Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಒಂದು ವರ್ಷ ಆದರೂ 176 ತರಬೇತುದಾರರ...

‘ಒಂದು ವರ್ಷ ಆದರೂ 176 ತರಬೇತುದಾರರ ನೇಮಕಾತಿ ಆಗಿಲ್ಲ’ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 May 2025 7:30 PM IST
share
‘ಒಂದು ವರ್ಷ ಆದರೂ 176 ತರಬೇತುದಾರರ ನೇಮಕಾತಿ ಆಗಿಲ್ಲ’ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 176 ತರಬೇತುದಾರರ ನೇಮಕಾತಿಗೆ ನಾನೇ ಸೂಚಿಸಿ ಒಂದು ವರ್ಷ ಆಗಿದೆ. ಆದರೂ ನೇಮಕಾತಿ ಪ್ರಕ್ರಿಯೆ ಚುರುಕು ಆಗಿಲ್ಲ ಯಾಕೆ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಪ್ರತೀ ಜಿಲ್ಲೆಯಲ್ಲೂ ಉಪ ನಿರ್ದೇಶಕರು ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಿದರು.

ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕಾಗಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟರೂ ಅಗತ್ಯ ತರಬೇತುದಾರರ ನೇಮಕಾತಿ ಆಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಪ್ರಗತಿ ಕಂಡು ಬರುತ್ತಿಲ್ಲ. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು? ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಪ್ರತೀ ವರ್ಷ ಪ್ರಾಧಿಕಾರದ ಸಭೆ ನಡೆಸಬೇಕು, ಪ್ರತೀ ವರ್ಷ ಆಡಿಟ್ ಆಗಬೇಕು. ಪ್ರತೀ ವರ್ಷ ನೇಮಕಾತಿ ನಡೆಯಬೇಕು. ಇದರಲ್ಲಿ ನಿರ್ಲಕ್ಷ್ಯವಹಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸಲು ಅನುದಾನ ನಿಗಧಿ ಪಡಿಸಲು ಮತ್ತು ಅಂತರ್‍ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸುವ ಮೊದಲು ಕನಿಷ್ಠ 15 ರಾಷ್ಟ್ರಗಳು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಸರಿಯಾದ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಕೇವಲ ಲೆಟರ್ ಹೆಡ್ ಗಳಲ್ಲಿ ರಾಷ್ಟ್ರೀಯ, ಅಂತರ್‍ರಾಷ್ಟ್ರೀಯ ಕ್ರೀಡಾಕೂಟ ಎಂದು ಬರುವ ಸಂಸ್ಥೆಗಳಿಗೆ ಕಡಿವಾಣ ಹಾಕಿ, ಪ್ರಾಮಾಣಿಕವಾಗಿ ಕ್ರೀಡಾಕೂಟ ನಡೆಸುವವರಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಸ್ಪೋಟ್ರ್ಸ್ ಅಥಾರಿಟಿ ಆಫ್ ಇಂಡಿಯಾದ ಕಾರ್ಯ ಚಟುವಟಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದಕ್ಕಿಂತ ಉತ್ತಮ ರೀತಿಯಲ್ಲಿ ನಮ್ಮ ಮಿತಿಯೊಳಗೆ ಕ್ರೀಡಾ ಕಾರ್ಯ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಕ್ರಮ ವಹಿಸಿ ಅವರು ಹೇಳಿದರು.

ಕಂಬಳಕ್ಕೆ ಗ್ರಾಮೀಣ ಕ್ರೀಡೆಯ ಮಾನ್ಯತೆ: ಮುಂದಿನ ಐದಾರು ತಿಂಗಳಲ್ಲಿ, ದಸರಾ ಕ್ರೀಡಾಕೂಟ ಆರಂಭವಾಗುವುದರೊಳಗೆ ಕ್ರೀಡಾ ಪ್ರಾಧಿಕಾರ ಕ್ರಿಯಾಶೀಲ ಆಗಬೇಕು. ಕ್ರೀಡಾಕೂಟಗಳಿಗೆ ಅನುದಾನ ನೀಡುವುದು ಆನ್ ಲೈನ್ ನಲ್ಲಿ ದಾಖಲಾಗಬೇಕು. ಅಲ್ಲದೇ, ಕರಾವಳಿ ಭಾಗದಲ್ಲಿ ನಡೆಸುವ ಕಂಬಳವನ್ನು ಗ್ರಾಮೀಣ ಕ್ರೀಡೆ ಎಂದು ಮಾನ್ಯತೆ ನೀಡಿ ಪ್ರೋತ್ಸಾಹ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಕಂಠೀರವ ಕ್ರೀಡಾಂಗಣ ಹವಾ ನಿಯಂತ್ರಿತ ವ್ಯವಸ್ಥೆ ಶೀಘ್ರ್ರದಲ್ಲಿ ಜಾರಿಗೊಳಿಸಬೇಕು. ಕಂಠೀರವ ಕ್ರೀಡಾಂಗಣ ನಿರ್ಮಾಣವಾಗಿ 29 ವರ್ಷಗಳಾಗಿರುವುದರಿಂದ ಪ್ರೇಕ್ಷಕರ ಸುರಕ್ಷತೆಗೆ ಗ್ಯಾಲರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಕ್ರೀಡಾಂಗಣದ ಜಿಮ್, ಶೌಚಾಲಯ, ಟ್ರಾಕ್ ಗಳ ದುರಸ್ತಿಗೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.

ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು. ಪದೇ ಪದೇ ಪರಿಶೀಲನೆ ನಡೆಸಿ, ಲೋಪ ಕಂಡರೆ ವಾರ್ಡನ್ ಗಳ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಿ, ಕ್ರೀಡಾ ಹಾಸ್ಟೆಲ್‍ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಅಲ್ಲೇ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ನಡೆಯುವ ವೇಳೆ ಚನ್ನಪಟ್ಟಣದಿಂದ ಆನ್‍ಲೈನ್ ಮೂಲಕ ವಿಡಿಯೊ ಕಾನ್ಫರೆನ್ಸ್‌ ಗೆ ಬಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು. ಮುಖ್ಯಮಂತ್ರಿ ಅಧಿಕಾರಿಗಳಿಗೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X