Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೊಬೈಲ್ ಗೀಳಿಗೆ ಬಿದ್ದಿರುವ ಯುವ...

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ23 Oct 2025 4:08 PM IST
share
ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಯುವ ಪೀಳಿಗೆ ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದು, ಇವರಿಗೆ ಓದಿನ ರುಚಿ ಹತ್ತಿಸುವ ಮೂಲಕ ನಾಡಿನ ಇತಿಹಾಸ ಪುರುಷರ ಬಗ್ಗೆ ತಿಳಿಸುವ ಅಗತ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು.

ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನತೆಗೆ ಮೊಬೈಲ್ ಒಂದೇ ಜೀವನ ಆಗಿ ಬಿಟ್ಟಿದೆ.‌ ನಿಜಕ್ಕೂ ಇದು ದುರದೃಷ್ಟಕರ. ಒಂದು ಕುಟುಂಬದಲ್ಲಿ ಪೋಷಕರು ಮತ್ತು ಮಕ್ಕಳು ಒಟ್ಟಿಗೆ ಕುಳಿತಿದ್ದರೆ, ಒಬ್ಬರನ್ನೊಬ್ಬರು ಮಾತನಾಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆಗೆ ಇತಿಹಾಸದ ವಾಸ್ತವ ಸ್ಥಿತಿಯನ್ನು ತಿಳಿಸುವ ಮೂಲಕ‌ ಓದಿನ ರುಚಿ ಹತ್ತಿಸುವ ಕೆಲಸ ಆಗಬೇಕಿದೆ. ಮಹನೀಯರ ಜಯಂತಿಗಳನ್ನು ಆಚರಣೆ ಮಾಡುವ ಮೂಲಕ ಅವರ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಚೆನ್ನಮ್ಮ ಹೆಣ್ಣುಮಕ್ಕಳ ಪ್ರತಿನಿಧಿ :

ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚೆನ್ನಮ್ಮನವರು.

“ಇಲಿಯಾಗಿ ಬಹುಕಾಲ ಪರಾಧೀನತೆಯಲ್ಲಿ ಬಾಳುವುದಕ್ಕಿಂತ ಹುಲಿಯಂತೆ ಸ್ವತಂತ್ರವಾಗಿ ಬದುಕಬೇಕು” ಎಂಬ ನುಡಿಗೆ ಅನ್ವರ್ಥವಾಗಿ ಭಾರತ ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡುತ್ತಾ, ಬ್ರಿಟಿಷರಿಗೆ ಸಿಂಹಸ್ವಪ್ನ ಸ್ವರೂಪಳಾಗಿ ನರಕದರ್ಶನ ಮಾಡಿಸಿದ ಮಹಾತಾಯಿ, ಕನ್ನಡದ ಕುಲನಾರಿ ಕಿತ್ತೂರು ರಾಣಿ ಚೆನ್ನಮ್ಮನವರು ಎಂದು ಇತಿಹಾಸದ ದಿನಗಳನ್ನು ಮೆಲುಕು ಹಾಕಿದರು.

ಭಾರತದ ಪ್ರಪ್ರಥಮ ಮಹಿಳಾ ಸ್ವಾತಂತ್ರ‍್ಯ ಹೋರಾಟಗಾರ್ತಿಯಾದ ಇಂತಹ ಮಹಾಮಾತೆಯ ಜಯಂತಿಯನ್ನು ಆಚರಿಸುವ ಮೂಲಕ ಆ ಮಹಾನ್ ಚೇತನದ ಸ್ಮರಣೆ ಮಾಡಿಕೊಳ್ಳುವ ಸೌಭಾಗ್ಯ ನಮಗೊದಗಿ ಬಂದಿರುವುದು ನಮ್ಮ ಅದೃಷ್ಟ ಎಂದರು.

ರಾಣಿ ಚೆನ್ನಮ್ಮನವರ ಜೀವನವೇ ಅತ್ಯಂತ ರೋಚಕ, ಹೋರಾಟದ ಅಧ್ಯಾಯ. ಬೆಳಗಾವಿ ಜಿಲ್ಲೆಯ ಕಾಕತಿಯ ದೇಸಾಯಿಯವರ ಪುತ್ರಿಯಾಗಿ ಹುಟ್ಟಿದ ಚೆನ್ನಮ್ಮನವರು ಅಂದಿನ ಕಾಲದ ಎಲ್ಲಾ ಹೆಣ್ಣುಮಕ್ಕಳಂತೆ ಕೇವಲ ಅಡುಗೆ ಮನೆಗೆ ಮಾತ್ರವೇ ಮೀಸಲಾಗದೇ ತಂದೆಯ ಪ್ರೋತ್ಸಾಹದೊಂದಿಗೆ ಅಂದಿನ ಕಾಲಮಾನದಲ್ಲಿ ಕೇವಲ ಗಂಡುಮಕ್ಕಳ ವಿದ್ಯೆ ಎನಿಸಿಕೊಂಡಿದ್ದ ಕುದುರೆ ಸವಾರಿ, ಶಸ್ತ್ರಾಭ್ಯಾಸ, ರಾಜಕೀಯ ಶಿಕ್ಷಣ, ವೇದ-ಪುರಾಣ-ಇತಿಹಾಸಗಳ ಅಧ್ಯಯನಗಳಂತಹ ಶಿಕ್ಷಣವನ್ನೂ ಕರಗತ ಮಾಡಿಕೊಂಡಿದ್ದರು ಎಂದರು.

ಪತಿಯ ಮರಣಾನಂತರ ಮಗ ಶಿವಲಿಂಗ ರುದ್ರಸರ್ಜನನ್ನು ಪಟ್ಟಕ್ಕೇರಿಸಿ, ಬ್ರಿಟಿಷರ ಕುತಂತ್ರಕ್ಕೆ ಅವನು ಬಲಿಯಾದಾಗ ಹಿಂಜರಿಯದೇ ಅವನ ಮಗನನ್ನೇ ದತ್ತು ತೆಗೆದುಕೊಂಡು ಸಿಂಹಾಸನದ ಮೇಲೆ ಕೂರಿಸುತ್ತಾರೆ. ಆ ಮಗುವಿಗೆ ಹಕ್ಕಿಲ್ಲವೆಂಬ ನೆವದಿಂದ ಬ್ರಿಟಿಷರು ರಾಜ್ಯವನ್ನು ಕಿತ್ತುಕೊಳ್ಳಲು ಹವಣಿಸಿದಾಗ “ಕಿತ್ತೂರು ವೀರ ಅರಸರು ಕಟ್ಟಿ ಬೆಳೆಸಿದ ಸ್ವತಂತ್ರ ರಾಷ್ಟ್ರವೇ ಹೊರತು ತಕ್ಕಡಿ ಹಿಡಿದು ವ್ಯಾಪಾರಕ್ಕೆ ಬಂದ ಪರಕೀಯರ ಸೊಲ್ಲಿ ಹರಿಯುತ್ತಿರುವುದು ವೀರ ಕ್ಷಾತ್ರ ರಕ್ತ, ಕೊಳಕು ನೀರಲ್ಲ” ಎಂದು ಹೇಳಿ ತಾವೇ ರಾಜ್ಯಭಾರವನ್ನು ವಹಿಸಿಕೊಂಡು, ಅಧಿಕೃತವಾಗಿ ಪಟ್ಟಕ್ಕೇರಿ ಸುಭಿಕ್ಷ ಹಾಗೂ ಸುಭದ್ರ ಆಡಳಿತ ನಡೆಸುತ್ತಾರೆ ಎಂದು ಹೇಳಿದರು.

ಇಂತಹ ಉದಾತ್ತ ಚಿಂತನೆಯ ಮೂಲಕ ಸಮಸಮಾಜದ ಸಾಕಾರಕ್ಕೆ ಮುನ್ನುಡಿಯನ್ನು ಅಂದೇ ಬರೆದಿದ್ದ ರಾಣಿ ಚೆನ್ನಮ್ಮನವರಂಥ ವೀರವನಿತೆಯರು ಉದಿಸಿದ ಕನ್ನಡ ನಾಡು ಧನ್ಯ. ಇಂಥ ನಾಡಿನಲ್ಲಿ ಹುಟ್ಟಿದ ನಾವು ನೀವೆಲ್ಲರೂ ಆ ವೀರಮಾತೆಯ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ತನ್ಮೂಲಕ ಸದಾ ಕಾಯಕವನ್ನು ಮಾಡುತ್ತಾ ನಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳೋಣ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ‌‌ ಮಾಜಿ ಸಚಿವೆ ರಾಣಿ ಸತೀಶ್, ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ್ ಮೂರ್ತಿ, ಲೇಖಕ ಡಾ.ಮಹಾಂತೇಶ ಬಿರಾದಾರ,‌ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ದೇವಿ, ಜಂಟಿ ನಿರ್ದೇಶಕರಾದ ಬನಶಂಕರಿ ಅಂಗಡಿ, ಬಲವಂತರಾಯ ಪಾಟೀಲ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X