Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ...

ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ : ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ11 Oct 2026 8:34 PM IST
share
ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ನಮ್ಮ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ಭಾರತ ಯಾತ್ರ ಕೇಂದ್ರ ಹಾಗೂ ಲೋಕನಾಯಕ ಜೆ.ಪಿ. ವಿಚಾರ ವೇದಿಕೆಯ ವತಿಯಿಂದ ಆಯೋಜಿಸಿದ್ದ ‘ಜಯಪ್ರಕಾಶ್ ನಾರಾಯಣ್ ಹುಟ್ಟುಹಬ್ಬ’ ಹಾಗೂ ಜೆ.ಪಿ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ವಾಧಿಕಾರ, ಭ್ರಷ್ಟಾಚಾರ ಇದೆ. ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಕೈಗೊಂಬೆಗಳನ್ನಾಗಿ ಮಾಡಿಕೊಂಡಿದ್ದಾರೆ. ಮತಗಳನ್ನು ತೆಗೆದುಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿನಲ್ಲಿ ನಾವು ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ. ಅದರಿಂದ ಮಾಜಿ ಸಂಸದ ವಿ.ಎಸ್. ಉಗ್ರಪ್ಪನವರು ಈ ಹಿನ್ನೆಲೆಯಲ್ಲಿ ಇನ್ನೊಂದು ಸ್ವಾತಂತ್ರ್ಯ ಹೋರಾಟ ಆಗಬೇಕಿದೆ ಎಂದು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೀಗ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ), ಯುವಜನರು ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇಂಡಿಯಾ ಒಕ್ಕೂಟವು ಹೋರಾಟ ಮಾಡುತ್ತಿದೆ. ಇದು ಯಾವ ರೂಪ ತಾಳುತ್ತದೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ದೇಶದಲ್ಲಿ ಬದಲಾವಣೆ ಆಗಲೇಬೇಕು. ಕ್ರಾಂತಿ ಆಗಬೇಕು. ಅದಕ್ಕಾಗಿಯೇ ಜೆಪಿಯವರು ಸಂಪೂರ್ಣ ಕ್ರಾಂತಿ ಎಂದು ಕರೆದಿದ್ದರು. ಇನ್ನೊಂದು ಸಂಪೂರ್ಣ ಕ್ರಾಂತಿ ಆಗಬೇಕಿರುವ ಅವಶ್ಯಕತೆ ಇದೆ. ಜೆಪಿಯವರ ಹೋರಾಟ, ಲೋಹಿಯಾ ಅವರ ಹೋರಾಟ, ಗಾಂಧೀಜಿಯವರ ಹೋರಾಟ, ವಿನೋಬಾ ಭಾವೆಯವರ ಹೋರಾಟ ನಮಗೆ ಮಾರ್ಗದರ್ಶನವಾಗಲಿ ಎಂದು ಅವರು ಅಭಿಪ್ರಾಯಪಟ್ಟರು.

ಎಲ್ಲಾ ಸ್ನೇಹಿತರು ಒಟ್ಟಿಗೆ ಚರ್ಚೆ ಮಾಡಿ ಮುಂದಿನ ಹೋರಾಟ ಹೇಗಿರಬೇಕು, ಮುಂದಿನ ಹೋರಾಟವನ್ನು ರೂಪಿಸುವ ಪ್ರಯತ್ನವನ್ನು ಮಾಡೋಣ ಎಂದು ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರಿಗೆ ಜೆ.ಪಿ.ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾರತ ಯಾತ್ರ ಟ್ರಸ್ಟ್‌ ನ ಅಧ್ಯಕ್ಷ ಸುಧೀಂದ್ರ ಬದೋರಿಯಾ, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಶಾಸಕ ಬಿ.ಆರ್.ಪಾಟೀಲ್, ವಿಧಾನ ಪರಿಷತ್‍ನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಕವಯಿತ್ರಿ ಕೆ.ಶರೀಫಾ ಮತ್ತಿತರರು ಉಪಸ್ಥಿತರಿದ್ದರು.

‘ಜೆಪಿಯವರ ಸಂಪೂರ್ಣ ಕ್ರಾಂತಿ, ಅವತ್ತು ಭ್ರಷ್ಟಾಚಾರದ ವಿರುದ್ಧ, ತುರ್ತು ಪರಿಸ್ಥಿತಿಯ ವಿರುದ್ಧ, ಸ್ವಜನಪಕ್ಷಪಾತದ ವಿರುದ್ಧ ಇತ್ತು. ಎಲ್ಲ ಯುವಕರಿಗೆ, ವಿದ್ಯಾರ್ಥಿಗಳಿಗೆ ಕರೆ ಕೊಟ್ಟು ಅವರು ನವ ನಿರ್ಮಾಣ ವೇದಿಕೆ ಮಾಡಿದರು. ನಾವೆಲ್ಲ ಅದರಿಂದ ಪ್ರಭಾವಿತರಾದವರು. ವಿ.ಎಸ್.ಉಗ್ರಪ್ಪನವರು ಹೆಚ್ಚು ಪ್ರಭಾವಿತರಾಗಿದ್ದಾರೆ. ನಾನು ಸ್ವಲ್ಪ ಪ್ರಭಾವಿತನಾಗಿದ್ದೆ. ಹಾಗೆ ನನಗೆ ಅವಕಾಶಗಳು ಹೆಚ್ಚಾಗಿ ಸಿಕ್ಕಿವೆ. ಅದ್ದರಿಂದ ಇವತ್ತು ಉಗ್ರಪ್ಪ ಅವರಿಗೆ ಪ್ರಶಸ್ತಿ ಸಿಕ್ಕಿದೆ. ಅವರು ಜೆ.ಪಿ ಪ್ರಶಸ್ತಿಗೆ ಅರ್ಹರಿದ್ದಾರೆ’

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X