Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು...

ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 May 2025 2:57 PM IST
share
ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿ ಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

ಮದ್ಯವರ್ತಿಗಳ ಹಾವಳಿಯಿಂದ ಪೌರಕಾರ್ಮಿಕರು ಮುಕ್ತ :

ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ಶೋಷಣೆ ಮಾಡುತ್ತಿದ್ದು, ನ್ಯಾಯಯುತವಾದ ಸಂಬಳ ಕೊಡದೇ ಇದ್ದುದ್ದನ್ನು ಗಮನಿಸಿದ್ದೆ. ಅದಕ್ಕಾಗಿ ಶೋಷಣೆಗೊಳಗಾದ ಪೌರಕಾರ್ಮಿಕರ ಸಹಾಯಕ್ಕಾಗಿ ಕನಿಷ್ಟ ವೇತನ ಕಾಯ್ದೆ ಪ್ರಕಾರ ದೊರೆಯಬೇಕಾದ ಕನಿಷ್ಟ ಸಂಬಳವನ್ನು ಕಡ್ಡಾಯವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಿದೆ. ಮೊದಲು 7000 ರೂ. ದೊರೆಯುತ್ತಿದ್ದ ಸಂಬಳವನ್ನು 17000 ಕ್ಕೆ ಹೆಚ್ಚಿಸಿ, ನೇರವಾಗಿ ಬ್ಯಾಂಕ್ ಖಾತೆಗೆ ಪಾವತಿಯಾಗುವ ವ್ಯವಸ್ಥೆಯನ್ನು ಮಾಡಲಾಯಿತು. ಈ ರೀತಿ ಪೌರಕಾರ್ಮಿಕರಿಗೆ ಮದ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸಲಾಯಿತು ಎಂದರು.

ಪೌರಕಾರ್ಮಿಕರ ಬೇಡಿಕೆ ಈಡೇರಿಸಿದ್ದು ಕಾಂಗ್ರೆಸ್ ಸರಕಾರ :

ವಿರೋಧ ಪಕ್ಷದ ನಾಯಕನಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿದ್ದ ಖಾಯಂ ನೇಮಕಾತಿಯನ್ನು ಬೆಂಬಲಿಸಿ, ಆಗಿನ ಸರಕಾರ ಖಾಯಂ ನೇಮಕಾತಿ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಪೌರ ಕಾರ್ಮಿಕರ ಈ ಬೇಡಿಕೆಯನ್ನು ಪೂರೈಸುವುದಾಗಿ ನೀಡಲಾಗಿದ್ದ ಭರವಸೆಯನ್ನು ಇಂದು ಈಡೇರಿಸಲಾಗಿದೆ. ಇದರಿಂದ 4ನೇ ದರ್ಜೆಯ ಪೌರಕಾರ್ಮಿಕನ ವೇತನ , ಅವರ ಖಾತೆಗೆ ನೇರವಾಗಿ 39000 ರೂ.ಗಳು ಪಾವತಿಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಕಾಯಕದಲ್ಲಿ ಮೇಲು-ಕೀಳು ಇಲ್ಲ :

ಶುಚಿತ್ವದಲ್ಲಿ ದೈವತ್ವವನ್ನು ಕಾಣಬೇಕು ಎಂದು ಮಹಾತ್ಮಾಗಾಂಧೀಜಿಯವರು ನುಡಿದಿದ್ದರು. ಪರಿಸರದ ಸ್ವಚ್ಛತೆಯನ್ನು ಕಾಪಾಡುವುದು ಶ್ರೇಷ್ಠವಾದ ಕೆಲಸ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದು, ಯಾವುದೇ ಕೆಲಸದಲ್ಲಿ ಮೇಲು ಕೀಳೆಂಬುದು ಇಲ್ಲ ಎಂದರು.

ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು :

1000 ಪೌರಕಾರ್ಮಿಕರನ್ನು ವಿದೇಶಕ್ಕೆ ಕಳಿಸುವ ಯೋಜನೆ ಸೇರಿದಂತೆ ಹಲವಾರು ಕಲ್ಯಾಣ ಯೋಜನೆಗಳನ್ನು ಪೌರಕಾರ್ಮಿಕರಿಗಾಗಿ ಹಮ್ಮಿಕೊಳ್ಳಲಾಗಿದೆ. ಪೌರಕಾರ್ಮಿಕರು , ಅವರ ಕುಟುಂಬದವರೂ ಮುಖ್ಯವಾಹಿನಿಗೆ ಬರಬೇಕು, ತನ್ಮೂಲಕ ಸಮಸಮಾಜವನ್ನು ನಿರ್ಮಿಸುವ ಉದ್ದೇಶ ಸರಕಾರದ್ದಾಗಿದೆ. ರಾಜ್ಯದ ಎಲ್ಲ ವರ್ಗದ ಜನರಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ದೊರೆಯುವಂತಾಗಬೇಕು. ಪೌರಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರಕಾರಕ್ಕೆ ಬೆಂಬಲವಾಗಿ ನಿಲ್ಲಬೇಕೆಂದು ಕೋರಿದರು. ಪೌರಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಬೇಕು. ಸಾರ್ವಜನಿಕರೂ ತಮ್ಮ ಪರಿಸರದ ಸ್ವಚ್ಛತೆ ಬಗ್ಗೆ ಸ್ವಯಂಪ್ರೇರಣೆಯಿಂದ ಗಮನಹರಿಸಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X