ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೃಪಾ ಆಳ್ವಾ ನ್ಯಾಯಾಲಯಕ್ಕೆ ಅರ್ಜಿ

ಕೃಪಾ ಆಳ್ವಾ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಈಗಾಗಲೇ ಇದೇ ಪ್ರಕರಣದಲ್ಲಿ ರಾಕೇಶ್ ಶೆಟ್ಟಿ, ಚಂದನ್, ಮೋಹನ್ ಗೌಡ ಹಾಗೂ ಪ್ರಜ್ವಲ್ ಪ್ರಸಾದ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಇಂದು ಜಾಮೀನು ಅರ್ಜಿಗಳ ವಿಚಾರಣೆ ನಡೆಯಲಿದೆ.
ಇದೀಗ ಕೃಪಾ ಆಳ್ವಾ ಅವರೂ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದರಿಂದ, ಅವರ ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಇಂದು ನಡೆಸುವ ಸಾಧ್ಯತೆಯಿದೆ.
ಪ್ರಕರಣದ ವಿಚಾರಣೆಗೆ ಕೃಪಾ ಆಳ್ವಾ ಅವರು ಈ ಹಿಂದೆ ಖುದ್ದಾಗಿ ಹಾಜರಾಗಿದ್ದರು. ಬಳಿಕ ಅವರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಅಲ್ಲದೆ, ಕೆಪಿಸಿಸಿ ನೀಡಿದ್ದ ನೋಟಿಸ್ಗೂ ಅವರು ಉತ್ತರಿಸಿರಲಿಲ್ಲ ಎಂದು ಹೇಳಲಾಗಿದೆ. ಇದೀಗ ಬಂಧನದ ಭೀತಿಯಿಂದ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.




