Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೋದಿ ಕೊಟ್ಟ ಭರವಸೆಯಲ್ಲಿ ಒಂದಾದರೂ ಜಾರಿ...

ಮೋದಿ ಕೊಟ್ಟ ಭರವಸೆಯಲ್ಲಿ ಒಂದಾದರೂ ಜಾರಿ ಆಗಿರುವ ಉದಾಹರಣೆ ಇದೆಯೇ?: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 May 2025 6:11 PM IST
share
ಮೋದಿ ಕೊಟ್ಟ ಭರವಸೆಯಲ್ಲಿ ಒಂದಾದರೂ ಜಾರಿ ಆಗಿರುವ ಉದಾಹರಣೆ ಇದೆಯೇ?: ಸಿದ್ದರಾಮಯ್ಯ

ಹಾವೇರಿ: ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿ ಅವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದಾದರೂ ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ರವಿವಾರ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ಎ.ಪಿ.ಎಂ.ಸಿ.ಆವರಣದಲ್ಲಿ 650 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಲೋಕಾರ್ಪಣೆಗೊಳಿಸಿ, ನೂತನ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಹಾವೇರಿ ಜಿಲ್ಲೆ ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಶ್ರೇಷ್ಠತೆ ಪಡೆದಿರುವ ಜಿಲ್ಲೆ. ಈ ಜಿಲ್ಲೆಯ ಆರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಭರವಸೆ ವ್ಯಕ್ತಪಡಿಸಿದರು.

ನೀವು ಕಾಂಗ್ರೆಸ್ ಪಕ್ಷಕ್ಕೆ, ಈ ಸರಕಾರಕ್ಕೆ ಕೊಟ್ಟ ಮತಗಳಿಗೆ ನಾವು ಘನತೆಯಿಂದ ಗೌರವಿಸಿದ್ದೇವೆ. ಚುನಾವಣೆಗೆ ಮೊದಲು ಕೊಟ್ಟ ಮಾತಿನಂತೆ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸಿ ನಿಮ್ಮ ಮತಗಳ ತೂಕ ಹೆಚ್ಚಿಸಿದ್ದೇವೆ ಎಂದು ಸಿದ್ದರಾಮಯ್ಯ ನುಡಿದರು.

ಗ್ಯಾರಂಟಿಗಳಿಂದ ಖಜಾನೆ ಖಾಲಿ ಆಗಿದೆ ಎಂದು ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಹಸಿ ಹಸಿ ಸುಳ್ಳು ನಂಬಬೇಡಿ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ ಈ ಬಾರಿಯ ಬಜೆಟ್ ಗಾತ್ರ 38 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಅಲ್ಲದೇ, ಈ ಬಾರಿ ಬಂಡವಾಳ ವೆಚ್ಚ 83 ಸಾವಿರ ಕೋಟಿ ರೂ. ತೆಗೆದಿರಿಸಿದ್ದೇವೆ. ಕಳೆದ ವರ್ಷಕ್ಕಿಂತ 31 ಸಾವಿರ ಕೋಟಿ ರೂ. ಬಂಡವಾಳ ವೆಚ್ಚ ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದಲ್ಲದೆ ಹೆಚ್ಚುವರಿವಾಗಿ 50 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ತೆಗೆದಿಟ್ಟಿದ್ದೇವೆ. ಒಟ್ಟು 1.33 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿ ಕಾರ್ಯಗಳಿಗೆ ತೆಗೆದಿಟ್ಟಿದ್ದೇವೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಈಗ ನಮ್ಮ ಸರಕಾರದ ವಿರುದ್ಧ ನಕಲಿ ಜನಾಕ್ರೋಶ ಸಭೆ ನಡೆಸುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇದ್ದಿದ್ದರೆ ಕೇಂದ್ರ ಸರಕಾರದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

2014ರಲ್ಲಿ ತಮ್ಮ ಸರಕಾರ ಬಂದರೆ ಅಚ್ಛೇದಿನ್ ಆಯೆಗಾ(ಒಳ್ಳೆ ದಿನಗಳು ಬರುತ್ತವೆ) ಎಂದು ಹೇಳಿದ್ರಲ್ಲಾ ಮೋದಿ, ಎಲ್ರೀ ಬಂತು ಈ ಅಚ್ಛೆ ದಿನ್. ದುರ್ಬೀನು ಹಾಕಿ ಹುಡುಕಿದರೂ ಕಾಣಿಸುತ್ತಿಲ್ಲ ಎಂದು ಟೀಕಿಸಿದ ಸಿದ್ದರಾಮಯ್ಯ, ಡಾಲರ್ ಎದುರು ರೂಪಾಯಿ ಬೆಲೆ 59 ರೂ.ನಿಂದ 85 ರೂಪಾಯಿಗೆ ಏರಿಕೆ ಆಗಿದೆ. ಅಡುಗೆ ಅನಿಲ ಸಿಲಿಂಡ್ 400 ರೂಪಾಯಿಂದ 879 ರೂ.ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೇ, ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಔಷಧ, ಚಿನ್ನ, ಅಕ್ಕಿ, ಬೇಳೆ, ಎಣ್ಣೆ, ಕಾಳು ಸೇರಿ ಎಲ್ಲದರ ಬೆಲೆಯನ್ನೂ ಮೋದಿ ಆಕಾಶಕ್ಕೆ ಏರಿಸಿದ್ದಾರಲ್ಲಾ ಇದೇನಾ ಅಚ್ಚೆ ದಿನ್ ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ಮೋದಿ ಭರವಸೆ ಕೊಟ್ಟಿದ್ದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಆಗಲಿಲ್ಲ. ಅದಕ್ಕೇ ಹೇಳೋದು ಸುಳ್ಳು ಬಿಜೆಪಿಯ ಮನೆ ದೇವರು ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಆದುದರಿಂದ, ಜನರ ಆಕ್ರೋಶ ಇರುವುದು ಬಿಜೆಪಿ ಮೇಲೆ, ಪ್ರಧಾನಿ ನರೇಂದ್ರ ಮೋದಿ ಮೇಲೆ ಎನ್ನುವುದನ್ನು ಅಶೋಕ್, ವಿಜಯೇಂದ್ರ ಅರ್ಥ ಮಾಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಹೇಳಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನಪರಿಷತ್ತಿನ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ, ಯಾಸಿರ್ ಖಾನ್ ಪಠಾಣ್, ಪ್ರಕಾಶ್ ಕೋಳಿವಾಡ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X