Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ಯಾರಂಟಿಗಳ ಮೂಲಕ ಬದುಕುಗಳನ್ನು...

ಗ್ಯಾರಂಟಿಗಳ ಮೂಲಕ ಬದುಕುಗಳನ್ನು ಪರಿವರ್ತಿಸುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

ಸಬರಮತಿಯಲ್ಲಿ ಜರುಗಿದ ಎಐಸಿಸಿ ವಿಸ್ತೃತ ಕಾರ್ಯಕಾರಿಣಿ ಸಭೆ

ವಾರ್ತಾಭಾರತಿವಾರ್ತಾಭಾರತಿ8 April 2025 11:41 PM IST
share
ಗ್ಯಾರಂಟಿಗಳ ಮೂಲಕ ಬದುಕುಗಳನ್ನು ಪರಿವರ್ತಿಸುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

ಅಹಮದಾಬಾದ್ : ನಮ್ಮ ಗ್ಯಾರಂಟಿಗಳ ಮೂಲಕ, ನಾವು ಬದುಕುಗಳನ್ನು ಪರಿವರ್ತಿಸುತ್ತಿದ್ದೇವೆ. ತಾತ್ವಿಕವಾಗಿಯೋ, ಕಾಗದದ ಮೇಲೆಯೋ ಅಲ್ಲ, ಆದರೆ ಕೋಟ್ಯಾಂತರ ಕುಟುಂಬಗಳ ಹೃದಯಗಳಲ್ಲಿ ಬದಲಾವಣೆಯನ್ನು ತಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ಗುಜರಾತಿನ ಅಹಮದಾಬಾದ್‍ನ ಸಬರಮತಿಯಲ್ಲಿ ಜರುಗಿದ ಎಐಸಿಸಿ ವಿಸ್ತೃತ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯು ವಿಭಜನೆ ಮತ್ತು ಬೇರೆಡೆಗೆ ಗಮನ ಸೆಳೆಯುವ ತಂತ್ರಗಳ ಮೇಲೆಯೇ ವಿಜೃಂಭಿಸಿದರೆ, ಕರ್ನಾಟಕದಲ್ಲಿನ ಕಾಂಗ್ರೆಸ್ ಸರಕಾರ ನಿಜವಾದ ಆಡಳಿತ ಎಂದರೇನು ಎಂದು ಇಡೀ ದೇಶಕ್ಕೇ ನಿರೂಪಿಸುತ್ತಿದೆ ಎಂದು ಹೇಳಿದರು.

ಜನರಿಗೆ ಪ್ರಾಶಸ್ತ್ಯ ನೀಡುವ ಮಾದರಿಯೊಂದನ್ನು ನಾವು ರೂಪಿಸಿದ್ದೇವೆ. ತಲೆಬರಹಗಳಲ್ಲ, ದ್ವೇಷವಲ್ಲ. ಆದರೆ ಮನೆಗಳ ನಿರ್ಮಾಣ, ಆರೋಗ್ಯ, ಹಸಿವು ಮುಕ್ತ ಮತ್ತು ಆಶಾದಾಯಕ ರಾಜ್ಯವನ್ನು ನಿರ್ಮಿಸಿದ್ದೇವೆ. ಗೃಹ ಜ್ಯೋತಿ ಯೋಜನೆಯು 1.64 ಕೋಟಿ ಮನೆಗಳನ್ನು ಬೆಳಗುತ್ತಿದ್ದು, ಮಾಸಿಕ ಹೊರೆಯನ್ನು ತಗ್ಗಿಸಿದೆ. ಅನ್ನಭಾಗ್ಯ ಯೋಜನೆಯು 4.39 ಕೋಟಿ ಜನರಿಗೆ ಆಹಾರ ಒದಗಿಸುತ್ತಿದೆ. ಶಕ್ತಿ ಯೋಜನೆಯು ಮಹಿಳೆಯರಿಗೆ ಸಂಚರಿಸಲು, ಕೆಲಸಕ್ಕೆ ಹೋಗಲು ಮತ್ತು ಘನತೆಯ ಬದುಕನ್ನು ಜೀವಿಸಲು ಅನುವು ಮಾಡಿಕೊಟ್ಟಿದೆ. ಈವರೆಗೆ 430 ಕೋಟಿ ಉಚಿತ ಪ್ರಯಾಣಗಳನ್ನು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಯುವನಿಧಿ ಯೋಜನೆಯು ನಮ್ಮ ನಿರುದ್ಯೋಗಿ ಯುವಕರ ಪರವಾಗಿದ್ದು, ಅವರನ್ನು ಕಡೆಗಣಿಸಲಾಗಿಲ್ಲ. ಗೃಹಲಕ್ಷ್ಮಿ ಯೋಜನೆಯು ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ಒದಗಿಸುವ ಮೂಲಕ 1.25 ಕೋಟಿ ಮಹಿಳೆಯರನ್ನು ಸಬಲರನ್ನಾಗಿಸಿದೆ. ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಅಧ್ಯಕ್ಷ ಫಿಲೇಮಾನ್ ಯಾಂಗ್ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ಗ್ಯಾರಂಟಿಗಳನ್ನು ಮಾತ್ರ ನೀಡಿಲ್ಲ. ಶಿಕ್ಷಣ, ಆರೋಗ್ಯ, ನೀರಾವರಿ, ಗ್ರಾಮೀಣ ಉದ್ಯೋಗ ಮತ್ತು ಕೈಗಾರಿಕೆಗಳ ಮೇಲೂ ಹೂಡಿಕೆ ಮಾಡಿದ್ದೇವೆ. ತನ್ಮೂಲಕ ಯಾವುದೇ ಮಗುವೂ ಹಿಂದುಳಿದಿಲ್ಲ ಮತ್ತು ಯಾವುದೇ ಗ್ರಾಮವೂ ಕಣ್ಮರೆಯಾಗಿಲ್ಲ ಎನ್ನುವುದನ್ನು ಖಾತ್ರಿಪಡಿಸುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜವಾಬ್ದಾರಿಯುತ, ಸುಸ್ಥಿರ ಬೆಳವಣಿಗೆಯನ್ನು ಆದ್ಯತೆಯಾಗಿಸಿರುವ ಕರ್ನಾಟಕ, ತನ್ಮೂಲಕ ಹಸಿರು ಆರ್ಥಿಕತೆ, ಪರಿಸರ ಸ್ನೇಹಿ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು ಸುಸ್ಥಿರ ನಗರ ಅಭಿವೃದ್ಧಿಯತ್ತ ಹೆಜ್ಜೆಯಿಟ್ಟಿದೆ. ಭಾರತದ ಅತಿ ಹೆಚ್ಚು ಸೌರಶಕ್ತಿ ಉತ್ಪಾದಿಸುವ ರಾಜ್ಯವಾಗಿದೆಯಲ್ಲದೇ ಪವನಶಕ್ತಿ, ಎಲೆಕ್ಟ್ರಿಕ್ ಸಂಚಾರ ಮತ್ತು ಸುಸ್ಥಿರ ನಗರ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ತ್ಯಾಜ್ಯ ನೀರನ್ನು ಅಂತರ್ಜಲ ಮತ್ತು ನೀರಾವರಿಯನ್ನು ಬೆಂಬಲಿಸಲು ಮರು ಬಳಕೆ ಮಾಡುವಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದ್ದು, ಕೃಷಿಯನ್ನು ಬಲಪಡಿಸಲು ಮತ್ತು ನಮ್ಮ ಭವಿಷ್ಯವನ್ನು ಭದ್ರಪಡಿಸಲು ನಾವೀನ್ಯತೆ ಮತ್ತು ಸುಸ್ಥಿರತೆ ಹೇಗೆ ಒಟ್ಟಾಗಿ ಕಾರ್ಯನಿರ್ವಹಿಸಬಹುದು ಎಂದು ನಿರೂಪಿಸಿದೆ. ದೇಶದಲ್ಲಿಯೇ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ರಾಜ್ಯ ಕರ್ನಾಟಕ ಎಂದು ಅವರು ತಿಳಿಸಿದರು.

ಮಹಿಳೆಯರನ್ನು ಸಬಲರನ್ನಾಗಿಸಿದಾಗ, ಸಮಾಜವನ್ನು ಪರಿವರ್ತಿಸಬಹುದು. ಆದುದರಿಂದ, ಇಡೀ ದೇಶದಲ್ಲಿಯೇ ಅತಿ ಹೆಚ್ಚಿನ ಅನುದಾನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮೀಸಲಿರಿಸಿದ್ದೇವೆ. ಶಿಕ್ಷಣಕ್ಕಾಗಿ 65 ಸಾವಿರ ಕೋಟಿ ರೂ., ಬಂಡವಾಳ ಮೂಲಸೌಕರ್ಯಕ್ಕಾಗಿ 72 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಮೀಸಲಿರಿಸಿ ರಸ್ತೆ, ಸೇತುವೆ, ಆರೋಗ್ಯ ಸೌಲಭ್ಯಗಳು ಮತ್ತು ಸಂಪರ್ಕಗಳನ್ನು ಕಟ್ಟುತ್ತಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ರಾಜ್ಯವು ಇಂದು ನಕ್ಸಲ್ ಚಟುವಟಿಕೆಗಳಿಂದ ಮುಕ್ತವಾಗಿದೆ ಎಂದರೆ ಅದಕ್ಕೆ ಕಾರಣ ಪ್ರಬಲ ಕಾನೂನು ಸುವ್ಯವಸ್ಥೆ ಒಂದೇ ಕಾರಣವಲ್ಲ. ಸೂಕ್ತ ವಾತಾವರಣ ಕಲ್ಪಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ಸೂಕ್ತ ನ್ಯಾಯ ಕಲ್ಪಿಸುವ ಸರಕಾರದ ಪ್ರಯತ್ನಗಳು ಸೇರಿವೆ. ಇಂದಿರಾ ಕ್ಯಾಂಟೀನ್ ಗಳ ಮೂಲಕ ಹಸಿವು ನೀಗುವ ಯತ್ನವನ್ನು ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮತ ಬ್ಯಾಂಕ್ ರಾಜಕಾರಣವನ್ನು ಬದಿಗಿಟ್ಟು ಸಮಾಜದಲ್ಲಿನ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಮಹಿಳೆಯರು, ಯುವ ಜನತೆ, ರೈತರು, ಕಾರ್ಮಿಕರು ಹೀಗೆ ಸಮಾಜದ ಎಲ್ಲಾ ವರ್ಗಗಳಿಗೂ ನ್ಯಾಯ ಒದಗಿಸುವ ದಿಸೆಯಲ್ಲಿ ಸ್ಪಂದಿಸುತ್ತಿದೆ. ಇದು ಕರ್ನಾಟಕದ ಮಾದರಿ. ಬಿಜೆಪಿಯ ದ್ವೇಷಪೂರಿತ, ಗಗನಮುಖಿ ಬೆಲೆಗಳ, ಪೊಳ್ಳು ಆಶ್ವಾಸನೆಗಳ ರಾಜಕೀಯದಾಟಕ್ಕೆ ಕರ್ನಾಟಕದ ಶಕ್ತಿಯುತ ಪ್ರತಿರೋಧವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಗತಿ ಮತ್ತು ಧ್ರುವೀಕರಣ ಎಂದು ಬಂದಾಗ ಜನರ ಆಯ್ಕೆ ಮಾಡುವುದು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯ ಪ್ರಗತಿಯ ಹಾದಿಯನ್ನೇ ಎಂಬುದು ಇದರಿಂದ ಸಾಬೀತಾಗುತ್ತದೆ. ರಾಷ್ಟ್ರ ಪುನರ್ ನಿರ್ಮಾಣ ಕಾರ್ಯಕ್ಕೆ ಕರ್ನಾಟಕವು ಹೆಮ್ಮೆಯ ಹೆದ್ದಾರಿಯಾಗಿ ಸದಾ ಮುಂಚೂಣಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X