Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ...

ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Jan 2026 7:09 PM IST
share
ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು : ಸಿದ್ದರಾಮಯ್ಯ
ಅಭಿಯೋಜಕರ ಅಕಾಡೆಮಿ ಸ್ಥಾಪನೆ: ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶನಿವಾರ ಕೆಇಬಿ ಇಂಜಿನಿಯರಿಂಗ್ ಅಸೋಸಿಯೇಷನ್ ರಜತ ಮಹೋತ್ಸವ ಸಭಾಂಗಣದಲ್ಲಿ ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ನಿರಪರಾಧಿಗೆ ಶಿಕ್ಷೆಯಾಗಬಾರದು: ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದು ಅವರು ತಿಳಿಸಿದರು.

ಎಚ್ಚರಿಕೆ ಅಗತ್ಯ: ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದು ಸಿದ್ದರಾಮಯ್ಯ ನುಡಿದರು.

ಶಿಕ್ಷೆ ಪ್ರಮಾಣದಲ್ಲಿ ಕರ್ನಾಟಕಕ್ಕೆ 22ನೇ ಸ್ಥಾನ: ಎನ್‍ಸಿಆರ್‍ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22ನೇ ಸ್ಥಾನದಲ್ಲಿದೆ. ಕೇರಳದಲ್ಲಿ ಶೇ.87ರಷ್ಟಿದೆ. ಮಿಜೋರಾಂ ಶೇ.92, ಗುಜರಾತ್ ಮತ್ತು ತೆಲಂಗಾಣ ಶೇ.57, ಉತ್ತರ ಪ್ರದೇಶದಲ್ಲಿ ಶೇ.72, ಹೊಸದಿಲ್ಲಿ ಶೇ.89ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ನ್ಯಾಯ ಎತ್ತಿ ಹಿಡಿಯುವ ಪ್ರಯತ್ನ ಮಾಡಿ: ಸಮಸ್ಯೆಗಳ ಹೊರತಾಗಿಯೂ ಜನರಿಗೆ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

ಅಕಾಡೆಮಿ ಸ್ಥಾಪನೆ: ಪ್ರತಿವರ್ಷವೂ ಸಮ್ಮೇಳನಗಳ ಜರುಗಬೇಕು. ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ, ಅಭಿಯೋಜನಾಧಿಕಾರಿಗಳ ಸಂಘದ ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.

ಕಾನೂನು ಸಚಿವ ಎಚ್.ಕೆ.ಪಾಟೀಲ್, ಹೈಕೋರ್ಟ್‍ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕಿ ಅಂಜಲಿ ದೇವಿ, ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥನಾರಾಯಣ್, ಕಾರ್ಯದರ್ಶಿ ಸವಿತಾ ಉಪಸ್ಥಿತರಿದ್ದರು.

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X