Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು...

ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರಕಾರದ ಧ್ಯೇಯ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 Jan 2026 5:59 PM IST
share
ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರಕಾರದ ಧ್ಯೇಯ : ಸಿಎಂ ಸಿದ್ದರಾಮಯ್ಯ
ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭ

ಬೆಂಗಳೂರು : ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ದೇವಾಂಗ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು

ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು ವರ್ಷಗಳನ್ನು ಪೂರೈಸುವುದು ಮೈಲಿಗಲ್ಲು ಸಾಧನೆಯಾಗಿದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಿಲಯ, ವ್ಯವಸ್ಥೆ ಒದಗಿಸಲಾಗುತ್ತಿರುವುದು ಸಂತಸದ ವಿಚಾರ ಎಂದರು.

ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದ ನೆರವಿಗೆ ಭರವಸೆ

ಮಹಿಳೆಯರು ಹಾಗೂ ಶೋಷಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಪ್ರಸ್ತುತ ಲಿಂಗ ತಾರತಮ್ಯ ನೀಗುತ್ತಿದ್ದು, ಸಂಘದವರು ಮಹಿಳಾ ಸಬಲೀಕರಣಕ್ಕೆ ನೆರವು ನೀಡುತ್ತಿದೆ. ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯ ನೀಡುವ ಭರವಸೆ ನೀಡಿದರು.

ಸಮುದಾಯದ ಸಂಘಟನೆ ಅಗತ್ಯ

ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರ್ಕಾರದ ಧ್ಯೇಯ. ಶ್ರೀಮಂತ ಇತಿಹಾಸವಿರುವ ಈ ಸಮುದಾಯದವರು ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿದೆ. ರೈತರು ಆಹಾರ ಪೂರೈಸಿದಂತೆ, ನೇಕಾರರು ಬಟ್ಟೆಯನ್ನು ತಯಾರಿಸುತ್ತಾರೆ. ಈ ಸಮುದಾಯದ ಸಂಘಟನೆಯಾಗುವುದು ಅಗತ್ಯ. ಸಂಘಟನೆಯ ಮೂಲಕವೇ ಶಕ್ತಿ ಬೆಳೆಯುತ್ತದೆ. ಹಿಂದುಳಿದವರು ಸಂಘಟಿಸಿದರೆ ಜಾತಿಯತೆಯಾಗುವುದಿಲ್ಲ ಎಂದು ಸಮಾಜ ಚಿಂತಕರು ಲೋಹಿಯಾ ಅವರು ಹೇಳಿದ್ದಾರೆ. ಶಿಕ್ಷಣದಿಂದ ವಂಚಿತರಾಗಿರುವುದರಿಂದ ಸಮಾಜದಲ್ಲಿ ಅಸಮಾನತೆಯಿದೆ. ಬಸವಾದಿ ಶರಣರು ಸಮಾಜದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದರು.ಡಾ.ಬಿ.ಆರ್.ಅಂಬೇಡ್ಕರ್ ಅವರು, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ,ರಾಜಕೀಯ ಸ್ವಾತಂತ್ರ್ಯದಿಂದ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ ಎಂದು ನುಡಿದಿದ್ದರು.

ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ

ದೇವಾಂಗ ಸಮುದಾಯದಲ್ಲಿರುವ ಎಲ್ಲ ಉಪಜಾತಿಗಳನ್ನು ತೆಗೆಯಬೇಕು. ಸಮುದಾಯದಲ್ಲಿ ಹಲವು ಗುಂಪುಗಳಿದ್ದರೂ, ಒಂದೇ ಶಕ್ತಿಯಾಗಿ ಸಂಘಟಿತರಾಗಿ , ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಸಮಾಜದಲ್ಲಿ ಸಾಕ್ಷರತೆ ಶೇ.76 ರಷ್ಟಿದ್ದು, ಮಹಿಳೆಯರಲ್ಲಿ ಈ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ಸಮುದಾಯದ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಜಾತಿವ್ಯವಸ್ಥೆಯಿಲ್ಲದ ಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯವಾಗಿದೆ. ಎಲ್ಲ ಜಾತಿಧರ್ಮದವರು ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಳ್ಳಬೇಕು. ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ನಿಮ್ಮ ಹಕ್ಕುಗಳನ್ನು ಪಡೆಯಿರಿ ಎಂದು ತಿಳಿಸಿದರು.

ನೇಕಾರರ ಅಭಿವೃದ್ಧಿ ನಿಗಮ; ಪರಿಶೀಲಿಸಿ ತೀರ್ಮಾನ

2004-05ರಲ್ಲಿ ಹಣಕಾಸು ಸಚಿವನಾಗಿದ್ದ ಸಂದರ್ಭದಲ್ಲಿ ನೇಕಾರರಿಗೆ ತಲಾ ಯೂನಿಟ್ ಗೆ 4.20 ರೂ. ಇದ್ದ ವಿದ್ಯುತ್ ದರವನ್ನು 1.20 ರೂ.ಗಳಿಗೆ ಕಡಿತಗೊಳಿಸಲಾಗಿತ್ತು. ಈ ಯೋಜನೆಯ ಲಾಭವನ್ನು ಸಮುದಾಯದ ಶೇ.80 ರಷ್ಟು ಜನರಿಗೆ ನೆರವಾಗಿತ್ತು. ಪ್ರಸ್ತುತ ನೇಕಾರರಿಗೆ 20 ಹೆಚ್ ಪಿವರೆಗೆ ರಿಯಾಯತಿ ದರದಲ್ಲಿ ವಿದ್ಯುತ್ ವ್ಯವಸ್ಥೆ ನೀಡಲಾಗುತ್ತಿದೆ. ಶೂನ್ಯಬಡ್ಡಿ ದರದಲ್ಲಿ 5 ಲಕ್ಷರೂ.ವರೆಗೆ ಸಾಲ ವ್ಯವಸ್ಥೆ, ನೇಕಾರ ಸಮ್ಮಾನ ಯೋಜನೆ, ದೇವರದಾಸಿಮಯ್ಯ, ವಚನಕಾರರ ಜಯಂತಿಯನ್ನು ಪ್ರಾರಂಭಿಸಿದ್ದು ನಮ್ಮ ಸರ್ಕಾರ. ಸಮುದಾಯದ ಜನಪ್ರತಿನಿಧಿಗಳನ್ನು ಶಾಸಕರು ಮತ್ತು ಎಂಎಲ್ ಸಿ ಗಳಾಗಿದ್ದಾರೆ. ಹಿಂದುಳಿದ ಜಾತಿಗಳಿಗೆ ಜಮೀನು ನೀಡುವ ಚಿಂತನೆಯನ್ನು ಸರ್ಕಾರ ಹೊಂದಿದೆ. ನೇಕಾರರ ಅಭಿವೃದ್ಧಿ ನಿಗಮ ಸ್ಥಾಪಿಸುವ ಬೇಡಿಕೆಯಿದ್ದು, ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ನನ್ನ ಕುರ್ಚಿಯಲ್ಲೆ ಕುಳಿತುಕೋ...:

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿದ್ದ ವೇಳೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆ ಮೇಲೆ ಆಸನಕ್ಕಾಗಿ ಹುಡುಕಾಡುತ್ತಿದ್ದರು. ಆಗ ದೇವಾಂಗ ಸಂಘದ ಅಧ್ಯಕ್ಷ ಡಾ.ಜಿ.ರಮೇಶ್ ಅವರನ್ನು ಕರೆದು ‘ತನ್ನ ಕುರ್ಚಿಯಲ್ಲಿ ಕುಳಿತುಕೊಳ್ಳಲು ಹೇಳಿ’ ಎಂದು ಸಿಎಂ ಹೇಳಿದರು. ಆಗ ಡಿ.ಕೆ.ಶಿವಕುಮಾರ್ ಸೇರಿ ವೇದಿಕೆಯಲ್ಲಿದ್ದವರು ನಗೆ ಗಡಲಲ್ಲಿ ತೇಲಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X