Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ...

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು? : ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ30 Dec 2025 4:13 PM IST
share
ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು? : ಶೋಭಾ ಕರಂದ್ಲಾಜೆ

ಬೆಂಗಳೂರು : ಕೇರಳದ ಚುನಾವಣೆಯ ಕಾವು ಕರ್ನಾಟಕದಲ್ಲಿ ಏನು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಹೊರದೇಶಗಳಿಂದ ಅಕ್ರಮ ವಲಸೆ ಬರುತ್ತಿರುವವರ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು. ಡ್ರಗ್ ಮಾಫಿಯಾ ನಿರತ ಅಕ್ರಮ ವಲಸಿಗರ ವಿರುದ್ಧ ಎಲ್ಲ ಇಲಾಖೆಗಳು ಸೇರಿ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಯಾರ ಸರಕಾರ ನಡೆಯುತ್ತಿದೆ. ಯಾರಿಗಾಗಿ ಸರಕಾರ ನಡೆಯುತ್ತಿದೆ. ರಾಜ್ಯದ ಮೂಗುದಾರ ಎಲ್ಲಿದೆ? ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕದ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ಟ್ವೀಟ್ ಮಾಡಿ ಸರಕಾರ ಹೇಗೆ ನಡೆಸಬೇಕೆಂದು ಕಿವಿಮಾತು ಹೇಳಿದ್ದಾರೆ. ಅವರದೇ ರಾಜ್ಯದ ಪಿಣರಾಯಿ ವಿಜಯನ್ ಕರ್ನಾಟಕದಲ್ಲಿ ಏನು ಮಾಡಬೇಕು, ಏನು ಮಾಡಬಾರದೆಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶಿವಕುಮಾರರಿಗೆ ಸರಕಾರ ನಡೆಸಲು ಸಾಂವಿಧಾನಿಕ ಹಕ್ಕು, ಶಕ್ತಿ ಇದೆಯೇ ಇಲ್ಲವೇ?. ಕೋಗಿಲು ಅಕ್ರಮ ವಲಸಿಗರನ್ನು ನೋಟಿಸ್ ಕೊಟ್ಟು 167 ಮನೆಗಳನ್ನು ತೆರವುಗೊಳಿಸಿದ್ದು ಒಳ್ಳೆಯ ಕೆಲಸ. ತೆರವನ್ನು ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದ್ದಾರೆ. ಪಿಣರಾಯಿ ವಿಜಯನ್ ಒತ್ತಡ ತರುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ದೆಹಲಿ ಒತ್ತಡಕ್ಕೆ ಮಣಿದ ಸಿಎಂ, ಡಿಸಿಎಂ :

ಬೆಂಗಳೂರಿನ ವಾಸಿಂ ಬಡಾವಣೆ, ಫಕೀರ್ ಬಡಾವಣೆಯಲ್ಲಿ ಯಾರಿದ್ದಾರೆ? ದೆಹಲಿ ಒತ್ತಡಕ್ಕೆ ಮಣಿದು ಸಿಎಂ, ಡಿಸಿಎಂ ಸಭೆ ನಡೆಸುತ್ತಾರೆ. ಬಹಳ ದಿನದಿಂದ ಅವರು ಒಟ್ಟಾಗಿಲ್ಲ; ಕುರ್ಚಿ ಉಳಿಸಿಕೊಳ್ಳಲು ಒಬ್ಬರು, ಕುರ್ಚಿಯನ್ನು ಪಡೆಯಲು ಒಬ್ಬರು ಸ್ಪರ್ಧೆಯ ಮೇಲೆ ದೆಹಲಿ ಹೈಕಮಾಂಡನ್ನು ಸಂತುಷ್ಟಗೊಳಿಸಲು ಒಟ್ಟಿಗೆ ಸಭೆ ನಡೆಸಿ ತೆರವುಗೊಳಿಸಿ ಅಕ್ರಮ ವಲಸಿಗರಿಗೆ ಬೈಯಪ್ಪನಹಳ್ಳಿಯಲ್ಲಿ ಮನೆ ಕೊಡಲು ನಿರ್ಧರಿಸಿದ್ದಾರೆ. ಯಾರವರು? ಯಾವಾಗ ಅರ್ಜಿ ಸಲ್ಲಿಸಿದ್ದಾರೆ. ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ನೀವೇ ಅವರಿಗೆ ಮನೆ ಕೊಟ್ಟು, ಸರ್ಟಿಫಿಕೇಟ್ ಕೊಟ್ಟು ಅವರನ್ನು ಖಾಯಂ ಮಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇವರ ಮತದಾರರ ಚೀಟಿ, ಆಧಾರ್ ಕಾರ್ಡನ್ನು ತಕ್ಷಣ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಕರ್ನಾಟಕದ ಪೊಲೀಸರು ಆಧಾರ್ ಕಾರ್ಡ್ ವಶಕ್ಕೆ ಪಡೆಯಬೇಕು. ಅವರು ಪಶ್ಚಿಮ ಬಂಗಾಲದವರೇ? ಅಥವಾ ಬೇರೆ ಕಡೆಯಿಂದ ಬಂದಿದ್ದಾರಾ ಎಂದು ಪತ್ತೆ ಮಾಡಬೇಕಿದೆ ಎಂದು ಒತ್ತಾಯಿಸಿದರು. ದೇಶದ ಮತ್ತು ಕರ್ನಾಟಕದ ಉಳಿವಿಗಾಗಿ ಪೊಲೀಸರು ಕ್ರಮ ಕೈಗೊಳ್ಳಲಿ ಎಂದು ಆಗ್ರಹವನ್ನು ಆಗ್ರಹಿಸಿದರು.

ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ವಕ್ತಾರ ಎಂ.ಜಿ. ಮಹೇಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X