪನೆಯನ್ನು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹೊಂದಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ(ಎಂ.ಐ.ಎಸ್.) ಅಡಿಯಲ್ಲಿ ಕೇಂದ್ರ ಸರಕಾರವು ಸಾರಿಗೆ ವೆಚ್ಚವನ್ನು ಭರಿಸುತ್ತದೆ. ಆ ಮೂಲಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಬೆಂಬಲಿಸುತ್ತದೆ. ಕಲಬೆರಕೆ ಕೀಟನಾಶಕಗಳ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಐಸಿಎಆರ್-ಐಐಎಚ್‍ಆರ್ ಅಭಿವೃದ್ಧಿಪಡಿಸಿದ್ದ ನೂತನ ತಳಿಗಳು, ಹೂವುಗಳು, ತರಕಾರಿಗಳು, ಔಷಧೀಯ ಸಸ್ಯಗಳನ್ನು ಒಳಗೊಂಡ ಪ್ರದರ್ಶನವನ್ನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಏಳು ಮಂದಿ ಅತ್ಯುತ್ತಮ ರೈತರಾದ ರತ್ನಮ್ಮ, ಗೋಪಾಲಗೌಡ, ಪದ್ಮಿನಿ ಗೌಡ, ಎಚ್.ಕೆ. ರಘು, ಮಂಗಳಮ್ಮ, ಮಹೇಶ್ ಎಚ್.ಎನ್. ಮತ್ತು ಶ್ರೀನಿವಾಸ್ ಅವರನ್ನು ಗೌರವಿಸಲಾಯಿತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್, ಶಾಸಕ ಎಸ್. ಆರ್. ವಿಶ್ವನಾಥ್ ಸೇರಿದಂತೆ ಮತ್ತಿತರರು ಇದ್ದರು.

ರವಿವಾರ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರ್ಜಾ ವಾಲಿಯಾ ಎಂಬುವವರ ಡ್ರ್ಯಾಗನ್ ಫ್ರೂಟ್ ಜಮೀನಿಗೆ ಭೇಟಿ ನೀಡಿ ಹಣ್ಣು ಬೆಳೆದ ರೈತ ಮಹಿಳೆಯನ್ನು ಶ್ಲಾಘಿಸಿದರು. ‘ಅನೇಕ ಯುವ ವೃತ್ತಿಪರರು ಕೃಷಿಯಲ್ಲಿ ಉತ್ತಮ ಭವಿಷ್ಯವನ್ನು ಕಾಣುತ್ತಿದ್ದಾರೆ. ಡ್ರ್ಯಾಗನ್ ಫ್ರೂಟ್ ಮತ್ತು ಇತರ ಆಧುನಿಕ ಬೆಳೆಗಳನ್ನು ಬೆಳೆಯುವ ಮೂಲಕ ಲಾಭ ಗಳಿಸುತ್ತಿದ್ದಾರೆ. ತನ್ನ ಐಟಿ ಉದ್ಯೋಗವನ್ನು ತೊರೆದ ನೀರ್ಜಾ ವಾಲಿಯಾ, ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಸಚಿವರು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X