ಸಿದ್ದರಾಮಯ್ಯ 'ಸ್ಟಿಂಗ್' ವಿಡಿಯೊ ಪ್ರಕರಣ : ಜೆಡಿಎಸ್ ಸಾಮಾಜಿಕ ಮಾಧ್ಯಮ ಘಟಕದ ಸದಸ್ಯ ಮೋಹನ್ ಗೌಡಗೆ ಸಿಸಿಬಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಉದ್ದೇಶಪೂರ್ವಕವಾಗಿ ಮಾನಹಾನಿ ಮಾಡುವ ಉದ್ದೇಶದಿಂದ ವಿಡಿಯೋ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಘಟಕದ ಸದಸ್ಯ ಮೋಹನ್ ಗೌಡ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಬಿಎನ್ಎಸ್ಎಸ್ ಕಲಂ 94ರ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಮೋಹನ್ ಗೌಡ ಅವರು ಶನಿವಾರ ಸಿಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ತಮ್ಮನ್ನು ಬ್ಲ್ಯಾಕ್ಮೇಲ್ ಮಾಡಲು ಈ ವಿಡಿಯೋ ಸೃಷ್ಟಿಸಲಾಗಿತ್ತು ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
Next Story




