Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಜನಸ್ಪಂದನ ಕಾರ್ಯಕ್ರಮದಲ್ಲಿ...

‘ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು’; ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 May 2025 11:17 PM IST
share
‘ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು’; ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಬಗೆಹರಿಸಬೇಕು. ಅರ್ಜಿಗಳನ್ನು ಕಾಟಾಚಾರಕ್ಕೆ ವಿಲೇವಾರಿ ಮಾಡದೆ ಅರ್ಜಿಗಳಿಗೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ಸೂಚನೆಯನ್ನು ನೀಡಿದ ಅವರು, ಕಾನೂನು ಬದ್ಧವಾಗಿ ಅರ್ಜಿಯನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲದಿದ್ದರೆ ಮೊದಲೇ ಅರ್ಜಿದಾರರಿಗೆ ತಿಳಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಹಶೀಲ್ದಾರ್ ಗಳು ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ನಡೆಸಬೇಕು. ಸಕಾಲ ಯೋಜನೆಯಡಿ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆ ಅಡಿ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಅನುಷ್ಠಾನ ಆಗಿಲ್ಲ. ಅದೇ ರೀತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರಕಾರದಿಂದ 1400 ಕೋಟಿ ರೂ. ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳ ಕೂಲಿ ಹಣ ಪಾವತಿಗೆ ಬಾಕಿಯಿದೆ. ಕೇಂದ್ರದಿಂದ ಹಣ ಬಿಡುಗಡೆಗೆ ಒತ್ತಡ ಹಾಕಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ 1.50 ಕೋಟಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಕಿಯಿರುವ 1352 ಇ-ಸ್ವತ್ತು ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಇಂದಿರಾ ಕ್ಯಾಂಟೀನ್: ಹೊಸದಾಗಿ ಘೋಷಣೆ ಮಾಡಲಾಗಿರುವ 186 ಇಂದಿರಾ ಕ್ಯಾಂಟೀನ್‍ಗಳ ಪೈಕಿ ಕೇವಲ 103 ನಿರ್ಮಾಣ ಕಾರ್ಯ ಪೂರ್ಣಗೊಂಡಿವೆ. ಆಹಾರ ವಿತರಣೆ 43 ಇಂದಿರಾ ಕ್ಯಾಂಟೀನ್‍ಗಳಲ್ಲಿ ಮಾತ್ರ ಪ್ರಾರಂಭವಾಗಿದೆ. ಒಂದು ವಾರದ ಒಳಗಾಗಿ ಇನ್ನುಳಿದ ಎಲ್ಲ ಕಡೆ ಆಹಾರ ವಿತರಣೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಇನ್ನೂ 5 ಕಡೆ ಇಂದಿರಾ ಕ್ಯಾಂಟೀನ್ ಗಳಿಗೆ ಸ್ಥಳ ಗುರುತಿಸಬೇಕಾಗಿದೆ. ತಕ್ಷಣ ನಿವೇಶನ ಗುರುತಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ತೆರಿಗೆ ವ್ಯಾಪ್ತಿಗೆ ತನ್ನಿ: ನಗರಾಭಿವೃದ್ಧಿ ಇಲಾಖೆಯಡಿ ಒಟ್ಟು 46,85,107 ಎ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, 21,18,459 ಸ್ವತ್ತುಗಳಿಗೆ ಇ-ಖಾತಾ ನೀಡಲಾಗಿದೆ. 9,93,342 ಅನಧಿಕೃತ ಬಿ-ಖಾತಾ ಸ್ವತ್ತುಗಳನ್ನು ಗುರುತಿಸಲಾಗಿದ್ದು, ಇದುವರೆಗೆ 2,21,691 ಬಿ-ಖಾತಾ ನೀಡಲಾಗಿದೆ. ಎಲ್ಲ ಸ್ವತ್ತುಗಳಿಗೆ ನಿಯಮಾನುಸಾರ ಖಾತಾ ಒದಗಿಸಿ ತೆರಿಗೆ ವ್ಯಾಪ್ತಿಗೆ ಬರಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಎಲ್ಲ ತಾಲೂಕುಗಳಲ್ಲಿ ಡಯಾಲಿಸಿಸ್ ಘಟಕ ಪ್ರಾರಂಭಿಸಲು ಈಗಾಗಲೇ ಆದೇಶ ನೀಡಲಾಗಿದೆ. ಇವು ಪ್ರಾರಂಭವಾಗಿದೆಯೇ? ಪ್ರಾರಂಭವಾಗಿದ್ದರೆ ಕಾರ್ಯ ನಿರ್ವಹಿಸುತ್ತಿವೆಯೇ? ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುವುದು ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿಯಾಗಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ನಿರಂತರವಾಗಿ ಭೇಟಿ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ವೈದ್ಯಾಧಿಕಾರಿಗಳನ್ನು ಅನಗತ್ಯವಾಗಿ ಸಭೆಗಳಿಗೆ ಆಹ್ವಾನಿಸಬಾರದು ಎಂದು ಅವರು ಸೂಚಿಸಿದರು.

ಬಾಣಂತಿಯರ ಮರಣ ಪ್ರಮಾಣಕ್ಕೆ ಕಡಿವಾಣ ಹಾಕಿ: ಬಾಣಂತಿಯರ ಮರಣ ಪ್ರಮಾಣ ಕೇರಳಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.30 ರಷ್ಟು ಕಡಿಮೆಯಾಗಿದ್ದರೂ, ಇದನ್ನು ಇನ್ನಷ್ಟು ಕಡಿಮೆಗೊಳಿಸಲು ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸುವುದು, ಅಗತ್ಯ ಉಪಕರಣಗಳ ಖರೀದಿ ಸೇರಿದಂತೆ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆದೇಶಿಸಿದರು.

ಊರಿಗೆ ಹತ್ತಿರವಿರುವ ಸ್ಥಳಗಳನ್ನು ಗುರುತಿಸಿ: ಸ್ಮಶಾನ ಮತ್ತು ಖಬರಸ್ತಾನಗಳಿಗೆ ಜಮೀನು ಒದಗಿಸಲು ಆದ್ಯತೆ ನೀಡಬೇಕು. ಸರಕಾರಿ ಜಮೀನು ಲಭ್ಯವಿಲ್ಲದ ಕಡೆ ಖಾಸಗಿ ಜಮೀನು ಖರೀದಿ ಮಾಡಿ ಒದಗಿಸಬೇಕು. ಹಾಸ್ಟೆಲ್‍ಗಳಿಗೆ ನಿವೇಶನ ಗುರುತಿಸುವ ಸಂದರ್ಭದಲ್ಲಿ ಊರಿನಿಂದ ಬಹಳ ದೂರವಿರುವ ನಿರ್ಜನ ಪ್ರದೇಶದಲ್ಲಿ ನೀಡಬಾರದು ಎಂದು ಮುಖ್ಯಮಂತ್ರಿ ತಿಳಿಸಿದರು.

ನಿವೃತ್ತ ಸೈನಿಕರಿಗೆ ನಿವೇಶನ ತ್ವರಿತವಾಗಿ ನೀಡಿ: ನಿವೃತ್ತ ಸೈನಿಕರಿಗೆ ನಿವೇಶನ ಕುರಿತಾದ ಅರ್ಜಿಗಳನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಿ ಅವರಿಗೆ ಜಮೀನು ಒದಗಿಸಬೇಕು. ಪ್ರತಿ ತಾಲೂಕಿನಲ್ಲಿ ಲಭ್ಯವಿರುವ ಸರಕಾರಿ ಜಮೀನಿನ ಸಂಪೂರ್ಣ ಮಾಹಿತಿ ಲಭ್ಯವಿದ್ದು, ಒತ್ತುವರಿಯಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸಬೇಕು. ಮುಂದಿನ ಸಭೆಯ ವೇಳೆ ನಿವೇಶನ ಲಭ್ಯವಿಲ್ಲದ ಬಗ್ಗೆ ಯಾವುದೇ ದೂರು ಬರಬಾರದು ಎಂದು ಅವರು ಸೂಚಿಸಿದರು.

ಸೈನಿಕರ ಕಲ್ಯಾಣ ನಿಗಮ: ಸೈನಿಕರ ಕಲ್ಯಾಣ ನಿಗಮ ಸ್ಥಾಪಿಸುವ ಕುರಿತಾದ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಕ್ರೀಡಾಂಗಣ: ಒಟ್ಟು 59 ತಾಲೂಕುಗಳಲ್ಲಿ ಕ್ರೀಡಾಂಗಣಗಳು ಲಭ್ಯವಿಲ್ಲ. ಎಲ್ಲ ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಗುರುತಿಸಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಯುವನಿಧಿ: ಯುವನಿಧಿ ಯೋಜನೆಯಡಿ ಫಲಾನುಭವಿಗೆ ಎರಡು ವರ್ಷಗಳ ಅವಧಿಗೆ ನೆರವು ನೀಡಲಾಗುತ್ತಿದ್ದು, ಈ ಅವಧಿಯಲ್ಲಿ ಫಲಾನುಭವಿಗಳಿಗೆ ಉದ್ಯೋಗ ದೊರೆತರೆ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಿದರೆ ನೆರವು ಸ್ಥಗಿತಗೊಳ್ಳುತ್ತದೆ. ಪ್ರತಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಅವರ ಬೆಳವಣಿಗೆ ಮೇಲೆ ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X