Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಹೊಸ...

ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆ ಹುಟ್ಟು ಹಾಕಿದ ನಾಯಕ: ಡಿಸಿಎಂ ಪರಮೇಶ್ವರ್

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ 'ರಜತ ಮಹೋತ್ಸವ, ಹಿಂದುಳಿದ ಜಾತಿಗಳ ಜನ ಜಾಗೃತಿ ಸಮಾವೇಶ'

ವಾರ್ತಾಭಾರತಿವಾರ್ತಾಭಾರತಿ6 Sept 2026 4:04 PM IST
share
ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆ ಹುಟ್ಟು ಹಾಕಿದ ನಾಯಕ: ಡಿಸಿಎಂ ಪರಮೇಶ್ವರ್

ಬೆಂಗಳೂರು, ಸೆ.6: ಸಿದ್ದರಾಮಯ್ಯ ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆ ಹುಟ್ಟು ಹಾಕಿದ ನಾಯಕ. ಅಹಿಂದ ಹೋರಾಟದ ಮೂಲಕ ನಿಲರ್ಕ್ಷ್ಯಕ್ಕೆ ಒಳಗಾಗಿದ್ದ ಜಾತಿಗಳಿಗೆ, ಧ್ವನಿ ಇಲ್ಲದ ಸಮುದಾಯಗಳಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.

ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ 'ರಜತ ಮಹೋತ್ಸವ ಹಾಗೂ ಹಿಂದುಳಿದ ಜಾತಿಗಳ ಜನ ಜಾಗೃತಿ ಸಮಾವೇಶ" ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಿದ್ದರಾಮಯ್ಯನವರಿಗೆ ಮಾತ್ರವಲ್ಲದೆ, ನಮ್ಮೆಲ್ಲರ ರಾಜಕಾರಣಕ್ಕೆ ಅಹಿಂದ ಹೋರಾಟ ಬಹಳ ಯಶಸ್ವಿಯಾಗಿ ಕೆಲಸ ಮಾಡಿದೆ. ಸಿದ್ದರಾಮಯ್ಯ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಅನುಕರಿಸಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯರದ್ದು ಹೋರಾಟದ ರಾಜಕಾರಣ. ಬಡವರಿಗಾಗಿ, ಧ್ವನಿ ಇಲ್ಲದವರಿಗಾಗಿ ಮಾಡಿದ ಹೋರಾಟದ ರಾಜಕಾರಣ. ಅವರನ್ನು ಯಾರು ಬೇಕಾದರೂ ಟೀಕೆ ಮಾಡಬಹುದು. ಆದರೆ, ಒಂದು ಸಿದ್ಧಾಂತಕ್ಕೆ ಅಂಟಿಕೊಂಡು ಹಕ್ಕುಗಳನ್ನು ಜನಸಮುದಾಯಕ್ಕೆ ತಲುಪಿಸುವ ಕೆಲಸ ಅವರ ಬದ್ಧತೆಯಾಗಿದೆ ಎಂದರು.

ಈ ಒಕ್ಕೂಟವೂ ಕಳೆದ 25 ವರ್ಷಗಳಿಂದ ಹಿಂದುಳಿದ ಸಮುದಾಯಗಳಿಗೆ ಧ್ವನಿ ನೀಡುವಂತ, ಹೋರಾಟಕ್ಕೆ ಶಕ್ತಿ, ಸರ್ಕಾರದಲ್ಲಿ ಸಿಗಬೇಕಾದ ಸವಲತ್ತುಗಳು ಮತ್ತು ಅಧಿಕಾರಕ್ಕಾಗಿ ಒಕ್ಕೂಟವು ಕೆಲಸ ಮಾಡಿಕೊಂಡು ಬಂದಿದೆ ಎಂದರು.

ದೇಶದಲ್ಲಿ ಸಾವಿರಾರು ವರ್ಷಗಳ ಹಿಂದೆ ಶ್ರೇಣಿಕೃತ ವ್ಯವಸ್ಥೆ ಮಾಡಿ, ವಿವಿಧ ಜಾತಿ ಪದರಗಳನ್ನು ಸಮಾಜದಲ್ಲಿ ಸೃಷ್ಟಿ ಮಾಡಿದ್ದಾರೆ. ಜಾತಿವ್ಯವಸ್ಥೆ ವಿರುದ್ಧ ಅನೇಕ ನಾಯಕರು ನಿಂತಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು, ಹಾವನೂರು ಸೇರಿದಂತೆ ಅನೇಕರು ಹೋರಾಡಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಸಂವಿಧಾನಾತ್ಮಕವಾಗಿ ಸಿಗಬೇಕಾದ ಅವಕಾಶ ಮತ್ತು ಹಕ್ಕುಗಳನ್ನು ಕಲ್ಪಿಸಿಕೊಡುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಕಷ್ಟದಲ್ಲಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ, ಸಾಮಾಜಿಕ ಶಕ್ತಿ ನೀಡುವ ಉದ್ದೇಶದಿಂದ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿ, ಸಮರ್ಪಕವಾಗಿ ಜಾರಿಗೊಳಿಸಿದರು. ಈ ಗ್ಯಾರಂಟಿ ಯೋಜನೆಗಳನ್ನು ಆರಂಭದಲ್ಲಿ ಅನೇಕರು ಟೀಕೆ ಮಾಡಿದರು. ಅಂದು ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದ ಜನರೇ ಇಂದು ನಕಲು ಮಾಡುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿಯೂ ಅಳವಡಿಸಿಕೊಂಡು ಜಾರಿಗೊಳಿಸಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆಗಳನ್ನು ಒಪ್ಪಿಕೊಂಡಿದ್ದಾರೆ ಎಂದರು.

ದೇಶದಲ್ಲಿನ ಅನಿಷ್ಟ ಜಾತಿ ಪದ್ಧತಿ ಹೋಗದಿದ್ದರೆ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಶ್ರೇಣಿಕೃತ ವ್ಯವಸ್ಥೆಯಿಂದ ಭಾರತ ಎರಡು ಭಾಗವಾಗಿದೆ. ಉಳ್ಳವರು, ಅನುಕೂಲಸ್ಥರು ಮತ್ತು ಜಮೀನ್ದಾರರಿಗೆ ಭಾರತ ಒಂದು ಭಾಗವಾಗಿದೆ. ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಬಡವರಿಗೆ ಮತ್ತೊಂದು ಭಾರತ ಭಾಗವಾಗಿದೆ. ಇದು ಆಗಬಾರದು. ಸ್ವಾತಂತ್ರ್ಯಪೂರ್ವದಲ್ಲಿ ಹೋರಾಟ ಮಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತ ಎರಡು ಭಾಗವಾಗಲೂ ಒಪ್ಪಲಿಲ್ಲ. ಪ್ರತಿಯೊಬ್ಬರಿಗೂ ಸಮಾನತೆ, ನ್ಯಾಯ ಸಿಗಬೇಕು ಎಂದು ಪ್ರತಿಪಾದಿಸಿದ್ದರು. ಆ ನಿಟ್ಟಿನಲ್ಲಿ ದೇಶದಲ್ಲಿನ ಅಸಮಾನತೆ ನಿರ್ಮೂಲನೆಯಾಗಬೇಕಿದೆ. 21ನೇ ಶತಮಾನದ ಭಾರತ ಅಸಮಾನತೆಯಿಂದ ಕೂಡಿರಬಾರದು. ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಡಿಸಿಎಂ ಪರಮೇಶ್ವರ ಅವರು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೆಸರಿನಲ್ಲಿ ಕೆಲಸ ಮಾಡುವ ಸಂಘ ಸಂಸ್ಥೆಗಳು ತಮ್ಮ ಹಕ್ಕಿಗಾಗಿ ಹೋರಾಟ ಮಾಡಬೇಕು. ಸಂವಿಧಾನಾತ್ಮಕವಾಗಿ ನಮಗೆ ಸಿಗಬೇಕಾದ ಹಕ್ಕುಗಳನ್ನು ನಾವು ದಕ್ಕಿಸಿಕೊಳ್ಳುವ ಪ್ರಯತ್ನ ಮುಂದುವರಿಯಬೇಕು ಎಂದು ಹೇಳಿದರು.

ಎಲ್ಲ ಜಾತಿ ಸಮುದಾಯಗಳು ಒಟ್ಟಾಗಿ ಕೆಲಸ ಮಾಡಿದರೆ ರಾಜ್ಯದ ಆಡಳಿತ ಶಾಶ್ವತವಾಗಿ ಹಿಂದುಳಿದವರ ಕೈಯಲ್ಲಿ ಉಳಿಯುತ್ತದೆ. ಈ ಪ್ರಯತ್ನ ಉತ್ತರ ಪ್ರದೇಶ, ಬಿಹಾರದಲ್ಲಿ ನಡೆದಿದೆ.

ಮುಲಾಯಂ ಸಿಂಗ್ ಯಾದವ್, ಲಾಲು ಪ್ರಸಾದ್ ಯಾದವ್ ಹೋರಾಟದ ಬದುಕನ್ನು ಅಳವಡಿಸಿಕೊಂಡು ಅಧಿಕಾರ ಪಡೆದುಕೊಂಡಿದ್ದಾರೆ. ಆ ಸಂಘಟನೆಗಳು ಹೆಚ್ಚಿನ ರೀತಿಯಲ್ಲಿ ಕರ್ನಾಟಕದಲ್ಲಿ ಕೆಲಸ ಮಾಡಬೇಕು. ಸಿದ್ದರಾಮಯ್ಯ ಅಧಿಕಾರದಿಂದ ಕೆಳಗೆ ಇಳಿದಿದ್ದರೆ ಎಂದು ಯಾರು ಸಹ ಭಾವಿಸಬಾರದು. ಒಂದು ವೇಳೆ ಯಾರಾದ್ರು ಭಾವಿಸಿದರೆ, ಈ ಸಮುದಾಯಗಳ ಸಂಘಟನೆಗಳು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಬೇಕು ಎಂದರು.

ಸಿದ್ದರಾಮಯ್ಯರಿಗಿಂತ ವಿಭಿನ್ನವಾದ ನಾಯಕ ನಮಗೆ ಸಿಗಲು ಸಾಧ್ಯವಿಲ್ಲ. ಅವರ ನೇತೃತ್ವದಲ್ಲಿ ನಾವೆಲ್ಲ ಹೋರಾಟ ಮಾಡೋಣ. ಸಮಾನತೆಯ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಸಂತೋಷ್ ಲಾಡ್, ಪುಟ್ಟರಂಗ ಶೆಟ್ಟಿ, ಬೈರತಿ ಸುರೇಶ್, ಮಧು ಬಂಗಾರಪ್ಪ, ಡಾ. ಅಜಯ್ ಸಿಂಗ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಶಾಸಕರಾದ ಬಸವರಾಜ ಶಿವಣ್ಣನವರ್, ಭೀಮಸೇನ ಚಿಮ್ಮನಕಟ್ಟಿ, ಉಮೇಶ್ ಮೇಟಿ, ವಿಧಾನ ಪರಿಷತ್ ಸದಸ್ಯರಾದ ಎಂ.ಆರ್.ಸೀತಾರಾಮ್, ಮಳವಳ್ಳಿ ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.

Tags

SiddaramaiahParameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X